
ಮಡಿಕೇರಿ ಫೆ.7 NEWS DESK : ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆಬ್ರವರಿ, 12 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತಲಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಡ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂರವಾಣಿ ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.









