Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನವದೆಹಲಿ ವಿಧಾನಸಭೆ ಚುನಾವಣೆ : ಮೈಸೂರು ಸಂಸದರು ಪ್ರಚಾರ ನಡೆಸಿದ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ
ಇತ್ತೀಚಿನ ಸುದ್ದಿಗಳು ಕರ್ನಾಟಕ

ನವದೆಹಲಿ ವಿಧಾನಸಭೆ ಚುನಾವಣೆ : ಮೈಸೂರು ಸಂಸದರು ಪ್ರಚಾರ ನಡೆಸಿದ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ

ಫೆಬ್ರವರಿ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು ಫೆ.8 NEWS DESK : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಇದರೊಂದಿಗೆ ಎರಡೂವರೆ ದಶಕಗಳ ಬಳಿಕ ದಿಲ್ಲಿ ಗದ್ದುಗೆ ಮೇಲೆ ಕಮಲ ಅರಳಿದೆ. ಈ ಬಾರಿಯ ನವದೆಹಲಿ ಚುನಾವಣೆಗೂ ಮತ್ತು ಮೈಸೂರಿಗೂ ಅವಿನಾಭಾವ ಸಂಬಂಧ ಕೂಡ ಇದೆ. ಏಕೆಂದರೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಡೆಸಿದ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಯದುವೀರ್ ಒಡೆಯರ್ ಅವರು ಕಳೆದ ವಾರ ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ತೆರಳಿದ ಸಂದರ್ಭದಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ್ದರು.

ಫೆಬ್ರವರಿ ಎರಡರಂದು ಪ್ರಚಾರ ::  ನವದೆಹಲಿಯ ಪ್ರತಿಷ್ಠಿತ ರೊಹ್ತಾಸ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಜಿತೇಂದ್ರ ಮಹಾಜನ್ ಅವರ ಪರ ಪ್ರಚಾರ ನಡೆಸಿದ್ದರು. ಈ ವಿಧಾನಸಭೆ ಮತಕ್ಷೇತ್ರದ ಅಶೋಕ ಮಂಡಲದಲ್ಲಿ ಯದುವೀರ್ ಕಳೆದ ಫೆಬ್ರವರಿ ಎರಡರಂದು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದರು. ಈ ಮತ ಎಣಿಕೆಯಲ್ಲಿ ಜಿತೇಂದ್ರ ಮಹಾಜನ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ಜಿತೇಂದ್ರ ಮಹಾಜನ್ 82 ಸಾವಿರಕ್ಕೂ ಹೆಚ್ಚು ಮತಗಳನ್ನು ಸಂಪಾದಿಸಿದ್ದಾರೆ. ಈ ಕ್ಷೇತ್ರದಲ್ಲಿ ಮಹಾಜನ್ ಸಮೀಪ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಸರಿತಾ ಸಿಂಗ್ 54 ಸಾವಿರಕ್ಕೂ ಹೆಚ್ಚು ಮತಗಳನ್ನು ಮಾತ್ರ ಪಡೆದು ಸೋಲನುಭವಿಸಿದ್ದಾರೆ. ಮೈಸೂರು ಸಂಸದರು ಬಿಜೆಪಿ ಪರವಾಗಿ ನವದೆಹಲಿಯಲ್ಲಿ ನಡೆಸಿದ ಪ್ರಚಾರ ಅತ್ಯಂತ ಯಶಸ್ವಿಯಾಗಿದೆ.

ಬಿಜೆಪಿ ಪರ ನಿಂತ “ಆಮ್ ಆದ್ಮಿ ::  ನವದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಅಭೂತಪೂರ್ವ ಗೆಲುವು ಸಾಧಿಸಿರುವುದು ನಿಜಕ್ಕೂ ಖುಷಿ ತಂದಿದೆ. ಸುಮಾರು ಎರಡೂವರೆ ದಶಕಗಳ ಬಳಿಕ ನಮ್ಮ ಪಕ್ಷ ಈಗ ಅಧಿಕಾರದ ಗದ್ದುಗೆ ಹಿಡಿದಿದೆ. ಇದಕ್ಕೆ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಈ ಬಾರಿ ನಾನು ಮತ ಪ್ರಚಾರ ನಡೆಸಿದ ಸಂದರ್ಭದಲ್ಲಿ ಕೆಲವು ಗಮನಾರ್ಹ ವಿಷಯಗಳು ನನಗೆ ಮನವರಿಕೆಯಾಯಿತು. ನವದೆಹಲಿಯಲ್ಲಿ ಮಧ್ಯಮ ವರ್ಗದವರು ಸಂಪೂರ್ಣವಾಗಿ ಬಿಜೆಪಿ ಪರವಾಗಿ ದನಿ ಎತ್ತುತ್ತಿರುವುದರಿಂದು ಕಂಡುಬಂದಿತ್ತು. ನಿಜ ಹೇಳಬೇಕೆಂದರೆ “ಆಮ್ ಆದ್ಮಿ”ಗಳು ಬಿಜೆಪಿ ಪರವಾಗಿ ನಿಂತಿದ್ದರಿಂದಲೇ ಬಹುಮತ ದಕ್ಕಲು ಸಹಕಾರಿಯಾಯಿತು ಎಂದು ತಿಳಿಸಿದ್ದಾರೆ. ಇದಲ್ಲದೇ ಎಲ್ಲ ಕೋಮಿನವರು ಕಮಲ ಪಕ್ಷದ ಪರ ಕೈ ಎತ್ತಿದ್ದಾರೆ. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತ ಹಾಗೂ ಬಿಜೆಪಿ ಪರವಾಗಿ ದೇಶದಲ್ಲಿ ಇರುವ ವಿಶ್ವಾಸವೇ ನಮ್ಮ ಜಯಭೇರಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.