Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯಿಂದ ಧರಣಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಾ.ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯಿಂದ ಧರಣಿ*

ಫೆಬ್ರವರಿ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.10 NEWS DESK : ಮಡಿಕೇರಿ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಕೆಲವೇ ಕೆಲವು ಮಂದಿಯ ಹಿಡಿತದಲ್ಲಿದ್ದು, ಅದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ಶಾಖೆಯ ಅಧೀನಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ದಲಿತಪರ ಸಂಘಟನೆಗಳು ಭವನದ ಎದುರು ಧರಣಿ ನಡೆಸಿದವು. ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ದಲಿತ ಸಂಘಟನೆಗಳ ಮುಖಂಡರು ಮತ್ತು ಸದಸ್ಯರು ಧರಣಿ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್ ದಲಿತ ಸಂಘರ್ಷ ಸಮಿತಿಗಳು 1985ರಿಂದಲೇ ಡಾ.ಅಂಬೇಡ್ಕರ್ ಭವನಕ್ಕಾಗಿ ನಡೆಸಿದ ಹೋರಾಟದ ಹಿನ್ನೆಲೆ 1991ರಲ್ಲಿ ಸರ್ಕಾರ ಸುದರ್ಶನ ವೃತ್ತದ ಬಳಿ ಜಾಗವನ್ನು ಮಂಜೂರು ಮಾಡಿಕೊಟ್ಟಿತು. ಆ ಸಂದರ್ಭ ಭವನ ನಿರ್ಮಾಣಕ್ಕಾಗಿ ಡಾ.ನಾಗರಾಜ್ ಅಧ್ಯಕ್ಷರಾಗಿದ್ದ ಸಮಿತಿಯೊಂದನ್ನು ರಚಿಸಿಕೊಳ್ಳಲಾಯಿತು. ಆ ಸಮಿತಿಯಲ್ಲಿ ಜಿಲ್ಲೆಯ ದಲಿತ ಸಂಘಟನೆಗಳ ಪ್ರಮುಖರು ಇದ್ದರು. ಆ ಹಂತದಲ್ಲಿ ದಾನಿಗಳ ಸಹಕಾರ, ಲಾಟರಿ ಟಿಕೆಟ್ ಮೂಲಕ ಹಣವನ್ನು ಸಂಗ್ರಹಿಸಿ ಭವನವನ್ನು ನಿರ್ಮಿಸಲಾಗಿತ್ತು ಎಂದರು. ನಂತರದ ಅವಧಿಯಲ್ಲಿ ಸಮಿತಿಯ ಪದಾಧಿಕಾರಿಗಳು ಬದಲಾದರು, ದಿನ ಕಳೆಯುತ್ತಿದ್ದಂತೆ ದಲಿತ ಸಂಘರ್ಷ ಸಮಿತಿಯ ಪ್ರಮುಖರನ್ನು ಭವನ ಸಮಿತಿಯಿಂದ ಕೈಬಿಡುವ ಕಾರ್ಯ ನಡೆದಿದೆ. ಪ್ರಸ್ತುತ ಸಮಿತಿ ಕೆಲವೇ ಕೆಲವು ಮಂದಿಯ ಹಿಡಿತದಲ್ಲಿದೆ. ಇದರಿಂದ ದಲಿತ ಸಮೂಹಕ್ಕೆ ಅನುಕೂಲಕ್ಕೆಂದು ನಿರ್ಮಿಸಿದ ಭವನ ಕೆಲವೇ ಮಂದಿಗೆ ಸೀಮಿತವಾಗಿದೆ ಎಂದು ಆರೋಪಿಸಿದರು. ಡಾ.ಅಂಬೇಡ್ಕರ್ ಭವನವನ್ನು ಮರಳಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ಶಾಖೆಗೆ ನೀಡಬೇಕೆಂದು ಒತ್ತಾಯಿಸಿದರು. ದಲಿತ ಮುಖಂಡ ಹಾಗೂ ಸಿಪಿಐಎಂಎಲ್ ಪಕ್ಷದ ಪ್ರಮುಖ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ದಲಿತ ಸಮೂಹದ ಪ್ರಯೋಜನಕ್ಕೆಂದು ನಿರ್ಮಿಸಲ್ಪಟ್ಟ ಡಾ.ಅಂಬೇಡ್ಕರ್ ಭವನ ಕೆಲವೇ ವ್ಯಕ್ತಿಗಳಿಗೆ ಸೀಮಿತವಾಗಬಾರದು. ಇದರ ಪ್ರಯೋಜನ ಎಲ್ಲಾ ದಲಿತರಿಗೆ ದೊರಕಬೇಕೆನ್ನುವ ಕಾರಣದಿಂದ ಹೋರಾಟವನ್ನು ನಡೆಸಲಾಗುತ್ತಿದ್ದು, ಭವನವನ್ನು ಪಡೆದೇ ತೀರುವುದಾಗಿ ಹೇಳಿದರು. ಬಿಎಸ್‍ಪಿ ಜಿಲ್ಲಾಧ್ಯಕ್ಷ ದಿವಿನ್ ಮಾತನಾಡಿದರು.
:: ಬೇಡಿಕೆಗಳು :: 
ಡಾ.ಅಂಬೇಡ್ಕರ್ ಭವನಕ್ಕೆ ಸಂಬಂಧಿಸಿದಂತೆ ನೂತನ ಸಮಿತಿಯನ್ನು ರಚಿಸಬೇಕು ಮತ್ತು ನೂತನ ಸಮಿತಿಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ದಲಿತ ಮುಖಂಡರನ್ನು ಸೇರ್ಪಡೆ ಮಾಡಬೇಕು. ವಿವಾದ ಬಗೆಹರಿಯುವವರೆಗೆ ಅಂಬೇಡ್ಕರ್ ಭವನದಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯದಂತೆ ನಿರ್ಬಂಧ ವಿಧಿಸಬೇಕು. ಭವನದ ವಿವಾದ ಇತ್ಯರ್ಥವಾಗುವವರೆಗೆ ನಗರಸಭೆ ಅಥವಾ ಜಿಲ್ಲಾಡಳಿತದ ಅಧೀನದಲ್ಲಿ ಇರಬೇಕು. ಅಂಬೇಡ್ಕರ್ ಭವನದ ಗೊಂದಲ ಇತ್ಯರ್ಥವಾದ ಬಳಿಕ ಭವನವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ಶಾಖೆಗೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಹೋರಾಟ ಸಮಿತಿಯ ಉಪಾಧ್ಯಕ್ಷ ಡಿ.ಜೆ.ಈರಪ್ಪ, ಖಜಾಂಚಿ ಹೆಚ್.ಈ.ದೇವರಾಜು, ನಿರ್ದೇಶಕರಾದ ಹೆಚ್.ಎಲ್.ಕುಮಾರ್, ಎ.ಪಿ.ದೀಪಕ್, ಟಿ.ಎನ್.ಗೋವಿಂದಪ್ಪ, ಹೆಚ್.ಎಂ.ಸೋಮಪ್ಪ, ಜಯಪ್ಪ ಹಾನಗಲ್, ಗಾಯತ್ರಿ ನರಸಿಂಹ, ಮೋಹನ್ ಮೌರ್ಯ, ಹೆಚ್.ಎಸ್.ಪ್ರೇಂ ಕುಮಾರ್, ಹೆಚ್.ಸಿ.ಸತೀಶ್, ಟಿ.ಈ.ಸುರೇಶ್, ಸಿಂಗಿ ಸತೀಶ್ ಸೇರಿದಂತೆ ಹಲವು ಪ್ರಮುಖರು ಧರಣಿಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.