Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹುಲುಸೆ ಬಸವೇಶ್ವರ ದೇವಾಲಯ ಗೋಪುರ ಕಳಶ ಪ್ರತಿಷ್ಠಾಪನೆ : ದೇವಾಲಯಗಳು ಸತ್ಸಂಗ ಸದಾಚಾರಗಳ ಆಲಯಗಳು : ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹುಲುಸೆ ಬಸವೇಶ್ವರ ದೇವಾಲಯ ಗೋಪುರ ಕಳಶ ಪ್ರತಿಷ್ಠಾಪನೆ : ದೇವಾಲಯಗಳು ಸತ್ಸಂಗ ಸದಾಚಾರಗಳ ಆಲಯಗಳು : ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ*

ಫೆಬ್ರವರಿ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.10 NEWS DESK : ಹುಲುಸೆ ಗ್ರಾಮದ ಬಸವೇಶ್ವರ ದೇವಾಲಯದ ವಿಮಾನ ಗೋಪುರ ಕಳಶ ಪ್ರತಿಷ್ಠಾಪನಾ ಮಹಾ ಪೂಜೋತ್ಸವ ನೆರವೇರಿತು. ಶನಿವಾರಸಂತೆ ಮನೇಹಳ್ಳಿ ತಪೋಕ್ಷೇತ್ರದ ಪೀಠಾಧಿಪತಿ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ಜರುಗಿದ ಪೂಜೋತ್ಸವದಲ್ಲಿ ಗ್ರಾಮದ ನೂರಾರು ಮಹಿಳೆಯರು ಗ್ರಾಮದ ಪೂರ್ವ ದಿಕ್ಕಿನಲ್ಲಿ ಹರಿದಿರುವ ಕಾವೇರಿ ನದಿಯಲ್ಲಿ ಗಂಗಾ ಪೂಜೆ ನೆರವೇರಿಸಿ ಮೆರವಣಿಗೆಯಲ್ಲಿ ತಂದ ಪವಿತ್ರ ಗಂಗೆಯನ್ನು ನೂತನ ವಿಮಾನ ಗೋಪುರಕ್ಕೆ ಪ್ರೋಕ್ಷಣೆ ಗೈದರು. ದೇವಾಲಯದಲ್ಲಿ ಮುಂಜಾನೆಯ ಬ್ರಾಹ್ಮೀ ಮುಹೂರ್ತದಲ್ಲಿ ಪಂಚಾಮೃತ ಅಭಿಷೇಕ, ಮಹಾರುದ್ರಾಭಿಷೇಕ ನೆರವೇರಿತು. ನಂತರ ಮಂತ್ರ ಪುಷ್ಪಗಳೊಂದಿಗೆ ಮಹಾಮಂಗಳಾರತಿ ನೆರವೇರಿಸಲಾಯಿತು. ಗುಮ್ಮನಕೊಲ್ಲಿ ಬಸವೇಶ್ವರ ದೇವಾಲಯದ ಅರ್ಚಕ ಚಂದ್ರಶೇಖರ ಹಿರೇಮಠ ತಂಡ ಪೂಜಾ ಕಾರ್ಯ ನೆರವೇರಿಸಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಶನಿವಾರಸಂತೆ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ, ಪ್ರತಿಯೊಬ್ಬರು ಸದಾ ಕಾಲ ಸತ್ಕಾರ್ಯಗಳನ್ನು ಮಾಡುವ ಮೂಲಕ ಸತ್ಪಾತ್ರರಾಗಬೇಕಿದೆ. ದೇವಾಲಯಗಳು, ಮಠ, ಮಂದಿರಗಳು ಸತ್ಸಂಗದ ಆಲಯಗಳು, ನಿರಾಕಾರನಾದ ಪರಮಾತ್ಮನನ್ನು ಕಾಣುವ ಪವಿತ್ರ ಕ್ಷೇತ್ರಗಳು, ಇಷ್ಟಲಿಂಗ ಪೂಜೆ ಮಾಡುವ ಮೂಲಕ ವಿಭೂತಿ ಧಾರಣೆ ಮಾಡಿಕೊಂಡು ವೀರಶೈವ ಲಿಂಗಾಯಿತ ಪರಂಪರೆಯನ್ನು ಸಂರಕ್ಷಿಸಲು ಕರೆ ನೀಡಿದರು.
ನಮ್ಮ ದೇವಾಲಯಗಳು, ಊರಿನ ರಸ್ತೆ, ಚರಂಡಿಗಳ ಸ್ವಚ್ಛತೆಯ ಮೂಲಕ ಉತ್ತಮ ಆರೋಗ್ಯವಂತರಾಗಲು ಶ್ರೀಗಳು ಸಲಹೆ ನೀಡಿದರು. ನಿವೃತ್ತ ಪ್ರಾಂಶುಪಾಲ ಸಿ.ಎಂ.ಧರ್ಮಪ್ಪ ಮಾತನಾಡಿ, ಮನುಷ್ಯ ಬಾಹ್ಯ ಶುದ್ದಿಗಿಂತ ಅಂತರಂಗ ಶುದ್ದೀಕರಣಕ್ಕೆ ಹೆಚ್ಚು ಒತ್ತು ನೀಡಬೇಕಿದೆ. ಬಸವೇಶ್ವರರ ಕಲಬೇಡ ಕೊಲಬೇಡ ಎಂಬ ಸಪ್ತಸೂತ್ರವನ್ನು ಅನುಸರಿಸಿದರೆ ಮಾನವ ಜೀವನವೇ ಪರಮ ಪಾವನವಾಗುತ್ತದೆ. ಲಿಂಗಾಯಿತರು ತಮ್ಮ ಕೊರಳಲ್ಲಿ ಲಿಂಗವನ್ನು ಆಯಿತ ಮಾಡಿಕೊಳ್ಳುವ ಮೂಲಕ ನಮ್ಮ ವೀರಶೈವ ಲಿಂಗಾಯಿತ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಗೌರವಿಸಿ ಕಾಪಾಡಿಕೊಳ್ಳಬೇಕೆಂದು ಧರ್ಮಪ್ಪ ಕರೆ ನೀಡಿದರು. ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶೀರ್ವಚನ ನೀಡುತ್ತಾ, ಆಧುನಿಕತೆ ಹೆಚ್ಚಾದಂತೆ ಜನರಲ್ಲಿ ದೈವತ್ವ ಮರೆಯಾಗುತ್ತಿದೆ.ಗುರು ಹಿರಿಯರ ಮೇಲಿನ ಶ್ರದ್ಧೆ ಕ್ಷೀಣವಾಗುತ್ತಿದೆ. ದೇವಾಲಯಗಳು ಮನುಷ್ಯನಿಗೆ ಬೇಕಾದ ಶಾಂತಿ ನೆಮ್ಮದಿಯ ತಾಣಗಳು. ತಾಯಂದಿರು ಮಕ್ಕಳಿಗೆ ಎಳೆಯ ಹಂತದಿಂದಲೇ ಉತ್ತಮ ಸಂಸ್ಕಾರಗಳನ್ನು ರೂಢಿಸಬೇಕು. ಮಾನವೀಯತೆ ಹಾಗೂ ಉತ್ತಮ ಸಂಸ್ಕಾರಕ್ಕಿರುವ ಮೌಲ್ಯಕ್ಕೆ ಬೆಲೆ ಕಟ್ಟಲಾಗದು ಎಂದು ಸದಾಶಿವ ಸ್ವಾಮೀಜಿ ಹೇಳಿದರು. ಕೆ.ಆರ್.ನಗರದ ಅರಕೆರೆ ವಿರಕ್ತ ಮಠದ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಹೆಚ್.ವಿ.ಶಿವಪ್ಪ ಮಾತನಾಡಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ನಿವೃತ್ತ ಪ್ರಾಧ್ಯಾಪಕಿ ಗಿರಿಜಮ್ಮ, ಹುಲುಸೆ ಗ್ರಾಮದ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ಎನ್.ಶಿವನಂಜಪ್ಪ, ಕಾರ್ಯದರ್ಶಿ ಹೆಚ್.ಎನ್.ಶಂಕರಾಚಾರಿ, ಸದಸ್ಯರಾದ ಹೆಚ್.ಬಿ.ಸೋಮಶೇಖರ, ಹೆಚ್.ಕೆ.ರಾಜಪ್ಪ, ಶಿವರುದ್ರಪ್ಪ, ನಾಗಪ್ಪ, ಹೆಚ್.ಸಿ.ರವಿ, ಮಹದೇವಪ್ಪ, ನಂಜುಂಡ, ಹೆಚ್.ಎಸ್.ಬಸಪ್ಪ, ಸದಾಶಿವ,ರವಿ, ಚಂದ್ರಪ್ಪ, ಸೋಮಾಚಾರಿ, ರಾಜ, ದಿನೇಶ ಮೊದಲಾದವರಿದ್ದರು. ಹರ್ಷಿತಾ ಲಿಂಗೇಶ್ ಪ್ರಾರ್ಥಿಸಿದರು. ನಿವೃತ್ತ ಉಪನ್ಯಾಸಕ ಕಪನಪ್ಪ ಸ್ವಾಗತಿಸಿದರು. ಶಿಕ್ಷಕ ಬಸವರಾಜು ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ಪತ್ರಕರ್ತರ ಸ್ನೇಹಿತರ ಬಳಗ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ…

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.