Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಕರ್ತವ್ಯ ಸ್ಥಗಿತಗೊಳಿಸಿ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಕರ್ತವ್ಯ ಸ್ಥಗಿತಗೊಳಿಸಿ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ*

ಫೆಬ್ರವರಿ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.10 NEWS DESK : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘ 2ನೇ ಹಂತದ ಪ್ರತಿಭಟನೆ ನಡೆಸಿತು. ಕೆಲಸ ಸ್ಥಗಿತಗೊಳಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕಪ್ಪು ಪಟ್ಟಿಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳು ಮೂಲಭೂತ ಸೌಲಭ್ಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷೆ ಅಕ್ಷತಾ ಬಿ.ಶೆಟ್ಟಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಹಾಗೂ ಸದಸ್ಯರ ಒಪ್ಪಿಗೆಯಂತೆ ಸರ್ವಾನುಮತದಿಂದ ರಾಜ್ಯಾದ್ಯಂತ ಮುಷ್ಕರ ನಡೆಸಿದ ಕಾರಣ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಡೆದ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಸರ್ಕಾರ ಈ ವೃಂದದ ನೌಕರರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು. ಇದೀಗ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿದ್ದು, ತಕ್ಷಣವೇ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು, ಅಂತರ್ ಜಿಲ್ಲಾ ವರ್ಗಾವಣೆಯ ಕೆಸಿಎಸ್‍ಆರ್ ನಿಯಮ 16ಎ ಮರುಸ್ಥಾಪಿಸಬೇಕು ಅಥವಾ ಇತರೆ ಎಲ್ಲಾ ಇಲಾಖೆಗಳಲ್ಲಿರುವ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ರಚಿಸಬೇಕು, ಅನುಕಂಪದ ನೇಮಕಾತಿ ಹುದ್ದೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು. ಬೇಡಿಕೆಗಳು ಈಡೇರುವವರೆಗೆ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ಮುಷ್ಕರವನ್ನು ನಡೆಸುವುದಾಗಿ ತಿಳಿಸಿದರು. ಸಂಘದ ಉಪಾಧ್ಯಕ್ಷ ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಸಂತೋಷ ಪಾಟೀಲ್, ಖಜಾಂಚಿ ರವಿಚಂದ್ರ, ತಾಲೂಕು ಅಧ್ಯಕ್ಷರುಗಳಾದ ಸಂದೀಪ್ ಶೆಣೈ ಮಡಿಕೇರಿ, ಕೃಷ್ಣ ವಿರಾಜಪೇಟೆ, ಬಸನಗೌಡ ಪೊನ್ನಂಪೇಟೆ, ಗುರು ದರ್ಶನ್ ಕುಶಾಲನಗರ, ಕರಿಬಸವರಾಜ್ ಸೋಮವಾರಪೇಟೆ ಸೇರಿದಂತೆ ಮತ್ತಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.