
ವಿರಾಜಪೇಟೆ ಫೆ.11 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಿರಾಜಪೇಟೆ ವತಿಯಿಂದ ಬಿರುನಾಣಿ ಮರೆನಾಡು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ಬೆಂಚ್ ಡೆಸ್ಕ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಶೀಕ್ ಕಾವೇರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಪ್ತ ಸಮಾಲೋಚಕಿ ರಮ್ಯಾ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶ, ಪ್ರೌಢಾವಸ್ಥೆಯ ಮಕ್ಕಳು ಸಾಮಾಜಿಕವಾಗಿ, ಮಾನಸಿಕವಾಗಿ ಹೇಗೆ ಬಲಿಷ್ಟರಾಗಿರಬೇಕು, ದುಶ್ಚಟಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಾಹಿತಿ ನೀಡಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು. ಕಾರ್ಯಕ್ರಮದಲ್ಲಿ ಮರೆನಾಡು ಪ್ರಾಢ ಶಾಲೆಯ ಗೌರವ ಕಾರ್ಯದರ್ಶಿ ಬೇಬಿ ನಂಜಮ್ಮ, ಶಾಲಾ ಆಡಳಿತ ಮಂಡಳಿ ನಿರ್ದೇಶಕರುಗಳಾದ ಸುನಂದ, ಬೋಪಣ್ಣ, ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಬಾನಂಗಡ ಅರುಣ್, ಗ್ರಾಮ ಪಂಚಾಯ್ತಿ ಸದಸ್ಯರಾದ ಸರಸ್ವತಿ, ಮುಖ್ಯ ಶಿಕ್ಷಕರಾದ, ಕಿಶೋರ್, ಮೇಲ್ವಿಚಾರಕ ನಾಗರಾಜ್, ಕೃಷಿಮೇಲ್ವಿಚಾರಕ ವಸಂತ್, ದೇಚಮ್ಮ, ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. 10 ಜೊತೆ ಬೆಂಚ್ ಡೆಸ್ಕ್ ವಿತರಣೆ ಮಾಡಲಾಯಿತು.









