Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ಅಂಬೇಡ್ಕರ್ ಭವನ ವಿವಾದ : ಬ್ಯಾನರ್ ಗೆ ಬೆಂಕಿ : ದಲಿತ ಸಂಘರ್ಷ ಸಮಿತಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಾ.ಅಂಬೇಡ್ಕರ್ ಭವನ ವಿವಾದ : ಬ್ಯಾನರ್ ಗೆ ಬೆಂಕಿ : ದಲಿತ ಸಂಘರ್ಷ ಸಮಿತಿ ಅಸಮಾಧಾನ*

ಫೆಬ್ರವರಿ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.11 NEWS DESK : ಡಾ.ಬಿ.ಆರ್.ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಎದುರು ಸೋಮವಾರ ನಡೆದ ಧರಣಿಯ ಸಂದರ್ಭ ಅಳವಡಿಸಲಾಗಿದ್ದ ಬ್ಯಾನರ್ ಗಳಿಗೆ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟ ಸಮಿತಿಯ ಪ್ರಮುಖರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಬ್ಯಾನರ್ ಗಳಿಗೆ ಬೆಂಕಿ ಹಚ್ಚಿರುವ ಕುರಿತು ಮಂಗಳವಾರ ಬೆಳಿಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಹೋರಾಟ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್, ಪ್ರಮುಖರಾದ ಮೋಹನ್ ಮೌರ್ಯ, ಹೆಚ್.ಸಿ.ಸತೀಶ್, ಎ.ಪಿ.ದೀಪಕ್, ಕುಮಾರ್ ಮತ್ತಿತರರು ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕೆಲ ಕಾಲ ಪ್ರತಿಭಟನೆ ನಡೆಸಿದರು.
::: ತಕ್ಷಣ ಬಂಧಿಸಿ ::: ಅಧ್ಯಕ್ಷ ಹೆಚ್.ಎಲ್.ದಿವಾಕರ್ ಮಾತನಾಡಿ, ಅಂಬೇಡ್ಕರ್ ಭವನ ಕೆಲವೇ ಕೆಲವು ಮಂದಿಯ ಹಿಡಿತದಲ್ಲಿದೆ. ಇದನ್ನು ಕರ್ನಾಟಕ ದಲಿತ ಸಂಷರ್ಷ ಸಮಿತಿಯ ಮಡಿಕೇರಿ ಶಾಖೆಗೆ ನೀಡಬೇಕೆನ್ನುವ ಬೇಡಿಕೆಯೊಂದಿಗೆ ಹೋರಾಟಕ್ಕಿಳಿದಿದ್ದೇವೆ. ಇದನ್ನು ಸಹಿಸದವರು ನನ್ನ ವಿರುದ್ಧ ವೈಯಕ್ತಿಕ ಆರೋಪಗಳನ್ನು ಮಾಡುತ್ತಿದ್ದಾರೆ. ಹೋರಾಟಕ್ಕೆ ಬಳಸಿದ ಬ್ಯಾನರ್‍ಗೆ ಬೆಂಕಿ ಹಚ್ಚಿದ್ದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗುತ್ತದೆ. ದುಷ್ಕೃತ್ಯವೆಸಗಿದವರನ್ನು ಇಪ್ಪತ್ತನಾಲ್ಕು ಗಂಟೆಗಳ ಒಳಗಾಗಿ ಬಂಧಿಸಲು ಪೊಲೀಸರು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
::: ವಾಗ್ವಾದ ::: ಹೋರಾಟ ಸಮಿತಿಯ ಪ್ರಮುಖ ಹಾಗೂ ನಗರಸಭಾ ಸದಸ್ಯ ಹೆಚ್.ಸಿ.ಸತೀಶ್ ಬ್ಯಾನರ್ ಗೆ ಬೆಂಕಿ ಹಚ್ಚಿ ನಾಶಪಡಿಸಿರುವುದಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವೆಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದ ನಗರ ಠಾಣಾ ಪೊಲೀಸ್ ವೃತ್ತ ನಿರೀಕ್ಷಕ ಪಿ.ಕೆ.ರಾಜು ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಪರಸ್ಪರ ಮಾತಿನ ಚಕಮಕಿ ನಡೆಯಿತು.

::: ಕಾನೂನು ಕ್ರಮ ::: ದಲಿತ ಸಮುದಾಯದ ಅನುಕೂಲಕ್ಕಾಗಿ ಡಾ.ಅಂಬೇಡ್ಕರ್ ಭವನವನ್ನು ಅತ್ಯಂತ ಪರಿಶ್ರಮದಿಂದ ನಿರ್ಮಿಸಿದ್ದೇವೆ. ಆದರೆ ಇದೀಗ ನನ್ನ ವರ್ಚಸ್ಸು ಕುಂದಿಸಲು ನಿರಾಧಾರವಾದ ಆರೋಪ ಹೊರಿಸಲಾಗುತ್ತಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಡಾ.ಅಂಬೇಡ್ಕರ್ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ಹೆಚ್.ಎಂ.ನಂದ ಕುಮಾರ್ ತಿಳಿಸಿದರು. ಭವನದ ಗೇಟ್‍ಗೆ ಬ್ಯಾನರ್ ಅಳವಡಿಸಲು ಅನುಮತಿ ನೀಡಿದವರು ಯಾರೆಂದು ಪ್ರಶ್ನಿಸಿದ ನಂದ ಕುಮಾರ್, ಬ್ಯಾನರ್‍ಗೆ ಬೆಂಕಿ ಹಚ್ಚಿದವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ನಮ್ಮ ಅಭ್ಯಂತರವಿಲ್ಲವೆಂದು ಸ್ಪಷ್ಟಪಡಿಸಿದರು. ಅಶೋಕಪುರದ ಜನರ ಸಹಕಾರ, ಶಾಸಕರು, ಸರಕಾರದ ನೆರವು ಮತ್ತು ನಮ್ಮ ಪರಿಶ್ರಮದಿಂದ ಡಾ.ಅಂಬೇಡ್ಕರ್ ಭವನ ನಿರ್ಮಿಸಲಾಗಿದೆ. ಭವನವನ್ನು ವಶಕ್ಕೆ ಕೇಳುತ್ತಿರುವವರ ಶ್ರಮ ಸ್ವಲ್ಪವೂ ಇಲ್ಲವೆಂದ ಅವರು, ನನ್ನ ವಿರುದ್ಧ ಆರೋಪ ಮಾಡುತ್ತಿರುವವರು ದುರುಪಯೋಗ ಪಡಿಸಿರುವುದನ್ನು ಸಾಬೀತು ಪಡಿಸಲಿ ಎಂದು ಸವಾಲೆಸೆದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.