Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಸಾಲದ ಹೊರೆ ತಗ್ಗಿಸಲು ಪ್ರಯತ್ನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಸಾಲದ ಹೊರೆ ತಗ್ಗಿಸಲು ಪ್ರಯತ್ನ

ಫೆಬ್ರವರಿ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.11 NEWS DESK : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘವನ್ನು ಸಾಲದ ಹೊರೆಯಿಂದ ಹೊರ ತರುವ ನಿಟ್ಟಿನಲ್ಲಿ ತನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿರುವುದಾಗಿ ಸಂಘದ ಮಾಜಿ ಅಧ್ಯಕ್ಷ ಎಂ.ಬಿ.ದೇವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಕೆಲವು ಸದಸ್ಯರು ನನ್ನ ಅಧಿಕಾರದ ಅವಧಿಯಲ್ಲಿ ಏನೂ ಮಾಡಿಲ್ಲವೆಂದು ಆರೋಪಿಸುತ್ತಿರುವುದು ಸಮರ್ಥನೀಯವಲ್ಲ. ತಾನು ಸಂಘದಲ್ಲಿ ಸುಮಾರು 17 ವರ್ಷಗಳ ಕಾಲ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ತನ್ನ ಅಧಿಕಾರದ ಆರಂಭಿಕ ಅವಧಿಯಲ್ಲಿ ಸಂಘ ರೂ.25 ಕೋಟಿಯಷ್ಟು ಸಾಲದ ಹೊರೆಯನ್ನು ಹೊಂದಿತ್ತಾದರೆ, ಇದನ್ನು ಹಲವಾರು ಉಪ ಕ್ರಮಗಳೊಂದಿಗೆ 12 ಕೋಟಿ ರೂ.ಗಳಿಗೆ ಇಳಿಸಲಾಗಿದೆ ಮತ್ತು ಸಂಘವನ್ನು ಪ್ರಗತಿಯ ಪಥದತ್ತ ತಂದು ನಿಲ್ಲಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು. ನಾನು ಅಧ್ಯಕ್ಷನಾಗಿ ಅಧಿಕಾರಕ್ಕೆ ಬರುವ ಸಂದರ್ಭ ಸಂಘಕ್ಕೆ ಸೇರಿದ ಹುಣಸೂರು, ಹೆಬ್ಬಾಲೆ ಕ್ಯೂರಿಂಗ್ ವಕ್ರ್ಸ್ ಮತ್ತು ಅದರ ಜಾಗ ಪಾಳು ಬಿದ್ದಿತ್ತು. ಇವುಗಳನ್ನಿಂದು ಪುನಶ್ಚೇತನಗೊಳಿಸಿ, ಕಾಫಿ ಕ್ಯೂರಿಂಗ್‍ಗೆ ಹೊಸ ಯಂತ್ರಗಳ ಅಳವಡಿಕೆ ಕಾರ್ಯ ಮಾಡಲಾಗಿದೆ. ಪೆಟ್ರೋಲ್ ಬಂಕ್‍ಗಳನ್ನು ತೆರೆದು ವಹಿವಾಟನ್ನು ಮಾಡಲಾಗುತ್ತಿದೆ. ಈ ಹಿಂದೆ ಸಂಘದ ಸಿಬ್ಬಂದಿಗಳಿಗೆ ವೇತನ ಪಾವತಿಯೇ ಸಾಧ್ಯವಾಗದ ಸ್ಥಿತಿ ಇತ್ತಾದರೆ, ಪ್ರಸ್ತುತ ಹಳೆಯ ಸಾಲವನ್ನು ಹೊರತು ಪಡಿಸಿದರೆ ಇತ್ತೀಚಿನ ವರ್ಷಗಳಲ್ಲಿ ಸಂಘ ಲಾಭದಲ್ಲೆ ಮುನ್ನಡೆಯುತ್ತಿರುವುದಾಗಿ ಎಂ.ಬಿ.ದೇವಯ್ಯ ತಿಳಿಸಿದರು. ಸಂಘಕ್ಕೆ ಹಿರಿಯರು ಮಾಡಿ ಕೊಟ್ಟಿರುವ ಭಾರೀ ಬೆಲೆ ಬಾಳುವ ಸ್ಥಿರಾಸ್ಥಿಗಳು ಹುಣಸೂರು, ಹೆಬ್ಬಾಲೆಗಳಲ್ಲಿ ಇದೆ. ಈ ಹಿಂದೆ ಇದರಲ್ಲಿನ ಒಂದಷ್ಟು ಜಾಗವನ್ನು ಮಾರಾಟ ಮಾಡಿ, ಸಾಲದಿಂದ ಮುಕ್ತರಾಗುವ ಪ್ರಯತ್ನ ನಡೆಯಿತಾದರು, ಅಷ್ಟು ದೊಡ್ಡ ಮಟ್ಟದ ಹಣವನ್ನು ನೀಡಿ ಖರೀದಿಸಲು ಯಾರೂ ಮುಂದೆ ಬಾರಲಿಲ್ಲ. ಈ ಹಿನ್ನೆಲೆಯಲ್ಲಿ ಅವುಗಳ ಮಾರಾಟ ಸಾಧ್ಯವಾಗಿಲ್ಲ. ಇರುವ ಸ್ಥಿರಾಸ್ಥಿಗಳ ಮಾರಾಟದಿಂದಲೆ ಎಲ್ಲಾ ಸಮಸ್ಯೆಗಳಿಗು ಪರಿಹಾರ ದೊರಕಿಬಿಡುವುದಿಲ್ಲವೆಂದು ಹೇಳಿದರು. ಸಂಘ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದ ಹಂತಗಳಲ್ಲಿ ಯಾವುದೇ ಸರ್ಕಾರಗಳು ಸಂಘಕ್ಕೆ ಅಗತ್ಯ ನೆರವನ್ನು ಒದಗಿಸಲಿಲ್ಲ. ಭಾರೀ ಪ್ರಮಾಣದ ಸಾಲದ ಹಿನ್ನೆಲೆಯಲ್ಲಿ ಮತ್ತೆ ಸಾಲ ಮಾಡುವ ಸಾಧ್ಯತೆಗಳು ಸಂಘಕ್ಕಿರಲಿಲ್ಲ. ಇಷ್ಟೆಲ್ಲ ಸಂಕಷ್ಟಗಳ ನಡುವೆಯೂ ಸಂಘವನ್ನು ಸಾಕಷ್ಟು ಪರಿಶ್ರಮದಿಂದ ಅಭಿವೃದ್ಧಿಯ ಪಥದೆಡೆಗೆ ಮುನ್ನಡೆಸುವ ಕಾರ್ಯ ನಡೆದಿದೆ. ಪ್ರಸ್ತುತ ಕೊಡಗು ಜಿಲ್ಲಾ ಸಹಕಾರ ಕೇಂದ್ರ್ರ ಬ್ಯಾಂಕ್‍ಗೆ ಪ್ರತಿ ತಿಂಗಳು 3.11 ಲಕ್ಷ ರೂ.ಗಳನ್ನು ಸಾಲದ ಬಾಪ್ತು ಸಂಘದಿಂದ ಪಾವತಿಸಲಾಗುತ್ತಿದೆ. ಇಷ್ಟೆಲ್ಲ ಶ್ರಮದಿಂದ ನಡೆಸಿರುವ ಕಾರ್ಯಗಳನ್ನು ಬದಿಗೆ ಸರಿಸಿ, ಇವರು ಏನನ್ನೂ ಮಾಡಿಲ್ಲವೆನ್ನುವುದು ಸರಿಯಲ್ಲವೆಂದು ಹೇಳಿದರು. ಸಂಘದ ಮಾಜಿ ಉಪಾಧ್ಯಕ್ಷ ಎಸ್.ಬಿ.ಪೊನ್ನಪ್ಪ ಮಾತನಾಡಿ, ಸಂಘದಲ್ಲಿ 6 ಸಾವಿರಕ್ಕೂ ಹೆಚ್ಚಿನ ಸದಸ್ಯರುಗಳಿದ್ದಾರೆ. ನಿಯಮಗಳಂತೆ ಇವರು ಮತದಾನಕ್ಕೆ ಅರ್ಹರಾಗಿರಬೇಕಾದರೆ, ತಮ್ಮ ಷೇರು ಹಣವನ್ನು ಪೂರ್ಣಗೊಳಿಸಬೇಕು, ಕಡ್ಡಾಯವಾಗಿ ವಾರ್ಷಿಕ 2 ಸಾವಿರ ರೂ.ಗಳ ವಹಿವಾಟನ್ನು ಸಂಘದೊಂದಿಗೆ ಮಾಡಬೇಕು ಮತ್ತು ಸಂಘದ ಮಹಾಸಭೆಗಳಿಗೆ ಪಾಲ್ಗೊಳ್ಳುವುದು ಅಗತ್ಯವಾಗಿರುತ್ತದೆ. ಇವುಗಳ ಪಾಲನೆಯಾಗದ ಹಿನ್ನೆಲೆ ಮತದಾರರ ಹಕ್ಕನ್ನು ಬಹುತೇಕ ಸದಸ್ಯರು ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು. ಸಂಘದ ಮಾಜಿ ನಿರ್ದೇಶಕ ನಾಪಂಡ ರವಿ ಕಾಳಪ್ಪ ಮಾತನಾಡಿ, ಸಂಘದ ಹಳೆಯ ಸಾಲವನ್ನು ಹೊರತು ಪಡಿಸಿದಲ್ಲಿ ಪ್ರಸ್ತುತ ಸಂಘ ವಾರ್ಷಿಕ 24 ಲಕ್ಷ ಲಾಭದಲ್ಲಿ ಮುನ್ನಡೆಯುತ್ತಿದೆ ಎಂದರು.
::: ಅವಿರೋಧ ಆಯ್ಕೆ ::: ಸಂಘ ಒಟ್ಟು 15 ನಿರ್ದೇಶಕ ಸ್ಥಾನಗಳನ್ನು ಹೊಂದಿದ್ದು, ಇದರಲ್ಲಿ 11 ಸ್ಥಾನಗಳ ಅವಿರೋಧ ಆಯ್ಕೆಯಾಗಿದೆ. ಮಡಿಕೇರಿ ಸಾಮಾನ್ಯ ಕ್ಷೇತ್ರದ 3 ಸ್ಥಾನ ಮತ್ತು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮೀಸಲು 1 ಸ್ಥಾನಕ್ಕೆ ಫೆ.16 ರಂದು ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಮಾಜಿ ನಿರ್ದೇಶಕ ಮಹೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಭಾಗಮಂಡಲ : ಅ.26 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ

ಅಕ್ಟೋಬರ್ 23, 2026

ಅಹಿಂದ ಬಳಗ ಕೊಡಗು ಜಿಲ್ಲೆ ನೂತನ ಸಮಿತಿ ರಚನೆ : ಅಧ್ಯಕ್ಷರಾಗಿ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಈ.ಸುರೇಶ್ ಆಯ್ಕೆ

ಅಕ್ಟೋಬರ್ 23, 2026

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026

ಅಹಿಂದ ಬಳಗ ಕೊಡಗು ಜಿಲ್ಲೆ ನೂತನ ಸಮಿತಿ ರಚನೆ : ಅಧ್ಯಕ್ಷರಾಗಿ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಈ.ಸುರೇಶ್ ಆಯ್ಕೆ

ಅಕ್ಟೋಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.23 : ಕೊಡಗು ಜಿಲ್ಲೆಯ ಅಹಿಂದ ಸಮುದಾಯದ ಪ್ರಮುಖರು ಹಾಗೂ ಪ್ರಗತಿಪರರು ಸಭೆ ಸೇರಿ ಅಹಿಂದ…

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಸ್ವಚ್ಛತಾ ಅಭಿಯಾನ ನಡೆಯಲಿ: ರಾಜೇಶ್; ಪಾಲಿಬೆಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ; 100ಕ್ಕೂ ಅಧಿಕ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಭಾಗಿ

ಅಕ್ಟೋಬರ್ 23, 2026

ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿ ಪ್ರೊ. ಭಾರತಿ ಹಿರೇಮಠ ಅಧಿಕಾರ ಸ್ವೀಕಾರ

ಅಕ್ಟೋಬರ್ 23, 2026

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.