Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ಕ್ಷಯ ರೋಗದ ಕುರಿತು ಅರಿವು ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ಕ್ಷಯ ರೋಗದ ಕುರಿತು ಅರಿವು ಕಾರ್ಯಾಗಾರ*

ಫೆಬ್ರವರಿ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.12 NEWS DESK :  ಕ್ಷಯ ಮುಕ್ತ ಜಿಲ್ಲೆಯಾಗಿಸುವತ್ತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕ್ಷಯ ರೋಗದ ಕುರಿತು ಅರಿವು ಕಾರ್ಯಾಗಾರ ಜಿ.ಪಂ.ಸಭಾಂಗಣದಲ್ಲಿ ನಡೆಯಿತು. ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕ್ಷಯ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಹಾಗೂ ಜನರು ಸಹಕಾರ ನೀಡುವಂತಾಗಬೇಕು ಎಂದು ತಿಳಿಸಿದರು. ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರರಧ ಡಾ.ಜೋಶ ತೋಮಸ್ ಅವರು ಕಾರ್ಯಕ್ರಮದ ಬಗ್ಗೆ ಮಾತನಾಡಿ ಕ್ಷಯ ರೋಗ ನಿರ್ಮೂಲನೆಗಾಗಿ ಕೈಗೊಂಡ ಕ್ರಮಗಳನ್ನು ಪ್ರಶಂಸಿಸಿ ಕೊಡಗು ಜಿಲ್ಲೆಗೆ ಕಂಚಿನ ಪದಕ ಲಭಿಸುವಂತೆ ಕಾರ್ಯನಿರ್ವಹಿಸಿದ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಚೇರಿ ಇದೀಗ 2025ರ ವೇಳೆಗೆ ಕ್ಷಯ ಮುಕ್ತ ಜಿಲ್ಲೆಯಾಗಿರುವ ಉದೇಶ ಹೊಂದಿದೆ ಎಂದರು.
ಕೊಡಗು ಜಿಲ್ಲೆ 2015ಕ್ಕೆ ಹೋಲಿಸಿದರೆ 2023 ಕ್ಷಯ ರೋಗದ ಪ್ರಕರಣಗಳಲ್ಲಿ ಶೇ.20ರಷ್ಟು ಕಡಿಮೆ. ಆದ್ದರಿಂದ ಕ್ಷಯ ರೋಗ ನಿರ್ಮೂಲನೆಗೆ ಕೈಗೊಂಡ ಕ್ರಮಗಳನ್ನು ಮೆಚ್ಚಿ ಕೊಡಗು ಜಿಲ್ಲೆಗೆ ರಾಷ್ಟ್ರಮಟ್ಟದ ವಾರಾಣಾಸಿಯಲ್ಲಿ ಕಂಚಿನ ಪದಕ ನೀಡಿ ಗೌರವಿಸಲಾಗಿದೆ. ಈಗ ಕ್ಷಯ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಮಾತ್ರವಲ್ಲದೆ ಜನರಲ್ಲಿ ಅರಿವು ಮೂಡಿಸಲು ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಜಿಲ್ಲಾ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕ್ಷಯ ರೋಗ ನಿರ್ಮೂಲನೆ ಕುರಿತು ಜಿಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿಯ ಸಹಕಾರದೊಂದಿಗೆ ಸಮುದಾಯದಲ್ಲಿ ಕ್ಷಯ ರೋಗದ ಬಗ್ಗೆ ಇರುವ ಭಯ, ಆತಂಕ ನಿವಾರಣೆ ಮಾಡಲಾಗುತ್ತದೆ. ಜೊತೆಗೆ ಗ್ರಾಮ ಪಂಚಾಯಿತಿಯಲ್ಲಿ ಕ್ಷಯ ರೋಗವನ್ನು ನಿರ್ಮೂಲನೆ ಮಾಡುವ ಗುರಿ ಹೊಂದಿದ್ದು, ಶಂಕಿತ ಪ್ರಕರಣಗಳು ಶೀಘ್ರ ಪತ್ರೆ ಮಾಡಿ ತ್ವರಿತ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದರು. ಜಿಲ್ಲೆಯಲ್ಲಿ ಕ್ಷಯರೋಗ ಪ್ರಕರಣಗಳು ಹೆಚ್ಚಾಗಿ ವರದಿಯಾದ ಸ್ಥಳಗಳಲ್ಲಿ ಜನಪದ ಬೀದಿ ನಾಟಕ ಕಲಾತಂಡಗಳ ಪ್ರದರ್ಶನ ಸಾರ್ವಜನಿಕ ಸ್ಥಳಗಳು, ಸರ್ಕಾರಿ ಕಚೇರಿಗಳಲ್ಲಿ ಗೋಡೆ ಬರಹ ಮತ್ತು ಸಾರ್ವಜನಿಕ ಸ್ಥಳಗಳು, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ರೇಡಿಯೋ ಜಿಂಗಲ್ಸ್ ಮುಖಾಂತರ ಜಾಗೃತಿ ಮೂಡಿಸಲಾಯಿತು ಎಂದರು. ಕ್ಷಯರೋಗ ಮೈಕೋ ಬ್ಯಾಕ್ಟೀರಿಯ ಟ್ಯೂಬರ್ ಕ್ಯುಲೋಸಿಸ್ ಎಂಬ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗ. ಎರಡು ವಾರಕ್ಕಿಂತ ಹೆಚ್ಚು ಕೆಮ್ಮು ರಾತ್ರಿಯ ವೇಳೆಯಲ್ಲಿ ಜ್ವರ ಕಫದಲ್ಲಿ ರಕ್ತ, ಎದೆ ನೋವು, ಹಸಿವಾಗದಿರುವುದು, ತೂಕ ಇಳಿಕೆ ಕ್ಷಯ ರೋಗದ ಲಕ್ಷಣಗಳಾಗಿವೆ ಎಂದರು. ಕ್ಷಯ ರೋಗದ ತ್ವರಿತ ಪತ್ತೆಗಾಗಿ ಎಲ್ಲಾ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಿಬಿ ನೆಟ್ ಹಾಗೂ ಟ್ರು ನೆಟ್ ಯಂತ್ರಗಳಿಂದ ಟಿಬಿ ಪರೀಕ್ಷೆ ಮಾಡಲಾಗುತ್ತದೆ. ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಸಂಪೂರ್ಣ ಉಚಿತವಾಗಿದ್ದು, ಸಂಪೂರ್ಣವಾಗಿ ರೋಗವನ್ನು ಗುಣಪಡಿಸಬಹುದು ಎಂದು ತಿಳಿಸಿದರು. ಪ್ರಧಾನ ಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಕ್ಷಯರೋಗಿಗಳನ್ನು ದತ್ತು ಪಡೆದು ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುವಂತೆ ಡಾ.ಜೋಶ್ ತೋಮಸ್  ವಿವರಿಸಿದರು. ಮಹದೇವಪ್ಪ, ಸಚಿನ್, ಮಂಜು, ನವೀನ್, ಶ್ರೀಧರ್ ಇತರರು ಇದ್ದರು. ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ  ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮೇ 11 :  ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ…

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.