Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಸತ್ ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ಪ್ರಾತಿನಿಧ್ಯಕ್ಕೆ ಒತ್ತಾಯ : ನಾಳೆ ಸಿಎನ್‍ಸಿಯಿಂದ ಶಾಂತಿಯುತ ಸತ್ಯಾಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಸತ್ ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ಪ್ರಾತಿನಿಧ್ಯಕ್ಕೆ ಒತ್ತಾಯ : ನಾಳೆ ಸಿಎನ್‍ಸಿಯಿಂದ ಶಾಂತಿಯುತ ಸತ್ಯಾಗ್ರಹ*

ಫೆಬ್ರವರಿ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.13 NEWS DESK : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್ ಇಂಟ್ಯಾಂಜಿಬಲ್ (ಅದೃಶ್ಯ) ಮತ ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ರಾಜ್ಯ ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಫೆ.14 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ 10.30 ಗಂಟೆಯಿಂದ 11.30ರ ವರೆಗೆ ಸತ್ಯಾಗ್ರಹ ನಡೆಸಿ ಕೊಡವರ ಹಕ್ಕೊತ್ತಾಯಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ಅಸೆಂಬ್ಲಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ನೀಡಬೇಕು. ಕೊಡವರಿಗೆ ಕೊಡವ ಸಂಪ್ರದಾಯಿಕ ಜನ್ಮಭೂಮಿಯಲ್ಲಿ ಪ್ರತ್ಯೇಕ ಲೋಕಸಭೆ ಮತ್ತು ಅಸಂಬ್ಲಿ ಕೊಡವ ಮತ ಕ್ಷೇತ್ರವನ್ನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ. 2026ರಲ್ಲಿ ಸಂಸತ್ತಿನ ಮತ್ತು ಅಸೆಂಬ್ಲಿಯ ಕ್ಷೇತ್ರದ ಗಡಿ ಹಾಗೂ ಸಂಖ್ಯೆ ಪುನರ್ ನಿರ್ಣಯಿಸಲಾಗುತ್ತಿದ್ದು, ಇದಕ್ಕಾಗಿ ಪ್ರಕ್ರಿಯೆಯು ಪ್ರಾರಂಭವಾಗಿದೆ. ರಾಜ್ಯದಲ್ಲಿ ಗರಿಷ್ಠ ಪ್ರಾತಿನಿಧ್ಯವನ್ನು ಹೊಂದಿರುವ ಜನಸಂಖ್ಯಾ ಪ್ರಾಬಲ್ಯದ ಕೂಟ ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನು ನಿರ್ಮಿಸುವ ನೆಪದಲ್ಲಿ ಸುಳ್ಯ ತಾಲ್ಲೂಕನ್ನು ಕೊಡಗಿಗೆ ಸೇರಿಸಿ ಪ್ರತ್ಯೇಕ ಕೊಡಗು ಲೋಕಸಭಾ ಕ್ಷೇತ್ರ ನಿರ್ಮಿಸಿ ಶಾಶ್ವತವಾಗಿ ತಾವು ಸಂಸತ್ ಪ್ರಾತಿನಿಧ್ಯ ಪಡೆಯುವುದರೊಂದಿಗೆ ಸಂಸತ್ತಿನಲ್ಲಿ ಕೊಡವರಿಗೆ ಪ್ರಾತಿನಿಧ್ಯ ದಕ್ಕದಂತೆ ಒಳಸಂಚು ರೂಪಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 2023 ಮತ್ತು 2024 ರಲ್ಲಿ ಸಿಎನ್‍ಸಿ ಸತ್ಯಾಗ್ರಹ ನಡೆಸುವ ಮೂಲಕ ಸಾಂಕೇತಿಕವಾಗಿ ಈ ವಿಷಯವನ್ನು ಪ್ರಸ್ತಾಪಿಸಿತು. ಫೆ.3ರಂದು ಸಿಎನ್‍ಸಿ ಕಾರ್ಯಕರ್ತರು ಪವಿತ್ರ ಕೊಡವ ಯಾತ್ರಾಸ್ಥಳವಾದ ತಲಕಾವೇರಿಯಲ್ಲಿ ಪುಣ್ಯ ಪ್ರಾರ್ಥನೆಯ ಮೂಲಕ ಪ್ರತಿಜ್ಞೆ ಮಾಡಿ ಜನರ ಮಂಜೂರಾತಿಯನ್ನು ಪಡೆಯಲು ಕೊಡವಲ್ಯಾಂಡ್ ನಾದ್ಯಂತ ವರ್ಷವಿಡೀ ಪ್ರಚಾರ ಕಾರ್ಯಕ್ಕಾಗಿ ದೈವಿಕ ಜೀವಜಲ ಕಾವೇರಿ ನದಿಯಿಂದ ಆಶೀರ್ವಾದ ಪಡೆದಿದ್ದೇವೆ ಎಂದು ತಿಳಿಸಿದ್ದಾರೆ. ಐತಿಹಾಸಿಕವಾಗಿ, ಕೊಡವರು 1946 ರಿಂದ 1950 ರವರೆಗೆ ಭಾರತದ ಸಂವಿಧಾನ/ರಾಜ್ಯಾಂಗ ಘಟನಾ ಸಭೆಯಲ್ಲಿ ಪ್ರಾತಿನಿಧ್ಯವನ್ನು ಹೊಂದಿದ್ದರು. ಆದರೆ ಅವರ ಸಾಂಪ್ರದಾಯಿಕ ತಾಯ್ನಾಡಿನ ವಿಲೀನದ ನಂತರ ಅದನ್ನು ಕಳೆದುಕೊಂಡರು. ತಮ್ಮ ಅತೀ ಕಡಿಮೆ ಜನಸಂಖ್ಯೆಯ ಹೊರತಾಗಿಯೂ, ಕೊಡವರು ರಾಷ್ಟ್ರೀಯ ಭದ್ರತೆ ಮತ್ತು ರಾಷ್ಟ್ರ-ನಿರ್ಮಾಣಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ ಎಂದು ಗಮನ ಸೆಳೆದಿದ್ದಾರೆ. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆದಿಮಸಂಜಾತ ಕೊಡವರ ಆಂತರಿಕ ರಾಜಕೀಯ ಸ್ವಯಂ ನಿರ್ಣಯ ಹಕ್ಕುಗಳಿಗಾಗಿ ಸಂವಿಧಾನ 371 ಮತ್ತು 244 ವಿಧಿ ಹಾಗೂ 6ನೇ ಮತ್ತು 8ನೇ ಶೆಡ್ಯೂಲ್, ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಆದಿಮಸಂಜಾತ ಕೊಡವರಿಗೆ ವಿಶ್ವ ರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಹಕ್ಕುಗಳ ಮಾನ್ಯತೆ ಮತ್ತು ಸಂವಿಧಾನದ 340-342 ವಿಧಿಗಳ ಅಡಿಯಲ್ಲಿ ಆದಿಮಸಂಜಾತ ಕೊಡವರಿಗೆ ಆದಿಮ ಬುಡಕಟ್ಟು ವರ್ಗೀಕರಣ ಹಾಗೂ ನಮ್ಮ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರಕ್ಕೆ ಸಂವಿಧಾನದ ವಿಶೇಷ ಖಾತರಿಗಾಗಿ ಸತ್ಯಾಗ್ರಹದ ಸಂದರ್ಭ ಒತ್ತಾಯಿಸಲಾಗುತ್ತದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.