Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ದಶಮಂಟಪ ಪ್ರೀಮಿಯರ್ ಲೀಗ್’ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ದಶಮಂಟಪ ಪ್ರೀಮಿಯರ್ ಲೀಗ್’ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಫೆಬ್ರವರಿ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.13 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದ ಶ್ರೀ ಜ್ಯೋತಿ ಯುವಕ ಸಂಘದ ವತಿಯಿಂದ ಇದೇ ಪ್ರಥಮ ಬಾರಿಗೆ, ನಗರದ ದಶಮಂಟಪಗಳಿಗೆ ಸಂಬಂಧಿಸಿದಂತೆ ‘ದಶಮಂಟಪ ಪ್ರೀಮಿಯರ್ ಲೀಗ್’ (ಡಿಪಿಎಲ್) ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಫೆ.15 ಮತ್ತು 16 ರಂದು ನಗರದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಶ್ರೀಜ್ಯೋತಿ ಯುವಕ ಸಂಘದ ಉಪಾಧ್ಯಕ್ಷ ಹೆಚ್.ಎನ್.ಮಹೇಶ್ ಪಂದ್ಯಾವಳಿ ಬಗ್ಗೆ ಮಾಹಿತಿ ನೀಡಿ, ದೇಚೂರು ಶ್ರೀ ಬಾಲಕ ಬಲರಾಮಮಂದಿರ ಸಮಿತಿ, ಶ್ರೀ ಕೋದಂಡ ರಾಮ ದೇವಾಲಯ, ಶ್ರೀ ಕಂಚಿಕಾಮಾಕ್ಷಿಯಮ್ಮ, ಶ್ರೀ ಕೋಟೆ ಮಾರಿಯಮ್ಮ, ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ, ಶ್ರೀ ಕೊಟೆ ಮಹಾ ಗಣಪತಿ ದೇವಾಲಯ, ಶ್ರೀ ಕರವಲೆ ಭಗವತಿ ಮಹಿಷಮರ್ಧಿನಿ ದೇವಸ್ಥಾನದ ಮಂಟಪ ಸಮಿತಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ. ಅನಿವಾರ್ಯ ಕಾರಣಗಳಿಂದ ಪೇಟೆ ಶ್ರೀ ರಾಮಮಂದಿರ, ಶ್ರೀ ದಂಡಿನ ಮಾರಿಯಮ್ಮ ಹಾಗೂ ಶ್ರೀ ಚೌಡೇಶ್ವರಿ ದೇವಸ್ಥಾನದ ಮಂಟಪ ಸಮಿತಿಗಳು ಪಾಲ್ಗೊಳ್ಳುತ್ತಿಲ್ಲವೆಂದು ತಿಳಿಸಿದರು.
ಪಂದ್ಯಾವಳಿಯಲ್ಲಿ ಮಡಿಕೇರಿ ತಾಲ್ಲೂಕಿಗೆ ಸೇರಿದ ಆಟಗಾರರಿಗೆ ಮಾತ್ರ ಅವಕಾಶ ನಿಡಲಾಗಿದೆ. ಮಂಟಪ ಸಮಿತಿಗಳು ತಾಲ್ಲೂಕು ವ್ಯಾಪ್ತಿಯ ಆಟಗಾರರನ್ನು ಒಳಗೊಂಡಂತೆ ತಮ್ಮ ತಂಡವನ್ನು ಸಜ್ಜುಗೊಳಿಸಿಕೊಳ್ಳಬಹುದು. ಕೇವಲ ಮಂಟಪ ಸಮಿತಿ ಪದಾಧಿಕಾರಿಗಳು, ಸದಸ್ಯರಿಗೆ ಮಾತ್ರ ಆಟವಾಡಲು ಅವಕಾಶವೆಂದು ಮಾಡಿದಲ್ಲಿ, ಮಂಟಪ ಸಮಿತಿಗಳಿಗೆ ತಂಡಗಳನ್ನು ರಚಿಸಿಕೊಳ್ಳಲು ಕಷ್ಟವಾಗುತ್ತದೆ. ಈ ಕಾರಣದಿಂದ ತಾಲ್ಲೂಕು ಮಟ್ಟದ ಆಟಗಾರರಿಗೆ ಅವಕಾಶ ಒದಗಿಸಲಾಗಿದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಆಟಗಾರರು ಆಧಾರ್ ಕಾರ್ಡ್ ಹಾಜರುಪಡಿಸುವುದು ಕಡ್ಡಾಯವೆಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ವಿಜಯ್ ಮಾತನಾಡಿ, ಪಂದ್ಯಾವಳಿ ವಿಜೇತ ತಂಡಕ್ಕೆ 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನವಾಗಿ 25 ಸಾವಿರ ರೂ. ಮತ್ತು ಆಕರ್ಷಕ ಟ್ರೋಫಿಯನ್ನು ಬಹುಮಾನವಾಗಿ ನೀಡಲಾಗುತ್ತದೆ. ಟ್ರೋಫಿಗಳನ್ನು ಶಕ್ತಿ ಪತ್ರಿಕೆಯ ಉಪಸಂಪಾದಕರಾದ ಪ್ರಜ್ವಲ್ ರಾಜೇಂದ್ರ ಪ್ರಾಯೋಜಿಸಿದ್ದಾರೆ. ಇದರೊಂದಿಗೆ ಮೂರು ವರ್ಷಗಳ ರೋಲಿಂಗ್ ಟ್ರೋಫಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ಫೆ.15 ರಂದು ಬೆಳಗ್ಗೆ ನಡೆಯುವ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಮುಡಾ ಅಧ್ಯಕ್ಷ ಬಿ.ವೈ.ರಾಜೇಶ್, ನಗರಸಭಾ ಮಾಜಿ ಸದಸ್ಯ ಕೆ.ಎಂ.ಗಣೇಶ್, ಮಡಿಕೇರಿ ದಶ ಮಂಟಪ ಸಮಿತಿ ಅಧ್ಯಕ್ಷ ಜಗದೀಶ್, ಶ್ರೀ ಕೋದಂಡ ರಾಮ ದೇವಾಲಯ ಸಮಿತಿಯ ಪದಾಧಿಕಾರಿಗಳು, ದಶ ಮಂಟಪಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಹೆಚ್.ಎಂ.ವಿಶ್ವನಾಥ್, ಸಹ ಕಾರ್ಯದರ್ಶಿ ಹೆಚ್.ಜಿ.ಯತೀಶ್, ಕ್ರೀಡಾಧ್ಯಕ್ಷ ಹೆಚ್.ಜಿ.ಯಶ್ವಂತ್ ಹಾಗೂ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಹೆಚ್.ಸಿ.ತೇಜಸ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, ಆ.16 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಬೆಂಗಳೂರಿನ…

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.