Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡವ ಪೊಮ್ಮಕ್ಕಡ ನಾಳ್ : ಯುಕೊ ಘೋಷಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವ ಪೊಮ್ಮಕ್ಕಡ ನಾಳ್ : ಯುಕೊ ಘೋಷಣೆ

ಫೆಬ್ರವರಿ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.13 NEWS DESK : ಫೆಬ್ರವರಿ 12 ರನ್ನು ಇನ್ನು ಮುಂದೆ ಜಾಗತಿಕ ‘ಕೊಡವ ಹೆಣ್ಣುಮಕ್ಕಳ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಯುನೈಟೆಡ್ ಕೊಡವ ಆರ್ಗನೈಜೇಷನ್ ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಘೋಷಿಸಿದ್ದಾರೆ. ಯುಕೊ ಸಂಘಟನೆಯ 6ನೇ ವರ್ಷದ ‘ಬೇದ ಚಂಗ್ರಾಂದಿ’ ಪ್ರಯುಕ್ತ ಸಾಂಪ್ರದಾಯಿಕವಾಗಿ ನಡೆದ ‘ನಡುಬೇದ’ ಆಚರಣೆಯ ನಂತರ ನಡೆದ ಸಭೆಯಲ್ಲಿ ಮಾತನಾಡುತ್ತಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ. ಕೊಡವರ ಸಾಂಪ್ರದಾಯಿಕವಾದ ಬೇದ ಚಂಗ್ರಾಂದಿ ಆಚರಣೆಯಲ್ಲಿ ‘ನಡುಬೇದ’ವನ್ನು ಭೂಮಿಗೆ ಮುಟ್ಟಾದ ದಿನವೆಂಬ ನಂಬಿಕೆಯೊಂದಿಗೆ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಮೊದಲಿಗೆ, ಯುಕೊ ಸಂಘಟನೆಯ ನೇತೃತ್ವದಲ್ಲಿ, ಕೊಡವ ಮಹಿಳೆಯರೆಲ್ಲಾ ಸೇರಿ ಕಿರುಗೂರಿನ ಚೆಪ್ಪುಡಿರ ಸುಜು ಕರುಂಬಯ್ಯನವರ ಭತ್ತದ ಗದ್ದೆಗೆ ತೆರಳಿ, ಸಂಪ್ರದಾಯದಂತೆ ಭೂಮಿಗೆ ‘ತೋರ ತೊಪ್ಪು’ ಎಂದು ಕರೆಯಲ್ಪಡುವ ವಿಶೇಷ ಎಲೆಯಲ್ಲಿ ಅಕ್ಕಿಯನ್ನು ಇಟ್ಟು, ಭೂಮಿಗೆ ಕೈ ಎಣ್ಣೆ ಸುರಿದು, ಪಕ್ಕದಲ್ಲಿ ಮಿಳ್ಳಿಯಲ್ಲಿ ನೀರು, ಮರದ ಬಾಚಣಿಕೆಯನ್ನಿಟ್ಟು “ಭೂಮಿತಾಯಿ, ನೀಡ ಉಟ್ಟಿ ಮಂಡೆ ಕಾಂಜದ್ ತಂಪಾಡ್, ಕುಂಬ್ಯಾತ್ ಮಳೆಯಾಯಿತ್, ಕುಂದ್’ಲೂ ಕೂಳಾಡ್” ಎಂದು ಸೂರ್ಯದೇವನಿಗೆ ಅಕ್ಕಿಯನ್ನು ಪ್ರೋಕ್ಷಣೆಮಾಡಿ, ಭೂಮಿತಾಯಿಗೆ ಪಾದ ಮುಟ್ಟಿ ನಮಸ್ಕರಿಸಿ ಪ್ರಾರ್ಥಿಸಲಾಯಿತು.  ಆ ನಂತರ ಪೊನ್ನಂಪೇಟೆಯ ಸುಜು ಕರುಂಬಯ್ಯನವರ ಮನೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಬೇದ ಚಂಗ್ರಾಂದಿ ಆಚರಣೆಯಲ್ಲಿ ಹೆಣ್ಣುಮಕ್ಕಳೇ ಪ್ರಧಾನ ಪಾತ್ರವನ್ನು ನಿರ್ವಹಿಸುತ್ತಾರೆ. ಈ ಆಚರಣೆಯು ಕೊಡವ ಜನಾಂಗ ಮತ್ತು ಪ್ರಕೃತಿ ನಡುವಿನ ಭಾವನಾತ್ಮಕ ಸಂಬಂಧವನ್ನು ದೃಡಪಡಿಸುತ್ತದೆ. ಭೂಮಿತಾಯಿಯನ್ನು ಸಾಕ್ಷಾತ್ ಒಬ್ಬ ಹೆಣ್ಣಿನಂತೆ ಭಾವಿಸಿ, ಆಕೆಗೆ ಮುಟ್ಟಿಗೆ ಸಂಬಂದಿಸಿದ ಆರೈಕೆ ಮಾಡುವುದೇ ನಡುಬೇದ ಆಚರಣೆಯ ಪ್ರಾಮುಖ್ಯತೆ. ಮಹಿಳೆಯರೇ ಸಾಂಪ್ರದಾಯಿಕವಾಗಿ ಈ ಆಚರಣೆಯಲ್ಲಿ ನೇರವಾಗಿ ಪಾಲ್ಗೊಳ್ಳುವುದು ಈ ಆಚರಣೆಯ ವಿಶೇಷ, ಹಾಗೆಯೇ ಈ ಆಚರಣೆಯು ಕೊಡವ ಮಹಿಳೆಯರ ಆರೋಗ್ಯದ ದೃಷ್ಟಿಯಿಂದಲೂ ಮಹತ್ವ ಪಡೆದುಕೊಂಡಿರುವುದರಿಂದ ‘ನಡುಬೇದ ಚಂಗ್ರಾಂದಿ’ ಆಚರಿಸುವ ಫೆಬ್ರವರಿ 12ನೇಯ ತಾರಿಕನ್ನು ಇನ್ನು ಮುಂದೆ ಜಾಗತಿಕವಾಗಿ ‘ಕೊಡವ ಹೆಣ್ಣುಮಕ್ಕಳ ದಿನ’ವಾಗಿ ಆಚರಿಸಲಾಗುತ್ತದೆ ಎಂದು ಅವರು ವಿವರಿಸಿದರು. ಕೊಡವ ಜನಾಂಗದ ಸಾಮಾಜಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ಹಾಗು ರಾಜಕೀಯ ಅಸ್ತಿತ್ವವನ್ನು ಉಳಿಸಿ ಬೆಳೆಸುವ ಪ್ರಕ್ರೀಯೆಯ ಭಾಗವಾಗಿ ಕಳೆದ 6 ವರ್ಷಗಳಿಂದ ಯುಕೊ ಸಂಘಟನೆಯ ವತಿಯಿಂದ ಈ ಬೇದ ಚಂಗ್ರಾಂದಿ ಯನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಇದರಿಂದಾಗಿ ಜನಾಂಗದ ಮಾನಸಿಕ ಶಕ್ತಿ ವೃದ್ಧಿಸಿ ಆಧ್ಯಾತ್ಮಿಕ ಶಕ್ತಿಯೂ ವೃದ್ಧಿಸುವೂದರೊಂದಿಗೆ ಒಂದು ಪರಂಪರೆಯನ್ನು ಅನಾಯಾಸವಾಗಿ ಮುಂದಿನ ಪೀಳಿಗೆಗೆ ಪರಿಚಯಿಸಲು ಸಾದ್ಯವಾಗಿದೆ ಎಂದು ಹೇಳಿದರು. ಯುಕೊ ಸಂಘಟನೆಯ ವಿವಿದ ಕಾರ್ಯಕ್ರಮಗಳಿಂದ ಪ್ರೇರಿತರಾಗಿ, ಇಂದು ಯುವಜನತೆ ಕೊಡವಾಮೆಯನ್ನು ಪೋಷಿಸುವ ನಿಟ್ಟಿನಲ್ಲಿ ಆಸಕ್ತಿ ತೋರುವಂತಾಗಿದೆ ಎಂದು  ತಿಳಿಸಿದರು. ನಮ್ಮ ಹಿರಿಯರು ನಮ್ಮ ಬದುಕನ್ನು ಅರ್ಥಪೂರ್ಣವಾಗಿ ರೂಪಿಸಿಕೊಳ್ಳಲು ಹಾಕಿಕೊಟ್ಟ ಮೇಲ್ಪಂಕ್ತಿಯನ್ನು ಅನುಸರಿಸುವುದರ ಮೂಲಕ ನಾವು ನಮ್ಮ ಬದುಕಿನ ಹಾದಿಯನ್ನು ಸುಗಮವಾಗಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ನಮ್ಮ ಪರಂಪರೆಯನ್ನು ಗೌರವಿಸಿ, ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮಮೇಲಿದೆ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ, ಕಿರುಗೂರು ಗ್ರಾಪಂ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ, ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ಚಿರಿಯಪಂಡ ರಾಜಾ ನಂಜಪ್ಪ, ವಿರಾಜಪೇಟೆ ಕೊಡವ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತಿಷ್, ಮತ್ತು ಸದಸ್ಯರು, ಟಿ.ಶೆಟ್ಟಿಗೆರಿ,ಹಾಗು ಮೂರ್ನಾಡುವಿನ ಪೊಮ್ಮಕ್ಕಡ ಕೂಟದ ಸದಸ್ಯರು, ಪೊನ್ನಂಪೇಟೆ ಕೊಡವಸಮಾಜದ ನಿರ್ದೇಶಕ ಆಲೆಮಾಡ ಸುಧೀರ್, ಹಿರಿಯರಾದ ಕಳ್ಳೇಂಗಡ ಶಂಬು, ಪೊನ್ನಂಪೇಟೆಯ ಇಗ್ಗುತ್ತಪ್ಪ ಕೊಡವ ಕೂಟದ ದೇಯಂಡ ಗಣೇಶ್, ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅಹಿಂದ ಬಳಗ ಕೊಡಗು ಜಿಲ್ಲೆ ನೂತನ ಸಮಿತಿ ರಚನೆ : ಅಧ್ಯಕ್ಷರಾಗಿ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಈ.ಸುರೇಶ್ ಆಯ್ಕೆ

ಅಕ್ಟೋಬರ್ 23, 2026

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಸ್ವಚ್ಛತಾ ಅಭಿಯಾನ ನಡೆಯಲಿ: ರಾಜೇಶ್; ಪಾಲಿಬೆಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ; 100ಕ್ಕೂ ಅಧಿಕ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಭಾಗಿ

ಅಕ್ಟೋಬರ್ 23, 2026

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, ಅ.23 NEWS DESK : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸಂಘದ ವತಿಯಿಂದ ನ.2ರಂದು ವಿರಾಜಪೇಟೆಯ ಮಹಿಳಾ ಸಮಾಜದಲ್ಲಿ…

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಸ್ವಚ್ಛತಾ ಅಭಿಯಾನ ನಡೆಯಲಿ: ರಾಜೇಶ್; ಪಾಲಿಬೆಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ; 100ಕ್ಕೂ ಅಧಿಕ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಭಾಗಿ

ಅಕ್ಟೋಬರ್ 23, 2026

ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿ ಪ್ರೊ. ಭಾರತಿ ಹಿರೇಮಠ ಅಧಿಕಾರ ಸ್ವೀಕಾರ

ಅಕ್ಟೋಬರ್ 23, 2026

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.