Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಜಿಲ್ಲೆಯಲ್ಲಿರುವ ಅಲೆಮಾರಿಗಳ ಸಂಖ್ಯೆ 58,765 : ಸರ್ಕಾರದ ಸೌಲಭ್ಯ ತಲುಪಿಸಲು ಶ್ರಮ : ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಭರವಸೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಜಿಲ್ಲೆಯಲ್ಲಿರುವ ಅಲೆಮಾರಿಗಳ ಸಂಖ್ಯೆ 58,765 : ಸರ್ಕಾರದ ಸೌಲಭ್ಯ ತಲುಪಿಸಲು ಶ್ರಮ : ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಭರವಸೆ

ಫೆಬ್ರವರಿ 13, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.13 NEWS DESK : ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಕುಟುಂಬದ ಜನಸಂಖ್ಯೆಯು ಸುಮಾರು 58,765 ಇದ್ದು, ಇವರಿಗೆ ಸರ್ಕಾರದ ಸೌಲಭ್ಯ ತಲುಪಿಸಲು ಶ್ರಮಿಸಲಾಗುತ್ತಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷರಾದ ಜಿ.ಪಲ್ಲವಿ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯಲ್ಲಿ 9,066 ಅಲೆಮಾರಿ ಜನಸಂಖ್ಯೆ ಇದೆ. ಪರಿಶಿಷ್ಟ ವರ್ಗ ಅಲೆಮಾರಿ 32,702 ಜನಸಂಖ್ಯೆ ಇದೆ. ಹಾಗೆಯೇ ಆದಿವಾಸಿ ಬುಡಕಟ್ಟುಗಳಲ್ಲಿ 16,997 ಜನಸಂಖ್ಯೆ ಇದೆ ಎಂದು ಅವರು ವಿವರಿಸಿದರು. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಅವರು ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಬಳಿಯ ಜೇನುಕುರುಬ ಮತ್ತು ಮೇದಾ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಪುನರ್ ವಸತಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಕುಂದುಕೊರತೆ ಆಲಿಸಿದರು. ಬಳಿಕ ದಿಡ್ಡಳ್ಳಿ ಆದಿವಾಸಿಗಳು ವಾಸಿಸುವ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ದೊಡ್ಡಬೆಟ್ಟಗೇರಿಯಲ್ಲಿ ಸೋಲಿಗ ಕುಟುಂಬಗಳು ವಾಸಿಸುವ ಪ್ರದೇಶಕ್ಕೆ ಭೇಟಿ ನೀಡಿ ಅಲೆಮಾರಿ ಅಭಿವೃದ್ಧಿ ನಿಗಮದಿಂದ ನಡೆಸಲಾಗುತ್ತಿರುವ ಟೈಲರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಬಸವನಹಳ್ಳಿ ಬಳಿ ಬಿದಿರಿನ ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಸ್ಥಳೀಯರೊಬ್ಬರು ಮಾಹಿತಿ ನೀಡಿ ಬಹಳ ಹಿಂದಿನಿಂದಲೂ ಬಿದಿರಿನ ಉತ್ಪನ್ನಗಳಿಂದ ಹಲವು ಕರಕುಶಲ ವಸ್ತುಗಳನ್ನು ತಯಾರಿಸಿಕೊಂಡು ಬದುಕು ಕಟ್ಟಿಕೊಳ್ಳಲಾಗುತ್ತಿದೆ. ಇದೊಂದು ವೃತ್ತಿಯಾಗಿದ್ದು, ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ಇಲ್ಲಿನ ಕೆಲವರು ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿರುವವರು ಇದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಅವರು ಸರ್ಕಾರ ಮಹಿಳೆಯರ ಸ್ವಾವಲಂಬನೆಗೆ ಹಲವು ಕಾರ್ಯಕ್ರಮ ಜಾರಿಗೊಳಿಸಿದ್ದು, ಅವುಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದರು. ಸರ್ಕಾರ ಅಲೆಮಾರಿ ಸಮುದಾಯಕ್ಕೆ ಆರ್ಥಿಕ ಬಲ ತುಂಬಲು ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ 1 ಲಕ್ಷ ರೂ.ವರೆಗೆ ಸಾಲ ಯೋಜನೆ ನೀಡಲಿದ್ದು, ಶೇ.50 ರಷ್ಟು ಸಹಾಯಧನ ಕಲ್ಪಿಸಲಾಗುತ್ತದೆ ಎಂದರು.
ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ 2 ಲಕ್ಷ ರೂ.ವರೆಗೂ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದು ಜಿ.ಪಲ್ಲವಿ ಅವರು ವಿವರಿಸಿದರು. ಸ್ವಾವಲಂಭಿ ಸಾರಥಿ ಯೋಜನೆಯಡಿ ಸರಕು ಸಾಗಾಣೆ ವಾಹನ, ಪ್ರವಾಸಿ ಟ್ಯಾಕ್ಸಿ ವಾಹನಗಳಿಗೆ ಶೇ.75 ರಷ್ಟು ಮತ್ತು ಅದಕ್ಕಿಂತ 4 ಲಕ್ಷ ರೂ.ವರೆಗೆ ಸಹಾಯಧನ ಕಲ್ಪಿಸಲಾಗುತ್ತದೆ ಎಂದು ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ನುಡಿದರು. ಅಲೆಮಾರಿ ಸಮುದಾಯದ ಮಹಿಳಾ ಸ್ವಸಹಾಯ ಸಂಘಗಳ ವಿವಿಧ ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಮುಂದಾಗಲಾಗಿದ್ದು, ಈ ಯೋಜನೆಯಡಿ ಸ್ವಸಹಾಯ ಸಂಘಗಳ ವಿವಿಧ ಉದ್ದೇಶದ ಆರ್ಥಿಕ ಚಟುವಟಿಕೆಗೆ ಕನಿಷ್ಠ 10 ಮಹಿಳಾ ಸದಸ್ಯರು ಇರುವ ಸ್ವಸಹಾಯ ಗುಂಪುಗೆ 2.50 ಲಕ್ಷ ರೂ.ವರೆಗೆ ಸಾಲ ಸಹಾಯಧನ ಕಲ್ಪಿಸಲಾಗುತ್ತಿದೆ ಎಂದು ಜಿ.ಪಲ್ಲವಿ ತಿಳಿಸಿದರು. ಅಲೆಮಾರಿ ಸಮುದಾಯದವರು ಒಂದು ಕಡೆ ನೆಲೆಯೂರಿ ಜೀವನ ಸಾಗಿಸಲು ಹಾಗೂ ಭೂಮಾಲೀಕರನ್ನಾಗಿ ಮಾಡಲು ಮಹಿಳಾ ಕೃಷಿ ಕಾರ್ಮಿಕ ಅಲೆಮಾರಿ ಸಮುದಾಯದವರಿಗೆ ಕೃಷಿಗೆ ಯೋಗ್ಯವಾದ ಭೂಮಿಯನ್ನು ಖರೀದಿಸಿ ಮಹಿಳಾ ಫಲಾನುಭವಿಗೆ ನೀಡಲಾಗುತ್ತಿದ್ದು, ಶೇ.50 ರಷ್ಟು ಸಹಾಯಧನ ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು. ಸಣ್ಣ ಮತ್ತು ಅತೀ ಸಣ್ಣ ರೈತರು ಹೊಂದಿರುವ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಕೊಳವೆ ಬಾವಿ ಕೊರೆಸಿ ವಿದ್ಯುದ್ಧೀಕರಣಗೊಳಿಸುವ ಯೋಜನೆ ಈಗಾಗಲೇ 6 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದೆ. ಆ ನಿಟ್ಟಿನಲ್ಲಿ ವಿವಿಧ ಸೌಲಭ್ಯ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬನೆಯತ್ತ ಗಮನಹರಿಸಬೇಕು ಎಂದು ಜಿ.ಪಲ್ಲವಿ ಅವರು ತಿಳಿಸಿದರು. ಬಳಿಕ ದೊಡ್ಡಬೆಟ್ಟಗೇರಿಯ ಸೋಲಿಗ ಸಮುದಾಯ ಭವನಕ್ಕೆ ಭೇಟಿ ನೀಡಿ ಟೈಲರಿಂಗ್ ವೃತ್ತಿ ಮಾಡುತ್ತಿರುವ ಮಹಿಳೆಯರನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿಯೊಬ್ಬರೂ ವೃತ್ತಿ ಕೌಶಲ್ಯ ಬೆಳೆಸಿಕೊಂಡು ಜೀವನ ಮಟ್ಟ ಸುಧಾರಿಸಿಕೊಳ್ಳಲು ಮುಂದಾಗುತ್ತಿರುವುದು ಶ್ಲಾಘನೀಯ. ಆ ನಿಟ್ಟಿನಲ್ಲಿ ಸೋಲಿಗ ಯುವಜನರು ಪದವಿ, ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿದ್ದಾರೆ. ಪರಿಶ್ರಮ ಇದ್ದಲ್ಲಿ ಯಶಸ್ಸು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಮಾಹಿತಿ ಶಿಕ್ಷಣ ಮತ್ತು ಸಂವಹನ ಮೂಲಕ ಟೈಲರಿಂಗ್, ಬ್ಯೂಟಿಷಿಯನ್ ವೃತ್ತಿ ಕೌಶಲ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಬಸವನಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಭೂಮಿ ಇಲ್ಲದವರಿಗೆ ಭೂಮಿ ಹಂಚಿಕೆ ಮಾಡಬೇಕು ಎಂದು ಸಾರ್ವಜನಿಕರು ಕೋರಿದರು. ಇಲ್ಲಿನ ಯುವಜನರು ರೆಸಾರ್ಟ್, ದಿನಗೂಲಿ ಕೆಲಸಕ್ಕೆ ತೆರಳುತಿದ್ದಾರೆ ಎಂದು ಅವಲತ್ತುಕೊಂಡರು. ಅಲೆಮಾರಿ ಅಭಿವೃದ್ಧಿ ನಿಗಮದಿಂದ ದೊರೆಯುವ ಸಾಲ ಸೌಲಭ್ಯ, ಸಹಾಯಧನ ಮತ್ತಿತರ ಬಗ್ಗೆ ಅಲೆಮಾರಿ ಸಮುದಾಯಕ್ಕೆ ಮಾಹಿತಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಪೊನ್ನಂಪೇಟೆ ತಾಲ್ಲೂಕಿನ ಬೊಂಬುಕಾಡು ಕಾರೆಕಂಡಿ ಜೇನುಕುರುಬ ಹಾಡಿಗೆ ಭೇಟಿ ನೀಡಿ ಮಾಹಿತಿ ಪಡೆದರು. ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಆಸ್ತನಹಾಡಿ ಪರಿಶಿಷ್ಟ ಪಂಗಡದ ಕುರುಬ ಜನಾಂಗ ವಾಸಿಸುವ ಸ್ಥಳ ವೀಕ್ಷಿಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಲ್ಲವಿ ಅವರು ಆದಿವಾಸಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು. ಪರಿಶ್ರಮ ಇದ್ದಲ್ಲಿ ಯಶಸ್ಸು ಸಾಧ್ಯ. ಆ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ ಜೊತೆಗೆ ಸ್ವಾವಲಂಬಿ ಬದುಕಿಗೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಅಲೆಮಾರಿ ಅಭಿವೃದ್ಧಿ ನಿಗಮ ವತಿಯಿಂದ ನೀಡುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು. ತಹಶೀಲ್ದಾರ್ ಕಿರಣ್ ಗೌರಯ್ಯ(ಕುಶಾಲನಗರ), ಮೋಹನ್ ಕುಮಾರ್(ಪೊನ್ನಂಪೇಟೆ), ಐಟಿಡಿಪಿ ಇಲಾಖೆ ಅಧಿಕಾರಿ ತೇಜಕುಮಾರ್(ವಿರಾಜಪೇಟೆ, ಪೊನ್ನಂಪೇಟೆ), ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಪ್ರೀತಿ ಚಿಕ್ಕಮಾದಯ್ಯ (ವಿರಾಜಪೇಟೆ), ಸಿದ್ದೇಗೌಡ(ಕುಶಾಲನಗರ, ಸೋಮವಾರಪೇಟೆ), ಎಇಇ ಮಹದೇವ, ಸೆಸ್ಕ್ ಎಇಇ ಸುರೇಶ್, ಕುಡಿಯುವ ನೀರು ವಿಭಾಗದ ಎಇಇ ಭಾಸ್ಕರ್, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಬಿ.ಎಸ್.ಆನಂದ್ ಕುಮಾರ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅಹಿಂದ ಬಳಗ ಕೊಡಗು ಜಿಲ್ಲೆ ನೂತನ ಸಮಿತಿ ರಚನೆ : ಅಧ್ಯಕ್ಷರಾಗಿ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಈ.ಸುರೇಶ್ ಆಯ್ಕೆ

ಅಕ್ಟೋಬರ್ 23, 2026

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಸ್ವಚ್ಛತಾ ಅಭಿಯಾನ ನಡೆಯಲಿ: ರಾಜೇಶ್; ಪಾಲಿಬೆಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ; 100ಕ್ಕೂ ಅಧಿಕ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಭಾಗಿ

ಅಕ್ಟೋಬರ್ 23, 2026

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, ಅ.23 NEWS DESK : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸಂಘದ ವತಿಯಿಂದ ನ.2ರಂದು ವಿರಾಜಪೇಟೆಯ ಮಹಿಳಾ ಸಮಾಜದಲ್ಲಿ…

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಸ್ವಚ್ಛತಾ ಅಭಿಯಾನ ನಡೆಯಲಿ: ರಾಜೇಶ್; ಪಾಲಿಬೆಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ; 100ಕ್ಕೂ ಅಧಿಕ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಭಾಗಿ

ಅಕ್ಟೋಬರ್ 23, 2026

ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿ ಪ್ರೊ. ಭಾರತಿ ಹಿರೇಮಠ ಅಧಿಕಾರ ಸ್ವೀಕಾರ

ಅಕ್ಟೋಬರ್ 23, 2026

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.