Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಶನಿವಾರಸಂತೆ : ಬೇಟಿ ಬಚಾವೊ-ಬೇಟಿ ಪಡಾವೊ ತಾಲ್ಲೂಕು ಮಟ್ಟದ ಕಾರ್ಯಕ್ರಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಶನಿವಾರಸಂತೆ : ಬೇಟಿ ಬಚಾವೊ-ಬೇಟಿ ಪಡಾವೊ ತಾಲ್ಲೂಕು ಮಟ್ಟದ ಕಾರ್ಯಕ್ರಮ

ಫೆಬ್ರವರಿ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.13  NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಮಹಿಳಾ ಸಹಾಯವಾಣಿ ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ-ಬೇಟಿ ಪಡಾವೊ” ತಾಲ್ಲೂಕು ಮಟ್ಟದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, “ಸಮಗ್ರ ಮಕ್ಕಳ ಲೈಂಗಿಕ ಶಿಕ್ಷಣದ ಕುರಿತು” ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಹಿರಿಯ ಮೇಲ್ವಿಚಾರಕಿ ಸಾವಿತ್ರವ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ತಾಯಿಯ ಗರ್ಭದಿಂದ 18 ವರ್ಷದವರೆಗೆ ಮಕ್ಕಳು ಎಂದು ಹೇಳಲಾಗುತ್ತದೆ. ಮಕ್ಕಳು ಉತ್ತಮ ಆರೋಗ್ಯವನ್ನು ಪಡೆಯಬೇಕಾದರೆ ಉತ್ತಮ ಪೌಷ್ಠಿಕಯುಕ್ತ ಆಹಾರವನ್ನು ಸೇವಿಸಬೇಕು. ಸರ್ಕಾರ ಇಂದು ಮಕ್ಕಳ ಆರೋಗ್ಯ, ದೈಹಿಕ ಬೆಳವಣಿಗೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಮಕ್ಕಳು ಶಿಕ್ಷಣವನ್ನು ಪಡೆಯುವುದರ ಮೂಲಕ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಹಾಗೆಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೂಲಕ ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದು, ಹೆಣ್ಣು ಮಕ್ಕಳು ಶಿಕ್ಷಣವಂತರಾಗಲು ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪೊಲೀಸ್ ಇಲಾಖೆಯ ಪ್ರದೀಪ್ ಕುಮಾರ್ ಕೆ.ಎಂ., ಅವರು ಮಾತನಾಡಿ ಪ್ರಸ್ತುತ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಕ್ಕಳು ಸಾಮಾಜಿಕ ಜಾಲತಾಣಗಳ ಬಗ್ಗೆ ಆಸಕ್ತಿ ತೋರಬಾರದು. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಕ್ಕಳು ಶಾಲೆಗಳಿಗೆ ತೆರಳುವಂತಹ ಸಮಯದಲ್ಲಿ ನೆರಹೊರೆಯವರಿಂದ, ಬಸ್ಸಿನಲ್ಲಿ ಪ್ರಯಾಣಿಸುವಾಗ ಯಾರಾದರು ಲೈಂಗಿಕ ಕಿರುಕುಳದಂತಹ ದೌರ್ಜನ್ಯ ಎಸಗಿದ್ದಲ್ಲಿ ಮಕ್ಕಳು ತಮ್ಮೊಂದಿಗೆ ಅತ್ಯಂತ ಉತ್ತಮ ಒಡನಾಟ ಇರುವಂತಹವರೊಂದಿಗೆ ಸಮಸ್ಯೆಗಳನ್ನು ಹೇಳಿಕೊಂಡು ಅಥವಾ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು. ಅಲ್ಲದೆ 112 ಪೊಲೀಸ್ ತುರ್ತು ಸೇವೆಗೆ ಕರೆಮಾಡಿ ಮಾಹಿತಿಯನ್ನು ನೀಡಬಹುದು ಎಂದು ಹೇಳಿದರು. ಭಾರತಿ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ನರಸಿಂಹ ಮೂರ್ತಿ ಅವರು ಮಾತನಾಡಿ ನಮ್ಮ ಶಾಲೆಯ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯಿಂದ ಹದಿಹರೆಯದ ವಯಸ್ಸಿಲ್ಲಿ ಮಕ್ಕಳ ಮನಸ್ಸು ಹಾಗೂ ದೈಹಿಕ ಬದಲಾವಣೆಗಳ ಮೇಲಾಗುವ ವಿಚಾರಗಳ ಕುರಿತು ತಿಳಿಸಿ ಹೇಳಿ, ಶಿಕ್ಷಣದ ಕಡೆ ಗಮನಹರಿಸಿ ಯಶಸ್ಸು ಸಾಧಿಸಬೇಕು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮಹಿಳಾ ಸಬಲೀಕರಣ ಘಟಕದ, ಜೆಂಡರ್ ಸ್ಪ್ಪೆಷಲಿಸ್ಟ್, ಕೇಶಿನಿ ಎಸ್.ಆರ್, ಮಹಿಳಾ ಸಬಲೀಕರಣ ಘಟಕದ ಮಿಷನ್ ಜಿಲ್ಲಾ ಮಿಷನ್ ಸಂಯೋಜಕರಾದ ಮಮತ ಬಿ.ಎಸ್. ಹಾಗೂ ಭಾರತಿ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು. ಶಾಲಾ ಮತ್ತು ಕಾಲೇಜಿನ ಮಕ್ಕಳಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.ಮಧು ಅವರು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಸ್ವಚ್ಛತಾ ಅಭಿಯಾನ ನಡೆಯಲಿ: ರಾಜೇಶ್; ಪಾಲಿಬೆಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ; 100ಕ್ಕೂ ಅಧಿಕ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಭಾಗಿ

ಅಕ್ಟೋಬರ್ 23, 2026

ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿ ಪ್ರೊ. ಭಾರತಿ ಹಿರೇಮಠ ಅಧಿಕಾರ ಸ್ವೀಕಾರ

ಅಕ್ಟೋಬರ್ 23, 2026

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿ ಪ್ರೊ. ಭಾರತಿ ಹಿರೇಮಠ ಅಧಿಕಾರ ಸ್ವೀಕಾರ

ಅಕ್ಟೋಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಅ.23: ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ನೂತನ ಕುಲಸಚಿವರಾಗಿ ಪ್ರೊ. ಭಾರತಿ ಹಿರೇಮಠ ಅವರು ಶುಕ್ರವಾರ…

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.