Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»6 ಮಂದಿಗೆ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

6 ಮಂದಿಗೆ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ

ಫೆಬ್ರವರಿ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.15 NEWS DESK : ಅರೆಭಾಷಾ ಸಾಹಿತ್ಯ, ಸಂಸ್ಕೃತಿ ಮತ್ತು ಅದರ ಬೆಳವಣಿಗೆಯಲ್ಲಿ ಗಣನೀಯ ಸಾಧನೆ ಮಾಡಿದ ಆರು ಮಂದಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅರೆಭಾಷಾ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರು ಈ ಕುರಿತು ಮಾಹಿತಿ ನೀಡಿ, 2022ನೇ ಸಾಲಿನ ಗೌರವ ಪ್ರಶಸ್ತಿಯನ್ನು ‘ಸಂಶೋಧನೆ ಮತ್ತು ಅರೆಭಾಷೆ ಸಾಹಿತ್ಯ’ ಕ್ಷೇತ್ರದ ಸಾಧನೆಗಾಗಿ ಕೊಡಗಿನ ಡಾ.ಕಾವೇರಿಮನೆ ಬೋಜಪ್ಪ, ‘ಅರೆಭಾಷೆ ಮತ್ತು ಸಂಸ್ಕೃತಿಯ ಸೇವೆ’ಗಾಗಿ ತುಂತಜೆ ವೆಂಕಟೇಶ್(ಗಣೇಶ್) ಮತ್ತು ‘ಶಿಕ್ಷಣ ಮತ್ತು ವೈದ್ಯಕೀಯ ಸೇವೆ’ಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಡಾ.ಕೆ.ವಿ.ಚಿದಾನಂದ ಅವರು ಪಡೆದುಕೊಂಡಿದ್ದಾರೆಂದರು. 2023ನೇ ಸಾಲಿನ ಗೌರವ ಪ್ರಶಸ್ತಿಗೆ  ‘ಅರೆಭಾಷೆ ಸಾಹಿತ್ಯ ಮತ್ತು ಶೈಕ್ಷಣಿ ಸೇವೆ’ಗಾಗಿ ಕೊಡಗಿನ ಕುಯಿಂತೋಡು ದಾಮೋದರ, ‘ಅರೆಭಾಷಾ ಅಧ್ಯಯನ ಮತ್ತು ಸಂಶೋಧನೆ’ಗಾಗಿ ದಕ್ಷಿಣ ಕನ್ನಡದ ಎ.ಕೆ. ಹಿಮಕರ ಮತ್ತು ‘ಅರೆಭಾಷಾ ಸಾಧನೆ ಮತ್ತು ಕಲಾ ಪೋಷಕ’ರ ನೆಲೆಯಲ್ಲಿ  ಕೊಡಗಿನ ಕೂಡಕಂಡ ಕಾವೇರಮ್ಮ ಸೋಮಣ್ಣ ಅವರುಗಳು ಆಯ್ಕೆಯಾಗಿದ್ದಾರೆಂದು ತಿಳಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭ ಫೆ.28 ರಂದು ನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಲಿದ್ದು, ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಅವರುಗಳು ಪಾಲ್ಗೊಳ್ಳಲಿದ್ದಾರೆಂದು ಮಾಹಿತಿಯನ್ನಿತ್ತರು.

ಸಂಶೋಧನಾ ಪ್ರಬಂಧಗಳ ಬಿಡುಗಡೆ ::  ಸಮಾರಂಭದಲ್ಲಿ ಅರೆಭಾಷಾ ಅಕಾಡೆಮಿಯ ಫೆಲೋಶಿಪ್‍ನಡಿ ಅರೆಭಾಷೆಗೆ ಸಂಬಂಧಿಸಿದ ವಿವಿಧ ವಿಷಯಗಳಡಿ ಸಂಶೋಧನೆಗಳನ್ನು ನಡೆಸಲಾಗಿತ್ತು. ಅದರಂತೆ ಡಾ. ಪುರುಷೋತ್ತಮ ಕೆ.ವಿ., ಬೇಕಲ್ ಲೀಲಾವತಿ, ಲೋಕೇಶ್ ಪೆರ್ಲಂಪಾಡಿ, ಕೆ.ಆರ್.ತೇಜ ಕುಮಾರ್, ಡಿ.ಸಿ.ನಂಜುಂಡ ಮತ್ತು ಸೀತಾರಾಮ ಕೇವಳ ಅವರ ಸಂಶೋಧನಾ ಪುಸ್ತಕಗಳನ್ನು ಬಿಡುಗಡೆಮಾಡಲಾಗುತ್ತದೆಂದು ಮಾಹಿತಿಯನ್ನಿತ್ತರು.

ವಿವಿಧ ಪುಸ್ತಕಗಳ ಅನಾವರಣ :: ಪುಸ್ತಕ ಪ್ರಕಟಣೆಗಾಗಿ ಅಕಾಡೆಮಿ ನಿಡಿದ್ದ ಆಹ್ವಾನದಂತೆ ವಿವಿಧ ಲೇಖಕರು ಸಲ್ಲಿದ್ದ ಪುಸ್ತಕಗಳಲ್ಲಿ ಆಯ್ದೆ ಪುಸ್ತಕಗಳ ಲೋಕಾರ್ಪಣೆ ಕಾರ್ಯ ಇದೇ ಸಂದರ್ಭ ನಡೆಸಲು ಉದ್ದೇಶಿಸಲಾಗಿದೆ. ವಿಮಲಾ ಅರುಣ ಅವರ ‘ಸೂಂತ್ರಿ’, ಕುಕ್ಕನೂರು ರೇಷ್ಮ ಅವರ ‘ಕಥಾ ಸಂಕಲನ’, ಲೀಲಾ ದಾಮೋದರ ಅವರು ರಚಿಸಿರುವ ‘ಸಾಲು ದೀಪ’ ಪುಸ್ತಕ ಬಿಡುಗಡೆಯಾಗಲಿದೆಯೆಂದು ವಿವರಗಳನ್ನಿತ್ತರು.

ವಾದ್ಯ ಪರಿಕರಗಳ ವಿತರಣೆ :: ಸಮಾರಂಭದಲ್ಲಿ ಅಕಾಡೆಮಿ ವತಿಯಿಂದ ಅರೆಭಾಷೆ ಮಾತನಾಡುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳನ್ನು ವಿತರಿಸಲಾಗುವುದೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ಪೂಲಕಂಡ ಸಂದೀಪ್ ಹಾಗೂ ಪೊನ್ನಚ್ಚನ ಮೋಹನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.23 NEWS DESK :  ದಸರಾ ಹಬ್ಬ ಹಿನ್ನೆಲೆ ನವರಾತ್ರಿ ಉತ್ಸವಕ್ಕೆ ಸಾಕ್ಷಿಯಾಗಿದ್ದ ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಛತಾ…

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.