
ಮಡಿಕೇರಿ NEWS DESK ಫೆ.15 : ಪುಂಡಾನೆ ಸೆರೆ ಕಾರ್ಯಾಚರಣೆ ಕುರಿತು ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪುಂಡಾನೆ ಸೆರೆ ಹಿಡಿಯಲು ಅರಣ್ಯ ಸಚಿವರು ಆದೇಶ ನೀಡಿದ ಬಳಿಕ ಶನಿವಾರ ಬೆಳಗ್ಗೆಯಿಂದ ಕಾರ್ಯಾಚರಣೆ ಕೈಗೊಂಡು ಕಾಡಾನೆಯನ್ನು ದುಬಾರೆ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಕಾಡಾನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಸುಮಾರು 15 ಕಿ.ಮೀ ದೂರದವರೆಗೆ ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸುಮಾರು 22 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು, ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾರ್ಯಕ್ಕೆ ಶೀಘ್ರವಾಗಿ ಚಾಲನೆ ನೀಡಲಾಗುವುದು ಎಂದರು. ಅರಣ್ಯ ಇಲಾಖಾಧಿಕಾರಿಗಳ ಜೊತೆ ವಿಶೇಷ ಪ್ರವಾಸ ಆಯೋಜಿಸಿ, ಬೆಳೆಗಾರರು, ಕೃಷಿಕರು, ಸ್ಥಳೀಯರೊಂದಿಗೆ ಚರ್ಚಿಸಿ, ಸೂಕ್ಷö್ಮ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುವುದು ಎಂದರು.








