Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿವಿ ಮುಚ್ಚದಂತೆ ಜಿಲ್ಲಾ ಯುವ ಒಕ್ಕೂಟ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿವಿ ಮುಚ್ಚದಂತೆ ಜಿಲ್ಲಾ ಯುವ ಒಕ್ಕೂಟ ಒತ್ತಾಯ*

ಫೆಬ್ರವರಿ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.17 NEWS DESK : ಕೊಡಗು ಜಿಲ್ಲೆಗೆ ಕಳಸಪ್ರಾಯದಂತೆ ಇರುವ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶಕ್ತಿ ತುಂಬಬಲ್ಲ ಕೊಡಗು ವಿಶ್ವ ವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರಾದ ಪಿ.ಪಿ.ಸುಕುಮಾರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆಗೆ ಪ್ರತ್ಯೇಕವಾದ ವಿಶ್ವ ವಿದ್ಯಾಲಯ ಬೇಕು ಎನ್ನುವ ಚಿಂತಕರ, ಜ್ಞಾನದಾಹಿಗಳ ಹಾಗೂ ವಿದ್ಯಾರ್ಥಿಗಳ ಕನಸು ಸುಮಾರು ಎರಡು ವರ್ಷಗಳ ಹಿಂದೆ ನನಸಾಯಿತು. ಆದರೆ ಪ್ರಸ್ತುತ ರಾಜ್ಯದಲ್ಲಿರುವ ಸರ್ಕಾರ ವಿವಿಯನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದ್ದು, ಇದು ಕೊಡಗಿನ ಜನರ ಭಾವನೆಗೆ ವಿರುದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಶ್ವ ವಿದ್ಯಾಲಯವೆಂದರೆ ವಿದ್ವಾಂಸರ ಕೂಟವಿರುವ ಜ್ಞಾನದ ಒಡಲು, ಜಗತ್ತಿನ ಭೂಪಟದಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಈ ವಿವಿಯನ್ನು ಉಳಿಸಿ ಬೆಳೆಸುವ ಅಗತ್ಯವಿತ್ತು. ಈ ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಸವರಾಜು ಬೊಮ್ಮಾಯಿ ಅವರು ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚುರಂಜನ್ ಅವರುಗಳ ಮನವಿಗೆ ಸ್ಪಂದಿಸಿ ವಿವಿಯನ್ನು ಮಂಜೂರು ಮಾಡಿದರು. ನಾಗಲೋಟದಲ್ಲಿ ಬೆಳೆಯುತ್ತಿರುವ ಕುಶಾಲನಗರ ಪಟ್ಟಣದ ಸಮೀಪ ಸಾಕಷ್ಟು ವಿಸ್ತಾರವಾದ ಭೌಗೋಳಿಕ ಪ್ರದೇಶವಿರುವ ಚಿಕ್ಕ ಅಳುವಾರದಲ್ಲಿ ವಿವಿಯನ್ನು ಸ್ಥಾಪಿಸಲಾಯಿತು. ಕೊಡಗು ವಿಶ್ವವಿದ್ಯಾಲಯದ ಹಲವಾರು ಸ್ನಾತಕೋತ್ತರ ಪದವಿ ತರಗತಿಗಳು ವಿಶ್ವವಿದ್ಯಾಲಯದ ಅಧೀನ ಕಾಲೇಜಾಗಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಪ್ರಾರಂಭವಾಯಿತು. ಕೊಡಗು ವಿವಿ ಪ್ರಸ್ತುತ 24 ಸಂಯೋಜಿತ ಕಾಲೇಜುಗಳನ್ನು ಹೊಂದಿದೆ. ಇವುಗಳಲ್ಲಿ 7 ಸರಕಾರಿ ಕಾಲೇಜು, 3 ಅನುದಾನಿತ ಕಾಲೇಜು, 1 ವಿಶ್ವವಿದ್ಯಾಲಯ ಕಾಲೇಜು, 13 ಖಾಸಗಿ ಕಾಲೇಜುಗಳಾಗಿದ್ದು, ಗುಣಾತ್ಮಕ ಮತ್ತು ಕೌಶಲ್ಯ ಆಧಾರಿತ ಶಿಕ್ಷಣವನ್ನು ನೀಡುತ್ತಿದೆ. ಈ ಮೊದಲು ಕೊಡಗಿನ ವಿದ್ಯಾರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ಕಾರ್ಯಕೈಗೊಳ್ಳುವುದು ಗಗನ ಕುಸುಮವಾಗಿತ್ತು. ಪದವಿ ಸ್ನಾತಕೋತ್ತರ ಪದವಿ, ಪಿಹೆಚ್‍ಡಿ ಪದವಿ ಪಡೆಯಲು ದೂರದ ವಿಶ್ವವಿದ್ಯಾಲಯಗಳಿಗೆ ಹೋಗಬೇಕಾಗಿತ್ತು. ಜೊತೆಗೆ ಲಕ್ಷಾಂತರ ಹಣವನ್ನು ಊಟ, ವಸತಿ, ಪ್ರಯಾಣಕ್ಕಾಗಿ ಖರ್ಚು ಮಾಡಬೇಕಾಗಿತ್ತು. ಕೊಡಗಿನ ರೈತಾಪಿ ವರ್ಗದ ಮಕ್ಕಳು, ಹಾಡಿ ಮಕ್ಕಳು, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಮೊಟಕುಗೊಳಿಸಬೇಕಾಗಿತ್ತು. ಆದರೆ ಇಂದು ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್‍ಡಿ ಸಂಶೋಧನಾ ಪದವಿಗಳು ಕೊಡಗಿನ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿಶ್ವವಿದ್ಯಾಲಯವೆಂದರೆ ಕೇವಲ ಸಾಂಪ್ರದಾಯಿಕ ಪದವಿ ಶಿಕ್ಷಣ ನೀಡುವುದಲ್ಲ. ಕೃಷಿ, ಪ್ರವಾಸೋದ್ಯಮ, ಸಂಸ್ಕೃತಿ, ಅಚಾರ ವಿಚಾರ, ಕಲೆ, ಸಾಹಿತ್ಯ, ಭಾಷೆಯನ್ನು ಬೆಳೆಸಲು ಮತ್ತು ಸಂರಕ್ಷಿಸಲು ವಿಶ್ವವಿದ್ಯಾಲಯ ಅಗತ್ಯವಾಗಿದೆ. ಕೊಡಗು ವಿಶ್ವವಿದ್ಯಾಲಯದಿಂದ ಕೊಡಗು ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ, ರಾಜ್ಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಭಾಗ್ಯ ಸಿಗುತ್ತದೆ. ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ವೈಜ್ಞಾನಿಕ, ಸಂಶೋಧನಾತ್ಮಕ ರೂಪದಲ್ಲಿ ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳಬಹುದು. ಕೊಡಗು ವಿವಿ ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ದೊರೆಯುತ್ತದೆ. ವಿವಿಯಿಂದ ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತದೆ. ವಿಶ್ವದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಬಹುದಾಗಿದೆ. ಬಡ ವಿದ್ಯಾರ್ಥಿಗಳ ಹಾಗೂ ಕೊಡಗಿನ ಪ್ರಗತಿಗೆ ವಿವಿ ಹೆಚ್ಚು ಸಹಕಾರಿಯಾಗಿದ್ದು, ಮುಚ್ಚುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಸುಕುಮಾರ್ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.