Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸ್ಕೀಂ ವಂಚನೆ : ಐವರು ಆರೋಪಿಗಳ ಬಂಧನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಸ್ಕೀಂ ವಂಚನೆ : ಐವರು ಆರೋಪಿಗಳ ಬಂಧನ

ಫೆಬ್ರವರಿ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.17 NEWS DESK : ಯಾವುದೇ ಅಧಿಕೃತ ದಾಖಲಾತಿಗಳನ್ನು ಹೊಂದದೆ ವಂಚನೆ ಮಾಡುವ ಉದ್ದೇಶದಿಂದ ಗ್ರಾಹಕರಿಂದ ಹಣವನ್ನು ಸಂಗ್ರಹಿಸುತ್ತಿದ್ದ ಆರೋಪದಡಿ ಎಸ್.ವಿ ಸ್ಮಾರ್ಟ್ ವಿಷನ್ ಎಂಬ ಸ್ಕೀಂನ ಮಾಲೀಕ ಸೇರಿದಂತೆ ಐವರು ಆರೋಪಿಗಳನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಸ್ಕೀಂ ಮಾಲೀಕ ಮಂಗಳೂರು ಸುರತ್ಕಲ್ ಮೂಲದ ಮಹಮದ್ ಅಶ್ರಫ್(37), ಮಡಿಕೇರಿಯ ಮಲ್ಲಿಕಾರ್ಜುನ ನಗರದ ನಿವಾಸಿ ಎಂ.ವೈ.ಸುಲೈಮಾನ್(37), ತ್ಯಾಗರಾಜ ಕಾಲೋನಿಯ ಅಬ್ದುಲ್ ಗಫೂರ್(34), ಮೊಹಮದ್ ಅಕ್ರಮ್(34) ಹಾಗೂ ಕುಂಬಳಕೇರಿ ನಿವಾಸಿ ಹೆಚ್.ಎನ್.ಕಿಶೋರ್(41) ಬಂಧಿತ ಆರೋಪಿಗಳಾಗಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಣಿಪೇಟೆಯಲ್ಲಿ ಜನವರಿ 30ರಿಂದ ಎಸ್.ವಿ. ಸ್ಮಾರ್ಟ್ ವಿಷನ್ ಸ್ಕೀಂ ನಡೆಸಲಾಗುತ್ತಿದ್ದು, ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿದ್ದರು. ಈ ಸ್ಕೀಂನಲ್ಲಿ ಈಗಾಗಲೇ 1100ಕ್ಕೂ ಅಧಿಕ ಮಂದಿ ಸೇರಿಕೊಂಡಿದ್ದಾರೆ. ಸ್ಕೀಂಗೆ ಸೇರಲು ಪ್ರತಿ ತಿಂಗಳು ರೂ. 1 ಸಾವಿರದಂತೆ 24 ಕಂತುಗಳನ್ನು ಗ್ರಾಹಕರು ಕಟ್ಟಬೇಕಾಗಿರುತ್ತದೆ. ಪ್ರತಿ ತಿಂಗಳ 30ನೇ ತಾರೀಖಿನಂದು ಸಂಜೆ 5 ಘಂಟೆಗೆ ಲಕ್ಕಿ ಡ್ರಾ ಮಾಡಿ ಫಲಿತಾಂಶವನ್ನು ವಾಟ್ಸ್ ಅಪ್ ಗ್ರೂಪ್ ಮೂಲಕ ತಿಳಿಸಿ ಬಹುಮಾನವನ್ನು 50-60 ದಿನಗಳಲ್ಲಿ ಗ್ರಾಹಕರಿಗೆ ನೀಡಲಾಗುವುದು. 20 ತಿಂಗಳ ಲಕ್ಕಿ ಡ್ರಾನಲ್ಲಿ ಒಟ್ಟು 96 ಜನರಿಗೆ ವಿವಿಧ ರೀತಿಯ ಬಹುಮಾನವನ್ನು ನೀಡುವುದಾಗಿ ಘೋಷಿಸಿಕೊಂಡಿದ್ದರು ಎಂದರು. ಇಂತಹ ಸ್ಕೀಂಗಳನ್ನು ನಡೆಸುವವರು ಬ್ಯಾಂಕಿಂಗ್ ಸಹಿತ ವಿವಿಧ ಇಲಾಖೆಗಳ ಅನುಮತಿ ಮತ್ತು ಪರವಾನಗಿ ಪಡೆದಿರಬೇಕು ಎಂಬ ನಿಯಮವಿದೆ. ಅಲ್ಲದೇ ಸಾರ್ವಜನಿಕರಿಂದ ಠೇವಣಿ ಮಾದರಿಯಲ್ಲಿ ಹಣ ಸಂಗ್ರಹಿಸುವ ಮುನ್ನ ಬ್ಯಾಂಕಿಂಗ್ ವಲಯದ ಅನುಮತಿ ಪಡೆದಿರಬೇಕು. ಆದಾಯ ತೆರಿಗೆ, ಜಿಎಸ್‍ಟಿ ಪಾವತಿಗೆ ಸಂಬಂಧಿಸಿದಂತೆ ದಾಖಲಾತಿ ಹೊಂದಿರಬೇಕು. ಆದರೆ ಎಸ್.ವಿ ಸ್ಮಾರ್ಟ್ ಮಿಷನ್ ಎಂಬ ಸ್ಕೀಂ ನಡೆಸುತ್ತಿದ್ದವರು ಯಾವುದೇ ದಾಖಲೆ, ಪರವಾನಗಿ ಪಡೆಯದೆ ಸ್ಕೀಂ ನಡೆಸುತ್ತಿದ್ದರು ಎಂದು ವಿವರಿಸಿದರು. ಮೊದಲನೇ ತಿಂಗಳ ಬಹುಮಾನವಾಗಿ ಒಬ್ಬರಿಗೆ ಥಾರ್ ಜೀಪ್ ಹಾಗೂ 8 ಜನರಿಗೆ ಬೈಕ್ ನೀಡಬೇಕಾಗಿದ್ದು, ಥಾರ್ ಜೀಪ್ ಬದಲಾಗಿ ರೂ.7.60 ಲಕ್ಷ ಮತ್ತು 7 ಜನರಿಗೆ ರೂ. 43 ಸಾವಿರ ಚೆಕ್ ಅನ್ನು ನೀಡಿದ್ದಾರೆ. ಪೊಲೀಸ್ ಗುಪ್ತದಳದ ಸಿಬ್ಬಂದಿ ಮೂಲಕ ಪಡೆದ ಮಾಹಿತಿ ಆಧರಿಸಿ ಈ ಸ್ಕೀಂ ವಿರುದ್ಧ ನಗರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಲಾಗಿದೆ. ಸ್ಕೀಂ ನಡೆಸುತ್ತಿದ್ದ ಕಟ್ಟಡ ಕಚೇರಿಯಲ್ಲಿದ್ದ ವಿವಿಧ ಉಪಕರಣಗಳನ್ನು ಇದೀಗ ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಇವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯವಿರುವ ಕಾರಣ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗುತ್ತದೆ ಎಂದು ಕೆ.ರಾಮರಾಜನ್ ಹೇಳಿದರು.
::: ಮೋಸ ಹೋಗಬೇಡಿ :::
ಇಂತಹ ಅನಧಿಕೃತ ಸ್ಕೀಂಗಳನ್ನು ನಂಬಿ ಸಾರ್ವಜನಿಕರು ಯಾರು ಮೋಸ ಹೋಗಬಾರದು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದರು. ಜಿಲ್ಲೆಯಲ್ಲಿ ಇಂತಹ ಮತ್ತೊಂದು ಸ್ಕೀಂ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರೆತ್ತಿದ್ದು, ಅದರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುತ್ತದೆ. ಎಸ್.ವಿ ಸ್ಮಾರ್ಟ್ ಮಿಷನ್ ಎಂಬ ಹೆಸರಿನ ಸ್ಕೀಂನಲ್ಲಿ ಹಣವನ್ನು ಹೂಡಿಕೆ ಮಾಡಿ ವಂಚನೆಗೆ ಒಳಗಾದವರು ಸೂಕ್ತ ದಾಖಲಾತಿಗಳೊಂದಿಗೆ ಮಡಿಕೇರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ಎಸ್.ಪಿ.ರಾಮರಾಜನ್ ಮನವಿ ಮಾಡಿದರು. ಮಡಿಕೇರಿ ಡಿವೈಎಸ್‍ಪಿ ಪಿ.ಎ.ಸೂರಜ್, ವೃತ್ತ ನಿರೀಕ್ಷಕ ಪಿ.ಕೆ.ರಾಜು, ನಗರ ಠಾಣಾಧಿಕಾರಿ ಸಿ.ವಿ.ಶ್ರೀಧರ್, ಅಪರಾಧ ವಿಭಾಗದ ಠಾಣಾಧಿಕಾರಿ ರಾಧ, ನಗರ ಠಾಣೆ ಹಾಗೂ ಕ್ರೈಂ ವಿಭಾಗದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.