Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟ್ರೀಯ ಒಕ್ಕೂಟ ಬೆಂಬಲ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟ್ರೀಯ ಒಕ್ಕೂಟ ಬೆಂಬಲ

ಫೆಬ್ರವರಿ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಫೆ.17 : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟ್ರೀಯ  ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಬೆಂಬಲ ಸೂಚಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆಯೇ ನೌಕರರು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಸರಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ದೊರೆತ್ತಿತ್ತು. ಈ ಕಾರಣದಿಂದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರವನ್ನು ಕೈ ಬಿಟ್ಟಿದ್ದರು.
ಆದರೆ ಕೊಟ್ಟ ಭರವಸೆ ಇಲ್ಲಿಯವರೆಗೆ ಈಡೇರಿಲ್ಲ, ಇದರಿಂದ ಬೇಸರಗೊಂಡಿರುವ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರ ಕೆಲಸಗಳಿಗೆ ತೊಂದರೆಯಾಗುತ್ತಿದೆ. ಇವರಿಗೆ ಕೆಲವು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದೆ ಸರ್ಕಾರ ಹಿಂದೆ ಸರಿದಿದೆ. ಇವರುಗಳು ಕೆಲಸಕ್ಕೆ ಸೇರಿದ ನಂತರ ಇಂತಿಷ್ಟು ಸಮಯದ ಬಳಿಕ ವರ್ಗಾವಣೆಯನ್ನು ಮಾಡಬೇಕು. ವಯಸ್ಸಾದ ತಂದೆ, ತಾಯಂದಿರು, ಪತಿ-ಪತ್ನಿ ಬೇರೆ ಊರಿನಲ್ಲಿ ಕೆಲಸದಲ್ಲಿದ್ದಾಗ ವರ್ಗಾವಣೆ ಕೇಳುವುದರಲ್ಲಿ ತಪ್ಪೇನಿಲ್ಲ. ಕೆಲವು ಗ್ರಾಮಗಳು ಇವರ ಕಾರ್ಯ ವ್ಯಾಪ್ತಿಗೆ ಬಂದಾಗ ಕಚೇರಿ, ಶೌಚಾಲಯಗಳು ಇತ್ಯಾದಿ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕಾಗಿದೆ. ಮಳೆಗಾಲದಲ್ಲಿ ಮನೆಗಳು ಬಿದ್ದಾಗ ಸ್ಥಳ ಪರಿಶೀಲನೆಗೆ ತಮ್ಮ ಸ್ವಂತ ಖರ್ಚಿನಲ್ಲಿಯೇ ಹೋಗಬೇಕು ಮತ್ತು ಮಹಿಳಾ ಗ್ರಾಮ ಆಡಳಿತ ಅಧಿಕಾರಿಗಳು ಒಬ್ಬರೇ ಕಾಡು, ಗುಡ್ಡ ಪ್ರದೇಶದಲ್ಲಿ ಸಂಚರಿಸಬೇಕು. ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶದಲ್ಲಿ ಹೆಚ್ಚು ಕಷ್ಟ ಪಡುತ್ತಿದ್ದಾರೆ. ರಾಜ್ಯ ಸರ್ಕಾರ ಇವರ ಬೇಡಿಕೆಗಳನ್ನು ಶೀಘ್ರ ಈಡೇರಿಸುವ ಮೂಲಕ ಸಾರ್ವಜನಿಕರ ಕೆಲಸಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹರೀಶ್ ಜಿ.ಆಚಾರ್ಯ ಒತ್ತಾಯಿಸಿದರು. ಈ ಬಗ್ಗೆ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರವನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.23 NEWS DESK :  ದಸರಾ ಹಬ್ಬ ಹಿನ್ನೆಲೆ ನವರಾತ್ರಿ ಉತ್ಸವಕ್ಕೆ ಸಾಕ್ಷಿಯಾಗಿದ್ದ ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಛತಾ…

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.