Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಸದ ಯದುವೀರ್ ಪ್ರಯತ್ನಕ್ಕೆ ಸಂದ ಫಲ : ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

*ಸಂಸದ ಯದುವೀರ್ ಪ್ರಯತ್ನಕ್ಕೆ ಸಂದ ಫಲ : ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ*

ಫೆಬ್ರವರಿ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನವದೆಹಲಿ NEWS DESK ಫೆ.17 : ಪರವಾನಗಿ ರಹಿತ ತಂಬಾಕು ಬೆಳಡಗಾರರಿಗೆ ಮಾರಾಟಕ್ಕೆ ಅವಕಾಶ ನೀಡಬೇಕು ಹಾಗೂ ಅವರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡಬೇಕೆಂದು *ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್* ಮಾಡಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಕರ್ನಾಟಕದ ಬೆಳಗಾರರಿಗೆ ಖುಷಿ ಸುದ್ದಿ ನೀಡಿದೆ. ಪರವಾನಗಿ ರಹಿತ ತಂಬಾಕು ಬೆಳೆಗಾರರು ಎಫ್ ಸಿ ವಿ ತಂಬಾಕು ಮಾರಾಟ ಮಾಡಲು ಅವಕಾಶ ನೀಡಲು ಹಾಗೂ ದಂಡ ವಿಧಿಸದೆ ಇರಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನವದೆಹಲಿಯಲ್ಲಿ ಸಂಸದ ಯದುವೀರ್ ಈ ಕುರಿತು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹವಾಗಿದೆ. ಇದರಿಂದ ಸಾವಿರಾರು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಎಫ್.ಸಿ.ವಿ. ತಂಬಾಕನ್ನು 53,325 ಹೆಕ್ಟೇರ್ ಪ್ರದೇಶದಲ್ಲಿ ಬೆಳಯಲಾಗುತ್ತಿದ್ದು 40,487 ನೋಂದಾಯಿತ ಹಾಗೂ 12,838 ಪರವಾನಗಿ ರಹಿತ ಬೆಳೆಗಾರರು ಬೆಳೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ ಪ್ರಮುಖವಾಗಿ 12,838 ತಂಬಾಕು ಬೆಳೆಗಾರರಿಗೆ ಅನುಕೂಲವಾಗಲಿದೆ. ಕರ್ನಾಟಕ ತಂಬಾಕು ಬೆಳೆಗಾರರ ಸಂಕಷ್ಟವನ್ನು  ನಿವಾರಿಸಲು ಕೇಂದ್ರ ಬಿಜೆಪಿ ಸರ್ಕಾರ ಸಮರ್ಪಕ ನಿರ್ಧಾರ ಕೈಗೊಂಡಿದೆ ಎಂದು ಸಂಸದರು ತಿಳಿಸಿದ್ದಾರೆ. ಕಳೆದ ಮೇ ಮತ್ತು ಜೂನ್ ತಿಂಗಳಿನಲ್ಲಿ ಸುರಿದ ಭಾರಿ ಮಳೆಯಿಂದ ತಂಬಾಕು ಬೆಳೆ ನಷ್ಟವಾಗಿತ್ತು. ತಂಬಾಕು ಬೆಳೆ ಉಳಿಸಲು ಪರ್ಯಾಯ ಕ್ರಮಗಳನ್ನು ಕೈಗೊಳ್ಳುತ್ತಿದ್ದರಿ‌ಂದ ಒಟ್ಟಾರೆಯಾಗಿ ಬೆಳೆಗಾರರಿಗೆ ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿತ್ರು. ಇದು ರೈತರನ್ನು ಸಂಕಷ್ಟಕ್ಕೆ ದೂಡಿತ್ತು ಎಂದು ಮನವರಿಕೆ ಮಾಡಿಕೊಡಲಾಗಿತ್ತು ಎಂದು ಸಂಸದರು ವಿವರಿಸಿದ್ದಾರೆ. ಕಳೆದ ಫೆಬ್ರವರಿ 6ರಂದು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮನವಿ ಅಲ್ಲ ಇಡಲಾಗಿತ್ತು. ಇದಕ್ಕೆ ಸಚಿವರು ಸ್ಪಂದಿಸಿ ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ ಎಂದು ಯದುವೀರ್ ವಿವರಿಸಿದ್ದಾರೆ. *ಪ್ರಧಾನಿ, ವಾಣಿಜ್ಯ ಸಚಿವರಿಗೆ ಅಭಿನಂದನೆ* ತಂಬಾಕು ಬೆಳೆಗಾರರಿಗೆ ಅನುಕೂಲಕರ ನಿರ್ಧಾರವನ್ನು ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ನಮ್ಮ ಕರ್ನಾಟಕದ ತಂಬಾಕು ಬೆಳೆಗಾರರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಅತ್ಯಂತ ತ್ವರಿತವಾಗಿ ಸಚಿವರು ತೀರ್ಮಾನ ಮಾಡಿರುವುದು ರಾಜ್ಯದ ಮತ್ತು ನಮ್ಮ ಕ್ಷೇತ್ರ ವ್ಯಾಪ್ತಿಯ ಬೆಳೆಗಾರರಿಗೆ ಸಾಕಷ್ಟು ನೆರವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, ಆ.16 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಬೆಂಗಳೂರಿನ…

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.