
ಮಡಿಕೇರಿ ಫೆ.18 NEWS DESK : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಬಿದ್ದಾಟಂಡ ವಾಡೆ ಮುಖಾಂತರ ಫುಲ್ಲೇರ, ಅಚ್ಚಾಂಡಿರ, ತಟಂಡ, ಮಲೇಯರ ಕುಟುಂಬಸ್ಥರ ಮನೆಗಳಿಗೆ ಹೋಗುವ ಸಂಪರ್ಕ ರಸ್ತೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ರೂ.5 ಲಕ್ಷದ ಅನುದಾನದಲ್ಲಿ ಕೈಗೊಳ್ಳಲಾದ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದೆ. ಸುಮಾರು 20 ವರ್ಷದಿಂದ ಅಭಿವೃದ್ಧಿ ಕಾಣದೆ ಇದ್ದ ಈ ರಸ್ತೆಯ ಕಾಮಗಾರಿಯನ್ನು ಮುತುವರ್ಜಿ ವಹಿಸಿ ಶಾಸಕರು ಅನುದಾನವನ್ನು ಬಿಡುಗಡೆಗೊಳಿಸಿದ್ದಕ್ಕೆ ಹಾಗೂ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಕೈಗೊಳ್ಳಲು ಸಹಕರಿಸಿದ ಬ್ಲಾಕ್ ಅಧ್ಯಕ್ಷರಾದ ಕೆ.ಎ. ಇಸ್ಮಾಯಿಲ್ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟ್ಟಿರ ಕುಶು ಕುಶಾಲಪ್ಪನವರಿಗೂ ಕೊಳಕೇರಿ ಗ್ರಾಮಸ್ಥರು ಸಲ್ಲಿಸಿದ್ದಾರೆ.









