Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಳ್ಳುಸೋಗೆ ಶಾಲೆಯಲ್ಲಿ ಮಕ್ಕಳ ಸಂಭ್ರಮದ ಕಲಿಕಾ ಹಬ್ಬ: ಕಲಿಕಾ ಹಬ್ಬವು ಮಕ್ಕಳ ಕಲಿಕೆಗೆ ಪ್ರೇರೇಣೆ : ಬಿ.ಎನ್.ಪುಷ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಳ್ಳುಸೋಗೆ ಶಾಲೆಯಲ್ಲಿ ಮಕ್ಕಳ ಸಂಭ್ರಮದ ಕಲಿಕಾ ಹಬ್ಬ: ಕಲಿಕಾ ಹಬ್ಬವು ಮಕ್ಕಳ ಕಲಿಕೆಗೆ ಪ್ರೇರೇಣೆ : ಬಿ.ಎನ್.ಪುಷ್ಪ*

ಫೆಬ್ರವರಿ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಫೆ.18 NEWS DESK :  ಮಕ್ಕಳ ಕಲಿಕಾ ಪ್ರತಿಭೆಗೆ ಹಲವಾರು ಶೈಕ್ಷಣಿಕ ಚಟುವಟಿಕೆಗಳುಳ್ಳ ಮಕ್ಕಳ ಕಲಿಕಾ ಹಬ್ಬವು ಮಕ್ಕಳ ಕಲಿಕಾ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ ಹೇಳಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಸೋಮವಾರಪೇಟೆ ‌ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಕ್ಲಸ್ಟರ್ ಕೇಂದ್ರದ ವತಿಯಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ( ಫೆ.18 ರಂದು ) ಎಫ್.ಎಲ್.ಎನ್.: “ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ(Foundation literacy and Numeracy) ಕುರಿತು ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಸಂಭ್ರಮದ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು. ಕಲಿಕಾ ಹಬ್ಬವು ಮಕ್ಕಳ ಪ್ರತಿಭೆ ಹೊರ ತರಲು ಹಾಗೂ ಅವರಲ್ಲಿ ಸಂತಸದ ಕಲಿಕೆಯೊಂದಿಗೆ ಅವರ ಪ್ರತಿಭಾನ್ವೇಷಣೆಗೆ ಸಹಕಾರಿಯಾಗಿದೆ ಎಂದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿನೂತನ ಚಟುವಟಿಕೆಗಳುಳ್ಳ ಕಲಿಕಾ ಹಬ್ಬವು ಮಕ್ಕಳ ಕಲಿಕೆಗೆ ಹೆಚ್ಚಿನ ಉತ್ತೇಜನ ನೀಡುವುದರೊಂದಿಗೆ ಅವರಲ್ಲಿ ಕಲಿಕಾ ಪ್ರೇರಣೆ ಬೆಳೆಸಲು ಸೂಕ್ತ ವೇದಿಕೆ ಒದಗಿಸುತ್ತದೆ. ಈ ಹಬ್ಬವು ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿದೆ ಎಂದು ಹೇಳಿದರು. ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಗುಣಮಟ್ಟದ ಶಿಕ್ಷಣ ಹಾಗೂ ‌ಮಕ್ಕಳ ಕಲಿಕಾ ಹಬ್ಬದ ಉದ್ದೇಶ ಮತ್ತು ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಮಕ್ಕಳ ಕಲಿಕಾ ಹಬ್ಬದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಸಿ.ಆರ್.ಪಿ.ಟಿ.ಈ.ವಿಶ್ವನಾಥ್ , ವಿದ್ಯಾರ್ಥಿಗಳು ತಾವು ಕಲಿತ ಪಾಠಗಳನ್ನೇ ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳ ಮೂಲಕ ಪ್ರದರ್ಶಿಸಿದರೆ, ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗುತ್ತದೆ. ಈ ಹಬ್ಬದಲ್ಲಿ ಮಕ್ಕಳಿಗೆ ಏಳು ವಿವಿಧ ಸ್ಪರ್ಧೆಗಳ ಮೂಲಕ ಅವರಲ್ಲಿ ಕಲಿಕಾ ಪ್ರೇರೇಪಣೆ ಬೆಳೆಸಲಾಗುತ್ತಿದೆ ಎಂದರು. ಕುಶಾಲನಗರ ಪಿ.ಎಂ.ಶ್ರೀ ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ಬಿ.ಎನ್.ಚಂದನ್ ಕುಮಾರ್, ಕಲಿಕಾ ಹಬ್ಬದಲ್ಲಿ ಮಕ್ಕಳು ಸಂತಸದಿಂದ ಪಾಲ್ಗೊಂಡಿರುವುದನ್ನು ಶ್ಲಾಘಿಸಿದರು.  ವಾಲ್ನೂರು- ತ್ಯಾಗತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ವಸಂತಕುಮಾರ್, ಈ ಹಬ್ಬವು ಮಕ್ಕಳಲ್ಲಿ ವ್ಯಕ್ತಿತ್ವ ಬೆಳೆಸಲು ಸಹಕಾರಿಯಾಗಿದೆ ಎಂದರು. ಮುಳ್ಳುಸೋಗೆ ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ರಶ್ಮಿ, ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್. ಭಾಗ್ಯ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಎಚ್.ಎಸ್.ಉಮಾದೇವಿ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ, ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಾದ ಎಸ್.ಕೆ.ಜಲಜಾಕ್ಷಿ, ಎಂ.ಎಂ. ಭಾರತಿ,ಸಾಕಮ್ಮ, ಲಕ್ಷ್ಮಿ, ಶಾಂತಲಾ, ವಿವಿಧ ಶಾಲೆಯ ಶಿಕ್ಷಕರು, ಪೋಷಕರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಶಿಕ್ಷಕಿ ಪಿ.ಆರ್.ದಿವ್ಯ ಸ್ವಾಗತಿಸಿದರು. ಶಿಕ್ಷಕಿ ಎಂ.ಬಿ. ಜಾನಕಿ ವಂದಿಸಿದರು.

ಮಕ್ಕಳ ಪ್ರತಿಭಾ ಅನಾವರಣ ::  ಎಫ್.ಎಲ್.ಎನ್.: “( ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ) ಕಲಿಕಾ ಹಬ್ಬದ ಅಂಗವಾಗಿ 1 ರಿಂದ 5 ನೇ ತರಗತಿ ವರೆಗಿನ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಮಕ್ಕಳು ಕಲಿಕಾ ಹಬ್ಬದಲ್ಲಿ ಗಟ್ಟಿ ಓದುವುದು, ಉತ್ತಮ ಕೈ ಬರಹ, ಸಂತಸದಾಯಕ ಗಣಿತ ಕಲಿಕೆ, ಜ್ಞಾಪನ ಶಕ್ತಿ ಪರೀಕ್ಷೆ, ಕಥೆ ಹೇಳುವುದು,ಮಕ್ಕಳ ಪಾಲಕರ ಸಂಬಂಧ ಸೇರಿದಂತೆ ವಿವಿಧ ಅಭ್ಯಾಸಾತ್ಮಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂತಸಪಟ್ಟರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.