Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿ.ಶೆಟ್ಟಿಗೇರಿಯಲ್ಲಿ ಎನ್‍ಎಸ್‍ಎಸ್ ವಾರ್ಷಿಕ ಶಿಬಿರ ಉದ್ಘಾಟನೆ : ಸೇವಾ ಚಟುವಟಿಕೆಗಳು ಸಮಾಜಕ್ಕೆ ಪೂರಕವಾಗಿರಬೇಕು : ಹೆಚ್.ಎನ್.ರಾಮಚಂದ್ರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿ.ಶೆಟ್ಟಿಗೇರಿಯಲ್ಲಿ ಎನ್‍ಎಸ್‍ಎಸ್ ವಾರ್ಷಿಕ ಶಿಬಿರ ಉದ್ಘಾಟನೆ : ಸೇವಾ ಚಟುವಟಿಕೆಗಳು ಸಮಾಜಕ್ಕೆ ಪೂರಕವಾಗಿರಬೇಕು : ಹೆಚ್.ಎನ್.ರಾಮಚಂದ್ರ*

ಫೆಬ್ರವರಿ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಫೆ.19 NEWS DESK : ಸೇವೆಗೆ ಕೊನೆಯಿಲ್ಲ. ಸೇವೆ ಎಂಬುವುದು ಏನು ಎಂಬುದನ್ನು ಅರಿತಲ್ಲಿ ಮಾತ್ರ ಗಾಂಧಿಜೀ ಕಂಡ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ಹೆಚ್.ಎನ್.ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಲೇಜು ಶಿಕ್ಷಣ ಇಲಾಖೆ, ಕೊಡಗು ವಿಶ್ವವಿದ್ಯಾನಿಲಯ, ವಿರಾಜಪೇಟೆ ಕಾವೇರಿ ಪದವಿ ಕಾಲೇಜು ಸಹಯೋಗದಲ್ಲಿ ಬಿ.ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ  ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸೇವಾ ಮನೋಭಾವವು ವಿದ್ಯಾರ್ಥಿ ಜೀವನ ದಿಸೆಯಲ್ಲಿ ಆರಂಭವಾಗಬೇಕು ಎಂಬ ಪರಿಕಲ್ಪನೆಯಿಂದ ಗಾಂಧಿಜೀ ಅವರು ಕಾಲೇಜುಗಳಲ್ಲಿ ಸೇವಾ ಘಟಕವನ್ನು ಆರಂಭಿಸಿದರು. ನಾಯಕತ್ವ ಗುಣಗಳನ್ನು ವಿದ್ಯಾರ್ಥಿ ಜೀವನದಿಂದಲೇ ಆರಂಭವಾದಲ್ಲಿ ಮಾತ್ರ ಉತ್ತಮ ನಾಯಕನಾಗಬಹುದು. ಸಾಮಾಜಿಕ ಪ್ರಜ್ಞೆ ಸರ್ವರಲ್ಲಿ ಜಾಗೃತವಾಗಬೇಕು. ದೇಶದಲ್ಲಿ ಹಲವು ರೀತಿಯಲ್ಲಿ ಸಂಭವಿಸಿದ್ದ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಸೇವಾ ಸಂಸ್ಥೆಗಳು ನಡೆಸಿದ ಕಾರ್ಯಗಳು ದೇಶ ಮೆಚ್ಚಿದೆ. ಅದರಂತೆ ಶಿಬಿರದಲ್ಲಿ ಕಲಿಯುವ ಪ್ರತಿಯೊಂದು ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸುಸಂಸ್ಕೃತವಾದ ಸಮಾಜ ನಿರ್ಮಾಣ ಮಾಡಲು ಪಣ ತೊಡುವಂತೆ ಶಿಬಿರಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಚೇರಂಡ ಕಾವೇರಮ್ಮ ಮೋಟಯ್ಯ ಮಾತನಾಡಿ, ರಾಷ್ಟ್ರ ಧರ್ಮ, ದೇಶ ಭಕ್ತಿ, ಸಮಾಜ ಸೇವೆ ಇವುಗಳು ಜೀವನದಲ್ಲಿ ನೆಲೆಯಾಗುವ ವಿಷಯಗಳಾಗಿವೆ. ಸ್ವಚ್ಚತೆ ಎಂಬುದು ಬಾಲ್ಯದಿಂದಲೆ ಆರಂಭವಾಗಬೇಕು.  ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ನಾಯಕನಾಗಲು ಪ್ರಯತ್ನಿಸಬೇಕು. ಶಿಬಿರದ ಆಯೋಜನೆಯಿಂದ ಗ್ರಾಮಗಳ ಅಭ್ಯುದಯವಾಗುತ್ತದೆ. ಏಳು ದಿನಗಳು ನಡೆಯುವ ಶಿಬಿರಕ್ಕೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಬೆನೆಡಿಕ್ಟ್ ಆರ್. ಸಲ್ದಾನಾ  ಶಿಬಿರಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸಮಾಜ ಮತ್ತು ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಸೃಷ್ಟಿ ಮಾಡಲು ಸಹಕಾರಿಯಾಗಿದೆ. ವ್ಯಕ್ತಿತ್ವ ನಿರ್ಮಾಣ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಲು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಸ.ಹಿ.ಪ್ರಾ ಶಾಲೆ ಬಿ.ಶೆಟ್ಟಿಗೇರಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ವೈ.ಸಿ.ಕವಿತಾ, ಕಾಫಿ ಬೆಳೆಗಾರರು ಮತ್ತು ಗ್ರಾಮದ ಹಿರಿಯರಾದ ನಾಮೇರ ರಾಮು ನಂಜಪ್ಪ, ಸ.ಹಿ.ಪ್ರಾ. ಶಾಲೆ ಬಿ.ಶೆಟ್ಟಿಗೇರಿ ಸಹ ಶಿಕ್ಷಕ ಅಪ್ಪದೇರಂಡ ಸುಜ್ಯೋತಿ ಸುರೇಶ್  ಉಪಸ್ಥಿತರಿದ್ದರು. ಎನ್.ಎಸ್.ಎಸ್.ಯೋಜನಾಧಿಕಾರಿಗಳಾದ ಬಿ.ಬಿ.ಸುನೀಲ್ ಕುಮಾರ್ ಸರ್ವರನ್ನು ಸ್ವಾಗತಿಸಿದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಮುತ್ತಮ್ಮ ನಿರೂಪಿಸಿದರು. ಇತಿಹಾಸ ಉಪನ್ಯಾಸಕರು ಮತ್ತು ಸಹ ಯೋಜನಾಧಿಕಾರಿಗಳಾದ ಸಿ.ಪಿ.ಅನುಪಮ ಅವರು ಸರ್ವರನ್ನು ವಂದಿಸಿದರು.  ಕಾವೇರಿ ಪದವಿ ಕಾಲೇಜು ವಿರಾಜಪೇಟೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಶಿಬಿರಾರ್ಥಿಗಳು, ಪದವಿ ಕಾಲೇಜಿನ ವಿವಿಧ ವಿಭಾಗಗಳ ಉಪನ್ಯಾಸಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿ.ಶೆಟ್ಟಿಗೇರಿಯ ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.