Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : 252 ಸಂತ್ರಸ್ತ ಕುಟುಂಬಗಳಿಗೆ ಮನೆ ಹಂಚಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : 252 ಸಂತ್ರಸ್ತ ಕುಟುಂಬಗಳಿಗೆ ಮನೆ ಹಂಚಿಕೆ*

ಫೆಬ್ರವರಿ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.19 NEWS DESK : 2018-19ನೇ ಸಾಲಿನಲ್ಲಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಮನೆ ಕಳೆದುಕೊಂಡ 252 ಸಂತ್ರಸ್ತ ಕುಟುಂಬಗಳಿಗೆ ‘ಮನೆ ಹಂಚಿಕೆ’ ಕಾರ್ಯವು ನಗರದ ಜಿ.ಪಂ.ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಇನ್ಫೋಸಿಸ್ ಸಂಸ್ಥೆಯ ಸುನಿಲ್ ಕುಮಾರ್, ಸಂತೋಷ್ ಹಾಗೂ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರ ಉಪಸ್ಥಿತಿಯಲ್ಲಿ ಲಾಟರಿ ಮೂಲಕ ‘ಮನೆ ಹಂಚಿಕೆ’ ಕಾರ್ಯವು ಪಾರದರ್ಶಕವಾಗಿ ನಡೆಯಿತು. ‘ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ಇನ್ಫೋಸಿಸ್ ಸಂಸ್ಥೆ ವತಿಯಿಂದ ನಿರ್ಮಾಣವಾಗಿರುವ 200 ಮನೆಗಳು ಸೇರಿದಂತೆ ಜಂಬೂರಿನಲ್ಲಿ ಇಂಡಿಯನ್ ಹ್ಯಾಬಿಟೇಟ್ ಸಂಸ್ಥೆಯಿಂದ ನಿರ್ಮಾಣವಾಗಿರುವ 4 ಮನೆಗಳು, ಜೊತೆಗೆ ಮದೆನಾಡು ಬಳಿ 4, ಕೆ.ನಿಡುಗಣೆ ಬಳಿ 2, ಗಾಳಿಬೀಡು ಬಳಿ 42 ಸೇರಿದಂತೆ ಒಟ್ಟು 252 ಮನೆಗಳ ಹಂಚಿಕೆ ಕಾರ್ಯವು ಸಂತ್ರಸ್ತರ ಸಮ್ಮುಖದಲ್ಲಿ ಮಾಡಲಾಯಿತು. ಲಾಟರಿ ತೆಗೆಯುವ ಮೂಲಕ ಸಂತ್ರಸ್ತರೇ ತಮ್ಮ ಮನೆ ಸಂಖ್ಯೆ ಆಯ್ಕೆ ಮಾಡಿಕೊಂಡರು.’ ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, 2018-19 ರಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡಿದ್ದ ಬಾಕಿ ಕುಟುಂಬದವರಿಗೆ ಮನೆ ಹಂಚಿಕೆ ಮಾಡಲಾಗುತ್ತಿದೆ. ಇನ್ಫೋಸಿಸ್ ಸಂಸ್ಥೆಯಿಂದ 200 ಮನೆಗಳು ಸೇರಿದಂತೆ ಹ್ಯಾಬಿಟೇಟ್ ಸಂಸ್ಥೆಯಿಂದ ವಿವಿಧ ಕಡೆಗಳಲ್ಲಿ ನಿರ್ಮಿಸಿರುವ 52 ಮನೆಗಳನ್ನು ಲಾಟರಿ ಮೂಲಕ ಪಾರದರ್ಶಕವಾಗಿ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ವಿವರಿಸಿದರು. ಮನೆ ಹಂಚಿಕೆ ಸಂಬಂಧ ಈಗಾಗಲೇ ಆಕ್ಷೇಪಣೆಗೂ ಸಹ ಅವಕಾಶ ಕಲ್ಪಿಸಲಾಗಿತ್ತು. ಆಕ್ಷೇಪಣೆ ಸಂಬಂಧ ಎಲ್ಲಾ ರೀತಿ ಪರಿಶೀಲಿಸಿ ಬಾಕಿ ಇರುವ ಸಂತ್ರಸ್ತ ಕುಟುಂಬಗಳಿಗೆ ಪಾರದರ್ಶಕವಾಗಿ ಲಾಟರಿ ಮೂಲಕ ಮನೆ ಹಂಚಿಕೆ ಮಾಡಲಾಗಿದೆ ಎಂದು ವೆಂಕಟ್ ರಾಜಾ ಹೇಳಿದರು. ‘ಈಗಾಗಲೇ ಲಾಟರಿ ಮೂಲಕ ಮನೆ ಹಂಚಿಕೆ ಮಾಡಲಾಗಿದ್ದು, ಮನೆ ಹಕ್ಕುಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಿಂದ ಶೀಘ್ರ ವಿತರಿಸಲಾಗುವುದು ಎಂದು ಅವರು ತಿಳಿಸಿದರು.’ ಇನ್ಫೋಸಿಸ್ ಸಂಸ್ಥೆಯ ಪ್ರಮುಖರಾದ ಸುನಿಲ್ ಕುಮಾರ್ ಮಾತನಾಡಿ 2018 ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಹಲವು ಕುಟುಂಬಗಳು ಮನೆ ಕಳೆದುಕೊಂಡರು. ಈ ಹಿನ್ನೆಲೆ ಇನ್ಫೋಸಿಸ್ ಸಂಸ್ಥೆಯು ಸಾಧ್ಯವಾದಷ್ಟು ಸಹಕಾರ ನೀಡಬೇಕು ಎಂಬ ಉದ್ದೇಶದಿಂದ ಜಂಬೂರಿನಲ್ಲಿ 200 ಮನೆಗಳನ್ನು ನಿರ್ಮಿಸಲು ಮುಂದಾಯಿತು. ಆ ನಿಟ್ಟಿನಲ್ಲಿ 34 ಕೋಟಿ ರೂ. ವೆಚ್ಚದಲ್ಲಿ 200 ಮನೆಗಳನ್ನು ನಿರ್ಮಿಸಲಾಗಿದೆ ಎಂದರು. ಎರಡು ಬೆಡ್‍ರೂಮ್ ಒಳಗೊಂಡ ಲೈಟಿಂಗ್ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು ಮನೆ ಒಳಗೊಂಡಿದೆ. ಸರ್ಕಾರ ಹಾಗೂ ಜಿಲ್ಲಾಡಳಿತದ ನಿರಂತರ ಪರಿಶ್ರಮದಿಂದ ಈ ಕಾರ್ಯ ಆಗಿದೆ ಎಂದು ಅವರು ನುಡಿದರು. ಇನ್ಫೋಸಿಸ್ ಸಂಸ್ಥೆಯ ಮತ್ತೊಬ್ಬ ಪ್ರತಿನಿಧಿ ಸಂತೋಷ್ ಮಾತನಾಡಿ ಪ್ರತಿಯೊಬ್ಬರ ಬದುಕಿನಲ್ಲಿ ವಸತಿ ಅವಶ್ಯಕ. ಆ ನಿಟ್ಟಿನಲ್ಲಿ ಸಂತ್ರಸ್ತರ ನೆಮ್ಮದಿಗೆ ಇನ್ಫೋಸಿಸ್ ಸಂಸ್ಥೆ ಸರ್ಕಾರದ ಜೊತೆ ಕೈಜೋಡಿಸಿದೆ. ಪ್ರತಿಯೊಬ್ಬರಿಗೂ ನೆಮ್ಮದಿಯ ಬದುಕು ಅತ್ಯಗತ್ಯ ಎಂದು ಹೇಳಿದರು. ಉಪ ವಿಭಾಗಾಧಿಕಾರಿ ಹಾಗೂ ಮನೆ ಹಂಚಿಕೆ ನೋಡಲ್ ಅಧಿಕಾರಿ ವಿನಾಯಕ ನರ್ವಾಡೆ ಅವರು ಮಾತನಾಡಿ ಸಂತ್ರಸ್ತರು ಮೊದಲ ಆದ್ಯತೆಯಲ್ಲಿ ಗಾಳಿಬೀಡು, ಎರಡನೇ ಆದ್ಯತೆಯಲ್ಲಿ ಜಂಬೂರು ಆಯ್ಕೆ ಮಾಡಿದ್ದರು. ಇನ್ಫೋಸಿಸ್ ಸಂಸ್ಥೆಯ 200 ಮನೆಗಳು ಜೊತೆಗೆ ವಿವಿಧ ಪ್ರದೇಶದ 52 ಮನೆಗಳನ್ನು ಪಾರದರ್ಶಕವಾಗಿ ಹಂಚಿಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮತ್ತಷ್ಟು ಮಾಹಿತಿ ::  ಈ ಹಿಂದೆ ಬಿಳಿಗೇರಿಯಲ್ಲಿ 22, ಕರ್ಣಂಗೇರಿಯಲ್ಲಿ 35, ಮದೆನಾಡು ಬಳಿ 76, ಕೆ.ನಿಡುಗಣೆ ಬಳಿ 74, ಜಂಬೂರಿನಲ್ಲಿ 379 ಮನೆಗಳು ಸೇರಿದಂತೆ ಒಟ್ಟು 586 ಮನೆಗಳು ಹಂಚಿಕೆಯಾಗಿತ್ತು. ಬುಧವಾರ ಮನೆ ಹಂಚಿಕೆ ಮಾಡಲಾದ 252 ಮನೆಗಳು ಸೇರಿದಂತೆ ಒಟ್ಟು 838 ಮನೆಗಳನ್ನು ಸಂತ್ರಸ್ತರಿಗೆ ಹಂಚಿಕೆ ಮಾಡಿದಂತಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, ಆ.16 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಬೆಂಗಳೂರಿನ…

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.