Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.21 ರಿಂದ 28ರ ವರೆಗೆ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.21 ರಿಂದ 28ರ ವರೆಗೆ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್*

ಫೆಬ್ರವರಿ 20, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.20 NEWS DESK : ಹಜ್ರತ್ ಸೂಫಿ ಶಹೀದ್ ಮತ್ತು ಹಜ್ರತ್ ಸೈಯದ್ ಹಸನ್ ಸಕಾಫ್ ಹಾಗೂ ಇನ್ನಿತರ ಮಹಾತ್ಮರುಗಳ ಹೆಸರಿನಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಸಮಾರಂಭವು ಫೆ.21 ರಿಂದ 28ರ ವರೆಗೆ ನಡೆಯಲಿದೆ ಎಂದು ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ಪುದಿಯೋಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಮ್ಮೆಮಾಡುವಿನಲ್ಲಿ ಎಂಟು ದಿನಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಫೆ.21 ರಂದು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಖಾಫಿ ಪುದಿಯೋಡಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಿದ್ದಾರೆ ಎಂದರು. ಜುಮಾ ನಮಾಝಿನ ಬಳಿಕ ಮಖಾಂ ಝಿಯಾರತ್ ಮತ್ತು ಸಮೂಹ ವಿವಾಹ ನಡೆಯಲಿದ್ದು, ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಅಧ್ಯಕ್ಷ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ನೇತೃತ್ವ ವಹಿಸಲಿದ್ದಾರೆ. ಕಾರ್ಯಕ್ರಮನ್ನು ಕೊಡಗು ನಾಇಬ್ ಖಾಝಿ ಅಬ್ದುಲ್ಲ ಫೈಝಿ ಎಡಪ್ಪಲ ಉದ್ಘಾಟಿಸಲಿದ್ದು, ಟಿಐಎಂಜೆ ಕೋಶಾಧಿಕಾರಿ ಆಲಿ ನೆರೂಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಮ್ಮೆಮಾಡು ಖತೀಬ್ ಹಾಫಿಝ್ ಅಬ್ದುಲ್ ರಾಝಿಕ್ ಫೈಝಿ ಮುಖ್ಯಭಾಷಣ ಮಾಡಲಿದ್ದಾರೆ. ರಾತ್ರಿ 8 ಗಂಟೆಗೆ ಎಮ್ಮೆಮಾಡು ಮುದರಿಸ್ ಹಂಸ ಸಖಾಫಿ ಮಲಪ್ಪುರಂ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಯ್ಯಿದ್ ಅಬ್ದುಲ್ ಅಝೀಝ್ ಅಲ್ ಹೈದರೂಪಿ ಪ್ರಾರ್ಥನೆ ನೆರವೇರಿಸಲಿದ್ದಾರೆ. ಅಬ್ದುಲ್ ರಝಾಖ್ ಅಬ್ರಾರಿ ಪತ್ತನಂತಿಟ್ಟ “ಪರಲೋಕ ಪರಾಜಿತರ್” ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ಫೆ.22 ರಂದು ದಿಕ್ರ್ ಹಲ್ಖಾ ಮತ್ತು ಮತಪ್ರವಚನ ನಡೆಯಲಿದ್ದು, ಕೂರಿಕುಝಿ ತಂಙಳ್ ಸಯ್ಯಿದ್ ಝೈನುದ್ದೀನ್ ಅಲ್ ಬುಖಾರಿ ಲಕ್ಷ ದ್ವೀಪ್ ನೇತೃತ್ವ ವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಮತಪ್ರವಚನ ನಡೆಯಲಿದ್ದು, ಕಾಸರಗೋಡಿನ ಸಯ್ಯಿದ್ ಖಮರುದ್ದೀನ್ ತಂಙಳ್ ದುಆ ನೆರವೇರಿಸಲಿದ್ದಾರೆ. ಬಹು ಉಸ್ಮಾನ್ ಔಹರಿ ನೆಲ್ಯಾಡಿ “ಲಹರಿಕ್ಕ್ ಅಡಿಮಪ್ಪೆಡುನ್ನ ಯುವದ” ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ಫೆ.23 ರಂದು ಮಗ್ರಿಬ್ ನಮಾಝ್ ಬಳಿಕ ಮಲಪ್ಪುರಂ ಮನ್ಹಜ್ ಚೆರ್‍ಮಾನ್ ಸಯ್ಯಿದ್ ಸಾಲಿಂ ಅಲ್ ಬುಖಾರಿ ತಂಙಳ್ ನೇತೃತ್ವದಲ್ಲಿ ಖತಂ ದುಆ ನೆರವೇರಲಿದೆ. ರಾತ್ರಿ 8 ಗಂಟೆಗೆ ಮತಪ್ರವಚನ ನಡೆಲಿದ್ದು, ಆಟೀರಿ ತಂಙಳ್ ಸಯ್ಯಿದ್ ವಿ.ಪಿ.ಅಬ್ದಲ್‍ರಹ್ಮಾನ್ “ಸ್ವಲಾತಿಲೂಡೆ ಸ್ವರ್ಗತ್ತಿಲೇಕ್” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಫೆ.24 ರಂದು ಸಾರ್ವಜನಿಕ ಸಮ್ಮೇಖನ ನಡೆಯಲಿದ್ದು, ಕಿಲ್ಲೂರ್ ತಂಙಳ್ ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದರೂಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಯ್ಯಿದ್ ಮುಈನಲಿ ಶಿಹಾಬ್ ತಂಙಳ್ ಪಾಣಕಾಡ್ ವಹಿಸಲಿದ್ದು, ಖುದ್ವತುಸ್ಸಾದಾತ್ ಸಯ್ಯಿದ್ ಆಟಕೊಯ ತಂಙಳ್ ಕುಂಬೋಲ್ ಉದ್ಭೋಧನೆ ಮಾಡಲಿದ್ದಾರೆ. ಕ್ಯಾಲಿಕಟ್ ನಾಲೆಡ್ಜ್ ಸಿಟಿ ನಿರ್ದೇಶಕ ಡಾ.ಅಬ್ದುಲ್ ಹಕೀಂ ಅಝ್ಹರಿ ಕಾಂತಪುರಂ ಮುಖ್ಯ ಭಾಷಣ ಮಾಡಲಿದ್ದು, ವಕ್ಫ್ ಮಂಡಳಿ ಮಾಜಿ ಚೆರ್ಮಾನ್ ಮೌಲಾನಾ ಶಾಫಿ ಸಅದಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಸಭಾಪತಿ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಮಂಡಳಿ ಸಚಿವ ಝಮೀರ್ ಅಹ್ಮದ್, ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಗ್ಯಾರೆಂಟಿ ಅನುಷ್ಠಾ ಪ್ರಧಿಕಾರ ಸಮಿತಿ ಉಪಾಧ್ಯಕ್ಷ ಎಸ್.ಆರ್.ಮೆಹರೋಝ್ ಖಾನ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮತಪ್ರವಚನ ನಡೆಯಲಿದ್ದು, ಎಮ್ಮೆಮಾಡು ಸಯ್ಯಿದ್ ಇಸ್ಹಾಖ್ ಲತ್ವೀಫಿ ಅಲ್ ಹೈದರೂಪಿ ದುಆ ನೆರವೇರಿಸಲಿದ್ದಾರೆ. ಶಫೀಖ್ ಬದ್ರಿ ಕಡಕ್ಕಲ್ “ಅಲ್ಲಾಹು ಆದರಿಚ್ಚ ಅಡಿಮಗಳ್” ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ಫೆ.25 ರಂದು ರಾತ್ರಿ 8 ಗಂಟೆಗೆ ಮತಪ್ರವಚನ ನಡೆಯಲಿದ್ದು, ಎಮ್ಮೆಮಾಡು ಸಯ್ಯಿದ್ ಖಾತಿಂ ಸಖಾಫಿ ಅಲ್ ಹೈದರೂಸಿ ದುಆ ನೆರವೇರಿಸಲಿದ್ದಾರೆ. ನೌಫಲ್ ಸಖಾಫಿ ಕಳಸ “ಆಗೋಷವುಂ ಆರ್ಬಾಡವುಂ” ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ಫೆ.26 ರಂದು ಬೆಳಿಗ್ಗೆ 11 ಗಂಟೆಗೆ ಅಸ್ಸಯ್ಯಿದ್ ಅಬ್ದುಲ್ ರಹ್ಮಾನ್ ಮಶ್ಹೂದ್ ಅಲ್ ಬುಖಾರಿ ತಂಙಳ್ ಕೂರತ್ ನೇತೃತ್ವದಲ್ಲಿ ದುಆ ಮಜ್ಲಿಸ್ ನಡೆಲಿದ್ದು, ರಾತ್ರಿ 8 ಗಂಟೆಗೆ ಮತಪ್ರವಚನ ನಡೆಯಲಿದೆ. ಎಮ್ಮೆಮಾಡು ಸಯ್ಯಿದ್ ಶರಫುದ್ದೀನ್ ಹಿಮಮಿ ಅಲ್ ಹೈದರೂಸಿ ದುಆ ನೇತೃತ್ವ ವಹಿಸಲಿದ್ದಾರೆ. ಮಶ್‍ಹೂದ್ ಸಖಾಫಿ ಗೂಡಲ್ಲೂರ್ “ಮಾದೃಗಾ ಕುಡುಂಬಂ” ಎಂಬ ವಿಷಯದ ಕುರಿತು ಮುಖ್ಯಭಾಷಣ ಮಾಡಲಿದ್ದಾರೆ. ಫೆ.27 ರಂದು ಮಗ್ರಿಬ್ ನಮಾಝ್‍ನ ಬಳಿಕ ಸ್ವಲಾತ್ ಮಜ್ಲಿಸ್ ನಡೆಯಲಿದ್ದು, ಎಮ್ಮೆಮಾಡು ಮುದರಿಸ್ ಹಂಸ ಸಖಾಫಿ ಮಲಪ್ಪುರಂ ನೇತೃತ್ವ ವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಮತಪ್ರವಚನ ನಡೆಯಲಿದ್ದು, ಕೀಚೇರಿ ಮುದರೀಸ್ ಸಯ್ಯಿದ್ ಸಮೀಹ್ ಅನ್ವಾರಿ ಅಲ್ ಅಹ್ಸನಿ ದುಆ ನೇತೃತ್ವ ವಹಿಸಲಿದ್ದಾರೆ. ಮುನೀರ್ ಹುದವಿ ವಿಳಯಿಲ್ “ಹೃದಯ ರೋಗಙಳ್” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಫೆ.28 ರಂದು ಜುಮಾ ನಮಾಝಿನ ಬಳಿಕ ಸಮಾರೋಪ ಸಮಾರಂಭ ನಡೆಯಲಿದ್ದು, ಎರುಮಾಡ್ ತಂಙಳ್ ಸಯ್ಯಿದ್ ಇಲ್ಯಾಸ್ ಅಲ್ ಹೈದರೂಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಮ್ಮೆಮಾಡು ಟಿಐಎಂಜೆ ಉಪಾಧ್ಯಕ್ಷ ಬಿ.ಯು.ಅಶ್ರಫ್ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಜಂಇಯ್ಯತ್ತುಲ್ ಉಲಮಾ ಅಧ್ಯಕ್ಷ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ಉದ್ಭೋಧನೆ ನೆರವೇರಿಸಲಿದ್ದಾರೆ. ಕರ್ನಾಟಕ ಜಂಇಯ್ಯತ್ತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಹುಸೈನ್ ಸಅದಿ ಕೆ.ಸಿ ರೋಡ್ ಮುಖ್ಯಭಾಷಣ ಮಾಡಲಿದ್ದು, ನೂರುಸ್ಸಾದಾತ್ ಸಯ್ಯಿದ್ ಅಬ್ದುಲ್ ರಹ್ಮಾನ್ ಇಂಬಿಚ್ಚಿಕೋಯ ಅಲ್ ನೇತೃತ್ವದಲ್ಲಿ ಸಮಾರೋಪ ನಡೆಯಲಿದೆ. ಬಾಯಾರ್ ತಂಙಳ್ ಬುಖಾರಿ ದುಆ ನೇತೃತ್ವ ವಹಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಧಾರ್ಮಿಕ, ರಾಜಕೀಯ, ಸಾಂಸ್ಕೃತಿಕ ನೇತಾರರು ಭಾಗವಹಿಸಲಿದ್ದು, ಭಕ್ತಾಧಿಗಳಿಗೆ ಅನ್ನದಾನ ನಡೆಯಲಿದೆ. ಸ್ತ್ರೀಯರಿಗೆ ಪ್ರತ್ಯೇಕ ಸ್ಥಳಾವಕಾಶವಿದ್ದು, ಮಗ್ರಿಬ್ ನಮಾಝಿನ ಬಳಿಕ ದಫ್ ಕಾರ್ಯಕ್ರಮವು ನಡೆಯಲಿದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಜಾತಿ, ಮತ ಭೇಧವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಸದಸ್ಯರುಗಳಾದ ಉಸ್ಮಾನ್ ಮಾಂದಾಲ್, ಅಬ್ದುಲ್ ಲತೀಫ್ ಕೂರುಳಿ, ಹಸೈನಾರ್ ಕನ್ನಡಿಯಂಡ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.