
ಪೊನ್ನಂಪೇಟೆ ಫೆ.20 NEWS DESK : ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕ ವತಿಯಿಂದ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳ ಶೈಕ್ಷಣಿಕ ಉತ್ತೇಜನಕ್ಕಾಗಿ ಶ್ರಮಿಸಿದವರಿಗೆ ನೀಡಲಾಗುವ ‘ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ’ ರಾಜ್ಯಮಟ್ಟದ ಸಮಾಜ ಸೇವಾ ಪ್ರಶಸ್ತಿಗೆ ಭಾಜನರಾದ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮತ್ತು ಕೆದಮುಳ್ಳೂರು ಗ್ರಾ.ಪಂ ಸದಸ್ಯ ಮೀತಲತಂಡ ಎಂ.ಇಸ್ಮಾಯಿಲ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಎ. ಹನೀಫ್ ಅವರ ನೇತೃತ್ವದಲ್ಲಿ ಗುಂಡಿಕೆರೆಯಲ್ಲಿರುವ ಇಸ್ಮಾಯಿಲ್ ಅವರ ನಿವಾಸಕ್ಕೆ ತೆರಳಿದ ಪ್ರಮುಖರು, ಇಸ್ಮಾಯಿಲ್ ಅವರನ್ನು ಅಭಿನಂದಿಸಿದರಲ್ಲದೆ, ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಪ್ರಮುಖರು, ಇಸ್ಮಾಯಿಲ್ ಅವರ ಸಮಾಜಮುಖಿ ಚಿಂತನೆಯ ವ್ಯಕ್ತಿತ್ವ ಹಾಗೂ ಸಮಾಜ ಸೇವಾ ಸಾಧನೆಗಳ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎ.ಹಂಸ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸಯ್ಯದ್ ಭಾವ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್, ಕಾಂಗ್ರೆಸ್ ಪ್ರಮುಖರಾದ ಜ್ಹುಬೈರ್ ಕಡಂಗ, ಕೆ.ಎಂ. ಮೊಹಮ್ಮದ್, ಮಹಮ್ಮದ್ ಆಲಿ, ಮಂದಮಾಡ ಮುನೀರ್ ಹಾಗೂ ಇಸ್ಮಾಯಿಲ್ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.









