
ಕುಶಾಲನಗರ ಫೆ.20 NEWS DESK : ಕೊಡಗು ಜಿಲ್ಲಾ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶ್ರೀ ಕೃಷ್ಣ ಸಂಧಾನ ಎಂಬ ಉಚಿತ ಹಾಸ್ಯ ನಾಟಕ ಗಮನ ಸೆಳೆಯಿತು. ಸಂಘದ ಅಧ್ಯಕ್ಷ ಆವರ್ತಿ ಆರ್.ಮಹದೇವಪ್ಪ ನೇತೃತ್ವದಲ್ಲಿ ಸ್ಥಳೀಯ ಗಾಯತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಉಚಿತವಾಗಿ ಹಮ್ಮಿಕೊಂಡ ನಾಟಕದಲ್ಲಿ ನೂರಾರು ಪ್ರೇಕ್ಷಕರು ಪಾಲ್ಗೊಂಡಿದ್ದರು. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಧಾತ್ರಿ ರಂಗಸಂಸ್ಥೆ ಕಲಾವಿದರ ಮೂಲಕ ಶ್ರೀ ಕೃಷ್ಣ ಸಂಧಾನ ಹಾಸ್ಯ ನಗೆ ನಾಟಕ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿತು. ನಾಟಕದ ಉದ್ಘಾಟನೆಯನ್ನು ಉದ್ಯಮಿಗಳು ಹಾಗೂ ಸಮಾಜಸೇವಕರಾದ ರಾಜೇಗೌಡ ಅವರು ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಘದ ಜಿಲ್ಲಾಧ್ಯಕ್ಷರಾದ ಆವರ್ತಿ ಆರ್ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಯತ್ರಿ ಕಲ್ಯಾಣ ಮಂಟಪದ ಮಾಲೀಕರಾದ ಕೆ ಬಿ ಗಾಯತ್ರಿ ಉದ್ಯಮಿ ರಾಜೇಗೌಡ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ನಿನಾಸಂ ತಂಡದ ಸುಮಾರು 20ಕ್ಕೂ ಅಧಿಕ ನಿನಾಸಂ ಕಲಾವಿದರು ನಾಟಕ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಡೇವಿಡ್ ಸೋಲೋಮನ್, ಕಾವೇರಿ ಛಾಯಾಗ್ರಾಹಕರ ಸಂಘದ ತಾಲೂಕು ಅಧ್ಯಕ್ಷರಾದ ವಿಜಯಕುಮಾರ್, ಪತ್ರಕರ್ತ ಹೆಚ್ಚು ರಘು ಮತ್ತಿತರರು ಇದ್ದರು.









