
ವಿರಾಜಪೇಟೆ ಫೆ.20 NEWS DESK : ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಎನ್.ಎಸ್.ಎಸ್ ಘಟಕಗಳ ಸಹಯೋಗದಲ್ಲಿ ಫೆ.24 ರಂದು ರಕ್ತದಾನ ಶಿಬಿರ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಬಿ.ಡಿ.ಹೇಮ, ಕಾಲೇಜಿನ ಎನ್.ಎಸ್.ಎಸ್ ಘಟಕದ ಅಧಿಕಾರಿ ಬಿ.ಎನ್.ಶಾಂತಿಭೂಷಣ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದೆ.









