Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ : ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಿ : ಹೆಚ್.ಎಲ್.ಮಲ್ಲೇಶ್ ಗೌಡ ಸಲಹೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ : ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಿ : ಹೆಚ್.ಎಲ್.ಮಲ್ಲೇಶ್ ಗೌಡ ಸಲಹೆ

ಫೆಬ್ರವರಿ 20, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.20 NEWS DESK : ಮಕ್ಕಳಿಗೆ ಮನೆಯಲ್ಲಿಯೇ ಸಾಹಿತ್ಯದ ಅಭಿರುಚಿ ಬೆಳೆಸುವಂತಾಗಬೇಕು. ಪಠ್ಯಪುಸ್ತಕದ ಜೊತೆಗೆ ಉತ್ತಮ ಸಾಹಿತ್ಯ ಕೃತಿಗಳ ಓದುವುದನ್ನು ಬೆಳೆಸಿಕೊಂಡಲ್ಲಿ ಹೆಚ್ಚಿನ ಜ್ಞಾನ ಸಂಪಾದಿಸಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಲ್.ಮಲ್ಲೇಶ್ ಗೌಡ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕ ವತಿಯಿಂದ ‘ಪಂಜೆ ಮಂಗೇಶರಾಯರ 150 ನೇ ವರ್ಷಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪಂಜೆ ಮಂಗೇಶರಾಯರ ಕೊಡುಗೆ ಅಪಾರವಾಗಿದೆ. 20ನೇ ಶತಮಾನದ ಹಾದಿಯಲ್ಲಿ ಕೊಡಗಿನ ಶ್ರೀಮಂತಿಕೆಯನ್ನು ವರ್ಣಿಸಿದ್ದಾರೆ. ಕೊಡಗಿನ ಸಿರಿಯನ್ನು ಕನ್ನಡ ಸಾಹಿತ್ಯದ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದು ತಿಳಿಸಿದರು.’ ಕನ್ನಡ ಸಾಹಿತ್ಯವು ಜಗತ್ತಿನಲ್ಲಿಯೇ ಹೆಚ್ಚಿನ ಕೃತಿಗಳು ಪ್ರಕಟವಾಗುವಲ್ಲಿ ಪ್ರಥಮ ಸ್ಥಾನದಲ್ಲಿದೆ. ಕನ್ನಡದಲ್ಲಿ ಬರೆಯುವವರ ಸಂಖ್ಯೆ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಕನ್ನಡದ ಮಹತ್ವದ ಕೃತಿಗಳನ್ನಾದರೂ ಓದಬೇಕು. ಗ್ರಂಥಾಲಯದ ಪುಸ್ತಕ ಅಧ್ಯಯನ ಮಾಡಬೇಕು. ಇದರಿಂದ ಬದುಕನ್ನು ಗಟ್ಟಿಗೊಳಿಸಿಕೊಳ್ಳಬಹುದು ಎಂದು ಅವರು ವಿವರಿಸಿದರು. ‘ವಿದ್ಯಾರ್ಥಿಗಳು ಪಠ್ಯ ಪುಸ್ತಕ ಓದುವುದೇ ಕಡಿಮೆಯಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಅಧ್ಯಯನ ಮಾಡಿಕೊಂಡು ಪರೀಕ್ಷೆ ಬರೆಯುವವರ ಸಂಖ್ಯೆ ಹೆಚ್ಚಾಗಿದೆ. ಇಡೀ ಪುಸ್ತಕ ಅಧ್ಯಯನ ಮಾಡಿ ಪರೀಕ್ಷೆಗೆ ಉತ್ತರಿಸುವ ಛಾಪು ಬೆಳೆಸಿಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದರು.’ ರಾಷ್ಟ್ರಕವಿ ಕುವೆಂಪು ಅವರು ನಾಡಗೀತೆ ಬರೆದು 101 ವರ್ಷ ಆಗಿದೆ. ಆನರ್ಸ್ ಅಧ್ಯಯನ ಮಾಡುವಾಗ ನಾಡಗೀತೆಯನ್ನು ಬರೆದಿದ್ದಾರೆ ತಿಳಿಸಿದರು. ‘ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಅರವಿಂದ ಚೊಕ್ಕಾಡಿ ಮಾತನಾಡಿ, ಮಕ್ಕಳನ್ನು ಕಲ್ಪನಾ ಲೋಕದಲ್ಲಿ ಬೆಳೆಸಿದಲ್ಲಿ ಸಾಹಿತ್ಯದ ಅಭಿರುಚಿ ಬೆಳೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.’ ಪಂಜೆ ಮಂಗೇಶರಾಯರು ಕನ್ನಡ ಸಾಹಿತ್ಯದಲ್ಲಿ ಸಾಮಾಜಿಕ ಕಳಕಳಿ ಒಳಗೊಂಡ ಕೃತಿಗಳನ್ನು ರಚಿಸಿದ್ದಾರೆ. ಅದರಲ್ಲೂ ಕೊಡಗಿನ ಶ್ರೀಮಂತಿಕೆ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪಂಜೆ ಮಂಗೇಶರಾಯರನ್ನು ಸದಾ ಸ್ಮರಿಸಿಕೊಳ್ಳುವಂತಾಗಬೇಕು. ಶಿಕ್ಷಕರಾಗಿ, ಪ್ರಾಧ್ಯಾಪಕರಾಗಿ ದುಡಿದಿದ್ದಾರೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ ಅವರು ಮಾತನಾಡಿ ಕನ್ನಡ ಸಾಹಿತ್ಯ ಲೋಕದಲ್ಲಿ ನಿಸ್ಸಾರ್ ಅಹಮದ್ ಅವರು ಶಿವಮೊಗ್ಗದ ‘ಜೋಗದ ಸಿರಿ’ ಬಗ್ಗೆ ವರ್ಣೀಸಿದ್ದಾರೆ. ಅದೇ ರೀತಿ ಪಂಜೆ ಮಂಗೇಶರಾಯರು ‘ಎಲ್ಲಿ ಭೂರಮೆ…’ ಕೊಡಗಿನ ಶ್ರೀಮಂತಿಕೆ ಬಗ್ಗೆ ಕಣ್ಣಿಗೆ ಕಟ್ಟುವಂತೆ ವರ್ಣಿಸಿದ್ದಾರೆ ಎಂದು ನುಡಿದರು. ಪಂಜೆ ಮಂಗೇಶರಾಯರು 1874 ಫೆಬ್ರವರಿ, 22 ರಂದು ಜನಿಸಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ‘ಕವಿಶಿಷ್ಯ’ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‍ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು. ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವಲ್ಲಿ ಪಂಜೆ ಮಂಗೇಶರಾಯರ ಕೊಡುಗೆ ಅಪಾರವಾಗಿದೆ. ಸಣ್ಣ ಕತೆಗಳ ಜನಕ, ಮಕ್ಕಳ ಸಾಹಿತ್ಯದ ಮೇರು ಶಿಖರ ಎಂದರೆ ತಪ್ಪಾಗಲಾರದು ಎಂದು ವಿವರಿಸಿದರು. ‘ಕನ್ನಡ ಸಾಹಿತ್ಯವು ಶ್ರೀಮಂತವಾಗಿದ್ದು, ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯವನ್ನು ಪಕ್ಕದ ರಾಜ್ಯಗಳಿಗೂ ಪರಿಚಯಿಸುವಂತಾಗಬೇಕು ಎಂದು ಮಡ್ಡಿಕೆರೆ ಗೋಪಾಲ ಅವರು ಕರೆ ನೀಡಿದರು.’ ಕನ್ನಡ ಸಾಹಿತ್ಯವನ್ನು ವಿಶ್ವಕ್ಕೆ ಪರಿಚಯಿಸಿದಲ್ಲಿ ಮತ್ತಷ್ಟು ಕನ್ನಡ ಭಾಷೆ ಶ್ರೀಮಂತಿಕೆ ಕಾಣಬಹುದು. ಕುವೆಂಪು ಭಾಷಾ ಭಾರತಿಯು ಹಲವು ಚಟುವಟಿಕೆಗಳನ್ನು ನಡೆಸುತ್ತಿದ್ದು, ಪಂಜೆ ಮಂಗೇಶರಾಯರ ಸಾಹಿತ್ಯ ಭಾಷಾಂತರವಾಗುತ್ತಿದೆ. ಕನ್ನಡ ಸಾಹಿತ್ಯಕ್ಕೆ ದೊಡ್ಡ ಶಕ್ತಿ ಇದೆ. ಸಾಹಿತ್ಯ, ಸಂಸ್ಕøತಿ, ಕಲೆಗಳನ್ನು ಇಡೀ ವಿಶ್ವದ ಜನರು ಓದುತ್ತಾರೆ ಎಂದರು. ‘ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ ನಗರದ ಸೆಂಟ್ರಲ್ ಕಾಲೇಜಿನಲ್ಲಿ ಓದಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಸೇರಿದಂತೆ ಇನ್ನೂ ಹಲವು ಮಹನೀಯರು ಕಾಲೇಜಿನಲ್ಲಿ ಓದಿರುವುದು ಸ್ಮರಣೀಯ ಎಂದರು.’ ಕನ್ನಡ ಸಾಹಿತ್ಯ ಹಾಗೂ ಕೊಡಗಿನ ಶ್ರೀಮಂತಿಕೆ ಬಗ್ಗೆ ಪಂಜೆ ಮಂಗೇಶರಾಯರ ಕೊಡುಗೆ ಅಪಾರವಾಗಿದೆ. ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಮಾತನಾಡಿ ಪಂಜೆ ಮಂಗೇಶರಾಯರು ಶಿಶು ಸಾಹಿತ್ಯದ ಜನಕ, ಪುತ್ತರಿ ಹಾಡಿನ ಪಿತಾಮಹ ಎಂದರು. ಸಾಹಿತಿ ಜಲಜಾ ಶೇಖರ್ ಅವರು ಬರೆದಿರುವ ‘ಅಗ್ನಿಕುಂಡ’ ಕಥಾ ಸಂಕಲನ ಪುಸ್ತಕವನ್ನು ಮಲ್ಲೇಶ್ ಗೌಡ ಅವರು ಬಿಡುಗಡೆ ಮಾಡಿದರು. ಹಾಗೆಯೇ ಉಳುವಂಗಡ ಕಾವೇರಿ ಅವರು ಬರೆದಿರುವ ಪುಸ್ತಕವನ್ನು ಟಿ.ಪಿ.ರಮೇಶ್ ಅವರು ಬಿಡುಗಡೆ ಮಾಡಿದರು. ಕಾವ್ಯಗುಚ್ಛ ಗಾಯನ ಮೂಲಕ ಚಿತ್ರಕಲಾ ಶಿಕ್ಷಕರಾದ ಬಿ.ಆರ್.ಸತೀಶ್ ಮತ್ತು ಹಿನ್ನೆಲೆ ಗಾಯಕರಾದ ಮೋಹನ್ ಅವರು ಚಿತ್ರಕಲೆ ಬಿಡಿಸಿದರು ಹಾಗೂ ಗಾಯನ ಮಾಡಿದರು. ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿಗಳಾದ ಎಸ್.ಐ.ಮುನೀರ್ ಅಹಮ್ಮದ್, ಪುದಿಯನೆರವನ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಕಡ್ಲೇರ ತುಳಸಿ ಮೋಹನ್, ಎಸ್.ಡಿ.ವಿಜೇತ್, ರಾಜೇಂದ್ರ ಪದ್ಮನಾಭ, ಕೆ.ಎಸ್.ನಾಗೇಶ್, ಅನಿಲ್ ಎಚ್.ಟಿ., ಜಿ.ಚಿದ್ವಿಲಾಸ್, ಕಾವೇರಿ ಪ್ರಕಾಶ್, ಅಂಬೆಕಲ್ಲು ನವೀನ್, ರಂಜಿತ್ ಕವಲಪಾರ, ಜಲಜಾ ಶೇಖರ್, ಈರಮಂಡ ಹರಿಣಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ, ಡಾ.ಕಾವೇರಿ ಪ್ರಕಾಶ್, ಟಿ.ಜಿ.ಪ್ರೇಮ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಅ.22 NEWS DESK : ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 33ನೇ ವರ್ಷದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.