

ಮಡಿಕೇರಿ ಫೆ.21 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದ ರೂಡಿ ಸಂಪ್ರದಾಯದಂತೆ ಪ್ರತೀ ವರ್ಷ ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಫೆ.26 ರಂದು ಮಹಾಶಿವರಾತ್ರಿ ಪೂಜಾಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಭಕ್ತಾದಿಗಳು ಫೆಬ್ರವರಿ, 26 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಮಹಾಶಿವರಾತ್ರಿ ಪ್ರಯುಕ್ತ ನಡೆಯುವ ಪೂಜಾ ಪೂಜಾಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆಬ್ರವರಿ, 26 ರಂದು ಬೆಳಗ್ಗೆ 07 ಗಂಟೆಗೆ ಶತರುದ್ರಾಭಿಷೇಕ , ಬೆಳಗ್ಗೆ 9.30 ಕ್ಕೆ ರುದ್ರಹೋಮ, ಮಧ್ಯಾಹ್ನ 12 ಗಂಟೆಗೆ ರುದ್ರಹೋಮದ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 06 ಗಂಟೆಗೆ ತಾಯಂಬಕ ಸೇವೆ, ಸಂಜೆ 06.30 ಕ್ಕೆ ಲಕ್ಷದೀಪೋತ್ಸವ. ಸಂಜೆ 06:30 ರಿಂದ ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ. ಸಂಜೆ 05:30 ರಿಂದ ಭಜನೆ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ರಾತ್ರಿ 07:30 ಗಂಟೆಗೆ ಲಘು ಉಪಹಾರ. ರಾತ್ರಿ 10:30 ಕ್ಕೆ ದೇವರ ತ್ರಿವೇಣಿ ಸಂಗಮ ಬೇಟಿ, ದೇವರ ಕಟ್ಟೆಪೂಜೆ ಮತ್ತು ಬಾಣಬಿರುಸು ಕಾರ್ಯಕ್ರಮ. ರಾತ್ರಿ 11:00 ಗಂಟೆಗೆ ಯಕ್ಷ ಕಾವ್ಯ ತರಂಗಿಣಿ ಭಾಗವತ ದಿ|| ಚಂದಪ್ಪ ಪೂಜಾರಿ ಪ್ರತಿಷ್ಠಾನ (ರಿ) ದರ್ಬೆ ಬಂಟ್ವಾಳ ದಕ್ಷಿಣ ಕನ್ನಡ ಇವರಿಂದ ಸ್ವರ ಮಾಧುರಿ ಕಾವ್ಯ ಕನ್ನಿಕೆ ಬಿರುದಾಂಕಿತ ಸಂದ್ಯಾ ಪೂಜಾರಿ ದರ್ಬೆ ಇವರ ದಕ್ಷ ನಿರ್ದೇಶನದಲ್ಲಿ ಯಕ್ಷಗಾನ ಬಯಲಾಟ-ಪ್ರಸಂಗ “ಹರಿ ಹರ ಸುತ ಶ್ರೀ ಧರ್ಮಶಾಸ್ತ” ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಫೆಬ್ರವರಿ, 26 ರಂದು ಬೆಳಗ್ಗೆ 9.30 ಗಂಟೆಗೆ ಶತರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಂಜೆ 7 ಗಂಟೆಗೆ ಏಕಾದಶರುದ್ರಾಭಿಷೇಕ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ.









