Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ಮಡಿಕೇರಿಯಿಂದ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ : ಕ್ಯಾನ್ಸರ್ ತಡೆಗಟ್ಟಲು ಲಸಿಕೆ ಅಗತ್ಯ : ಡಾ.ಸೋನಿಯಾ ಮಂದಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ಮಡಿಕೇರಿಯಿಂದ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ : ಕ್ಯಾನ್ಸರ್ ತಡೆಗಟ್ಟಲು ಲಸಿಕೆ ಅಗತ್ಯ : ಡಾ.ಸೋನಿಯಾ ಮಂದಪ್ಪ*

ಫೆಬ್ರವರಿ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.21 NEWS DESK : ರೋಟರಿ ಮಡಿಕೇರಿ ವತಿಯಿಂದ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಿಗೆ ಗರ್ಭಕಂಠದ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಿಸಲಾಯಿತು. ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರಿನ ಮದರ್‍ಹುಡ್ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಸೋನಿಯಾ ಮಂದಪ್ಪ, ಗರ್ಭಕಂಠದ ಕ್ಯಾನ್ಸರ್ ಮಹಿಳೆಯರನ್ನು ಕಾಡುತ್ತಿರುವ ಅತಿ ಮಾರಕ ಕಾಯಿಲೆಯಾಗಿದ್ದು, ಪ್ರತಿ 8 ನಿಮಿಷಕ್ಕೆ ಒಂದು ಮಹಿಳೆ ಕ್ಯಾನ್ಸರ್ ನಿಂದ ಸಾವನ್ನಪ್ಪುತ್ತಿದ್ದಾರೆ. ಇದು ಬಾರದಂತೆ ತಡೆಗಟ್ಟಲು ಲಸಿಕೆಯ ಅನಿವಾರ್ಯತೆ ಇದೆ. ಇದೇ ಕಾರಣಕ್ಕೆ 9 ರಿಂದ 14 ವಯಸ್ಸಿನ ಮಕ್ಕಳಿಗೆ ಹೆಚ್‍ಪಿವಿ ಲಸಿಕೆ ನೀಡಲಾಗುತ್ತಿದ್ದು, ಈ ಬಗ್ಗೆ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.  ಸುಮಾರು 2 ಸಾವಿರ ರೂ. ವೆಚ್ಚದ ಈ ಲಸಿಕೆಯನ್ನು ರೋಟರಿ ಸಂಸ್ಥೆ ವಿದ್ಯಾರ್ಥಿಗಳಿಗೆ ನೀಡುತ್ತಿರುವುದು ಶ್ಲಾಘನೀಯ. ಈಗಾಗಲೇ ಸುಮಾರು 1,843 ಕಾರ್ಯಕ್ರಮಗಳನ್ನು ಮಾಡಲಾಗಿದ್ದು, ಕೊಡಗಿನಲ್ಲಿ ಇದು ಮೊದಲ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿನಿಯರು ಹಾಗೂ ಪೋಷಕರು ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಪೋಲಿಯೋ ಮುಕ್ತ ಭಾರತ ನಿರ್ಮಾಣ ಮಾಡುವಲ್ಲಿ ರೋಟರಿಯ ಪಾತ್ರ ಪ್ರಮುಖವಾಗಿದೆ. ಇದೀಗ ಟಿಬಿ ಮುಕ್ತ ಭಾರತ ಮಾಡಲು ಪಣತೊಟ್ಟಿದೆ ಎಂದು ಡಾ.ಸೋನಿಯಾ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರೌಢಶಾಲೆ ವಿಭಾಗದ ಉಪ ಪ್ರಾಂಶುಪಾಲೆ ಕೆ.ವಿ.ಶಶಿಕಲಾ ಮಾತನಾಡಿ, ಯುವ ಶಕ್ತಿಯನ್ನು ಜಾಗೃತಗೊಳಿಸಿ, ಪ್ರೋತ್ಸಾಹಿಸುವ ಕಾರ್ಯ ರೋಟರಿ ಸಂಸ್ಥೆಯಿಂದ ಆಗುತ್ತಿದೆ. ಈ ಸಂಸ್ಥೆ ಆರೋಗ್ಯವಂತ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿರುವುದು ಶ್ಲಾಘನೀಯವೆಂದರು. ಗರ್ಭಕಂಠದ ಕ್ಯಾನ್ಸರ್ ಕುರಿತು ನಡೆಸಲಾಗುತ್ತಿರುವ ಜಾಗೃತಿ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿನಿಯರು ಪಡೆದುಕೊಳ್ಳಬೇಕು. ಆ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು. ರೋಟರಿ ಜಿಲ್ಲಾ ಮಾಜಿ ಗವರ್ನರ್ ರೋಟರಿಯನ್ ಸುರೇಶ್ ಚಂಗಪ್ಪ ಮಾತನಾಡಿ, ವಿದ್ಯಾರ್ಥಿ ಜೀವನದಿಂದಲೇ ಜವಾಬ್ದಾರಿಯುತ ವ್ಯಕ್ತಿಗಳಾಗಬೇಕು. ಜವಾಬ್ದಾರಿ ಇದ್ದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು. ಪ್ರತಿಯೊಬ್ಬ ವ್ಯಕ್ತಿಗೆ ಉತ್ತಮ ಆರೋಗ್ಯ ಮುಖ್ಯ, ಆ ನಿಟ್ಟಿನಲ್ಲಿ ಆರೋಗ್ಯದ ಬಗ್ಗೆ ರೋಟರಿ ಹೊಂದಿರುವ ಕಾಳಜಿ ಶ್ಲಾಘನೀಯ. ಯಾವುದೇ ಮೌಢ್ಯಗಳು ಇದ್ದರೆ ಅದನ್ನು ಬಿಟ್ಟು ವಿದ್ಯಾರ್ಥಿಗಳು ಮುಂದೆ ಬರಬೇಕು. ಆಗ ಮಾತ್ರ ಆರೋಗ್ಯವಂತ ಪರಿಸರ ನಿರ್ಮಾಣ ಮಾಡಲು ಸಾಧ್ಯ ಎಂದು ಸಲಹೆ ನೀಡಿದರು. ಮಾಜಿ ಗವರ್ನರ್ ಡಾ.ರವಿ ಅಪ್ಪಾಜಿ ಮಾತನಾಡಿ, ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಹೆಚ್ಚಿನ ಅರಿವು ಅಗತ್ಯ. ವಿದ್ಯಾರ್ಥಿನಿಯರು ಆರಂಭಿಕ ಹಂತದಲ್ಲೇ ಈ ಬಗ್ಗೆ ಜಾಗೃತರಾಗಬೇಕು, ಲಸಿಕೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ಮಡಿಕೇರಿ ಅಧ್ಯಕ್ಷ ಸುದಯ್ ನಾಣಯ್ಯ, ರೋಟರಿ ಕ್ಲಬ್ ಮಡಿಕೇರಿ, ರೋಟರಿ ಕ್ಲಬ್ ಮೈಸೂರು ಹಾಗೂ ದಿವಾಕರ್ಸ್ ಸರ್ವಿಸ್ ಟ್ರಸ್ಟ್ ಸಹಯೋಗದಲ್ಲಿ ಲಸಿಕೆಯನ್ನು ನೀಡಲಾಗುತ್ತಿದೆ. ಈಗಾಗಲೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಪೋಷಕರಿಗೆ ಒಪ್ಪಿಗೆ ಪತ್ರವನ್ನು ವಿತರಿಸಲಾಗಿದ್ದು, ಸುಮಾರು 50 ವಿದ್ಯಾರ್ಥಿನಿಯರು ಲಸಿಕೆ ಪಡೆಯಲು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿದ್ಯಾರ್ಥಿನಿಯರು ಈ ಬಗ್ಗೆ ಜಾಗೃತರಾಗಿ ಲಸಿಕೆ ಪಡೆಯುವಂತಾಗಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ವೃತ್ತಿಪರ ನಿರ್ದೇಶಕ ಅನಿಲ್ ಕೃಷ್ಣಾನಿ, ಸದಸ್ಯೆ ಮಲ್ಲಿಗೆ ಪೈ, ಮೈಸೂರಿನ ಮದರ್‍ಹುಡ್ ಆಸ್ಪತ್ರೆಯ ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಶಿವಕುಮಾರ್, ಚಂದನ್, ವಿಶಾಲ್ ಪ್ರಾರ್ಥಿಸಿದರು. ರೋಟರಿ ಸದಸ್ಯೆ ಲಲಿತಾ ರಾಘವನ್ ವಂದಿಸಿದರು. ಮಡಿಕೇರಿ ಪ್ರೌಢಶಾಲೆಯ 39 ವಿದ್ಯಾರ್ಥಿನಿಯರು, ಕಡಗದಾಳು ಸರ್ಕಾರಿ ಪ್ರೌಢಶಾಲೆಯ 8, ಕಕ್ಕಬ್ಬೆ ಪ್ರೌಢಶಾಲೆಯ 1 ಹಾಗೂ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಶಾಲೆಯ 2 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 50 ವಿದ್ಯಾರ್ಥಿನಿಯರು ಲಸಿಕೆ ಪಡೆದುಕೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.