Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿವೃತ್ತ ನೌಕರರ ವೇದಿಕೆಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಿವೃತ್ತ ನೌಕರರ ವೇದಿಕೆಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ*

ಫೆಬ್ರವರಿ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.21 NEWS DESK : ನಿವೃತ್ತ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನ ಆರ್ಥಿಕ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿ ಫೆ.28 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ವೇದಿಕೆಯ ಜಿಲ್ಲಾ ಪ್ರಧಾನ ಸಂಚಾಲಕರಾದ ಪಿ.ಎಸ್.ಜನಾರ್ಧನ, 2022ರ ಜು.1 ರಿಂದ 2024ರ ಜು.31ರ ಅವಧಿಯ ಒಳಗೆ ನಿವೃತ್ತರಾದ ರಾಜ್ಯವ್ಯಾಪ್ತಿಯ 26,700 ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಆರ್ಥಿಕ ಸೌಲಭ್ಯಗಳು ದೊರಕಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಸೂಚಿತ ಅವಧಿಯಲ್ಲಿ ನಿವೃತ್ತರಾದವರಿಗೆ ಏಳನೇ ವೇತನ ಆಯೋಗದ ಸೌಲಭ್ಯಗಳ ಬದಲಾಗಿ ಹಿಂದಿನ 6ನೇ ವೇತನ ಆಯೋಗದ ಸೌಲಭ್ಯವನ್ನಷ್ಟೆ ನೀಡಲಾಗಿದೆ. 7ನೇ ವೇತನ ಆಯೋಗದಂತೆ ‘ಎ’ ದರ್ಜೆಯಿಂದ ‘ಸಿ’ ದರ್ಜೆಯವರೆಗೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದವರಿಗೆ 12 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳನ್ನು ರಾಜ್ಯ ಸರ್ಕಾರ ನೀಡಬೇಕಾಗುತ್ತದೆಂದು ಮಾಹಿತಿ ನೀಡಿದರು. ಸರ್ಕಾರವು ಸರ್ಕಾರಿ ನೌಕರರಿಗೆ ವೇತನ ಭತ್ಯೆಗಳನ್ನು ಹಾಗೂ ಪಿಂಚಣಿಯನ್ನು ಪರಿಷ್ಕರಿಸಲು ಡಾ.ಸುಧಾಕರರಾವ್ ಅವರ ನೇತೃತ್ವದಲ್ಲಿ 7ನೇ ವೇತನ ಆಯೋಗವನ್ನು ರಚಿಸಿತ್ತು. ಈ ಆಯೋಗ ನೀಡಿದ ವರದಿಯಂತೆ ಸರ್ಕಾರ 2024ರ ಆ.23 ರಂದು ವೇತನ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಿತ್ತು. ಈ ಆದೇಶದಲ್ಲಿ 2024ರ ಆ.1 ರಿಂದ ವೇತನ ಭತ್ಯೆಗಳ ಆರ್ಥಿಕ ಸೌಲಭ್ಯವನ್ನು ಮಂಜೂರು ಮಾಡಿರುತ್ತದೆ. ವಾಸ್ತವವಾಗಿ 2022ರ ಜು.1ರಿಂದಲೇ ಜಾರಿಗೊಳಿಸಬೇಕಾದ್ದನ್ನು 2024ರ ಆ.1 ರಿಂದ ಜಾರಿಗೊಳಿಸಿರುವುದರಿಂದ 2022ರ ಜು.1 ರಿಂದ 2024ರ ಜು.31 ರವಧಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಆಯೋಗದ ಶಿಫಾರಸ್ಸಿನ ನಿವೃತ್ತಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆಂದು ಮಾಹಿತಿ ನೀಡಿದರು. ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹಲವಾರು ಬಾರಿ ಮನವಿಗಳನ್ನು ನೀಡಿದ್ದರು ಸೂಕ್ತ ಸಂದನ ದೊರಕದ ಹಿನ್ನೆಲೆ ಇದೀಗ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗುತ್ತಿರುವುದಾಗಿ ತಿಳಿಸಿ, ಕೊಡಗಿನಲ್ಲಿ ಸೌಲಭ್ಯ ವಂಚಿತ 426 ನಿವೃತ್ತ ಸರ್ಕಾರಿ ನೌಕರರು ಇರುವುದಾಗಿ ಮಾಹಿತಿಯನ್ನಿತ್ತರು. ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಜಿಲ್ಲಾ ಸಂಚಾಲಕರುಗಳಾದ ಜಿ.ಎಂ. ಚಿನ್ನಯ್ಯ, ಕೆ.ಬಿ.ಮೋಹನ್. ಸೋಮವಾರಪೇಟೆ ತಾಲ್ಲೂಕು ಸಂಚಾಲಕ ಅಂತೋಣಿ ಡಿಸೋಜ ಹಾಗೂ ವಿರಾಜಪೇಟೆ ತಾಲ್ಲೂಕು ಸಂಚಾಲಕ ಎಂ.ಎಸ್.ಸುಬ್ರಮಣಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.