Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್  ವತಿಯಿಂದ ಕಬ್ಬಡಿ ಸಂಭ್ರಮ, ರಕ್ತದಾನ ಶಿಬಿರ  : ಗ್ರಾಮೀಣ ಕ್ರೀಡೆಯಾದ ಕಬ್ಬಡಿ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್  ವತಿಯಿಂದ ಕಬ್ಬಡಿ ಸಂಭ್ರಮ, ರಕ್ತದಾನ ಶಿಬಿರ  : ಗ್ರಾಮೀಣ ಕ್ರೀಡೆಯಾದ ಕಬ್ಬಡಿ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಮೂಡಿಸಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*

ಫೆಬ್ರವರಿ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.23 :  ಗ್ರಾಮೀಣ ಕ್ರೀಡೆಯಾಗಿ ಖ್ಯಾತಿ ಪಡೆಯುತ್ತಿರುವ ಕಬ್ಬಡಿ ಬಗ್ಗೆ ಮಕ್ಕಳಲ್ಲಿ ಹೆಚ್ಚು ಆಸಕ್ತಿ ಮೂಡಿಸುವ ಕಾಯ೯ವಾಗಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ರೋಟರಿ ಜಿಲ್ಲೆ 3181 ನಲ್ಲಿ ರೋಟರಿ ಸದಸ್ಯರಿಗಾಗಿ ಮೊದಲ ಬಾರಿಗೆ  ಆಯೋಜಿತ ಕಬ್ಬಡಿ ಪಂದ್ಯಾಟ ಉದ್ಠಾಟಿಸಿ ಮಾತನಾಡಿದ ಅವರು,  ಇತ್ತೀಚಿನ ವಷ೯ಗಳಲ್ಲಿ ಪ್ರೀಮಿಯರ್ ಲೀಗ್ ಮೂಲಕ ಹೆಸರುವಾಸಿಯಾಗುತ್ತಿರುವ ಕಬ್ಬಡಿ ಬಗ್ಗೆ ಮಕ್ಕಳಲ್ಲಿಯೂ ಆಸಕ್ತಿ ಮೂಡಿಸಿ ಪ್ರೋತ್ಸಾಹ ನೀಡುವಂತಾದಲ್ಲಿ ಗ್ರಾಮೀಣ ಕ್ರೀಡೆಯಾದ ಕಬ್ಬಡಿಗೆ ಹೆಚ್ಚಿನ ಬೆಂಬಲ ದೊರಕಿದಂತಾಗುತ್ತದೆ ಎಂದರು. 120 ವಷ೯ಗಳನ್ನು ಜಾಗತಿಕವಾಗಿ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಪೂರೈಸಿರುವ ರೋಟರಿ ಸಂಸ್ಥೆಯು ಸಾಮಾಜಿಕ ಕಳಕಳಿಯೊಂದಿಗೆ ಕ್ರೀಡಾಕ್ಷೇತ್ರದಲ್ಲಿಯೂ ಯೋಜನೆ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಪ್ರಶಂಶಿಸಿದರು. ರೋಟರಿ ಜಿಲ್ಲೆ 3181 ನ ಗವನ೯ರ್ ವಿಕ್ರಂದತ್ತ ಸಭಾ ಕಾಯ೯ಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿ, ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳನ್ನು ವಾಷಿ೯ಕವಾಗಿ ಆಯೋಜಿಸುತ್ತಾ ಬಂದಿದ್ದ ರೋಟರಿಯು ಇದೀಗ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದಲ್ಲಿಯೇ ಮೊದಲ ಬಾರಿಗೆ ಕಬ್ಬಡಿ ಪಂದ್ಯಾಟ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೋಟರಿ ವತಿಯಿಂದ ಕಂಬಳ ಆಯೋಜಿಸಿ ಯಶಸ್ವಿಯಾಗಿರುವುದನ್ನು ಶ್ಲಾಘಿಸಿದ ವಿಕ್ರಂದತ್ತ, ಕಬ್ಬಡಿಯನ್ನೂ ಪ್ರತೀ ವಷ೯ ರೋಟರಿ ಸದಸ್ಯರಿಗಾಗಿ ಮುಂದಿನ ವಷ೯ಗಳಲ್ಲಿ ಆಯೋಜಿಸಲಾಗುತ್ತದೆ ಎಂದು ಭರವಸೆ ನೀಡಿದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಮಾತನಾಡಿ, ರೋಟರಿ ಮಿಸ್ಟಿ ಹಿಲ್ಸ್ ರೋಟರಿ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಕಬ್ಬಡಿ  ಪಂದ್ಯಾಟ ಆಯೋಜಿಸಿರುವ ದಾಖಲೆಗೆ ಪಾತ್ರವಾಗಿದೆ ಎಂದರು. .  ಈ ಮೂಲಕ ರೋಟರಿ ಸದಸ್ಯರಲ್ಲಿ ಕಬ್ಬಡಿ ಪಂದ್ಯಾಟದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಲಾಗಿದೆ ಎಂದೂ ಮಧುಸೂದನ್ ಹೇಳಿದರು. ಅಮೆಚೂರ್ ಕಬ್ಬಡಿ ಅಸೋಸಿಯೇಷನ್ ನ ನಿವೖತ್ತ ಜಂಟಿ ಕಾಯ೯ದಶಿ೯ ಹೊಸೂಕ್ಲು ಉತ್ತಪ್ಪ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕಬ್ಬಡಿಯನ್ನು ಪ್ರೋತ್ಸಾಹಿಸು ಅಮೆಚ್ಯೂರ್ ಕಬ್ಬಡಿ ಅಸೋಸಿಯೇಷನ್ ಎಲ್ಲಾ ರೀತಿಯ ಬೆಂಬಲ ನೀಡಲಿದೆ ಎಂದರು. ರೋಟರಿ ಮಿಸ್ಟಿ ಹಿಲ್ಸ್ ನ ಕಬ್ಬಡಿ ಪಂದ್ಯಾವಳಿ ಸಂಚಾಲಕ ಜಯಂತ್ ಪೂಜಾರಿ ಮಾತನಾಡಿ, ಇದೇ ಮೊದಲ ಬಾರಿಗೆ ೋಟರಿ ಸದಸ್ಯರಿಗಾಗಿ ಆಯೋಜಿತ ಕಬ್ಬಡಿ ಪಂದ್ಯಾಟಕ್ಕೆ ಉತ್ತಮ ಸ್ಪಂದನ ದೊರಕಿದೆ.  ಆಧುನಿಕ ದಿನಗಳಲ್ಲಿ ಕಬ್ಬಡಿಯಂಥ ಜನಪದ ಕ್ರೀಡೆಗೂ ಪ್ರೋತ್ಸಾಹ ನೀಡಿ ಆ ಕ್ರೀಡೆಯ ಮಹತ್ವವನ್ನು, ಸವಾಲುಗಳನ್ನು ರೋಟರಿ ಸದಸ್ಯರಿಗೆ ತಿಳಿಸುವ ನಿಟ್ಟಿನಲ್ಲಿ ಮಿಸ್ಟಿ ಹಿಲ್ಸ್ ಕಬ್ಬಡಿ ಪಂದ್ಯಾವಳಿ ಆಯೋಜಿಸಿದೆ ಎಂದು ಮಾಹಿತಿ ನೀಡಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ದೇವಣಿರ ಕಿರಣ್, ವಲಯ ಸೇನಾನಿ ಅನಿತಾ ಪೂವಯ್ಯ ವೇದಿಕೆಯಲ್ಲಿದ್ದರು. ರೋಟರಿ ಮಿಸ್ಟಿ ಹಿಲ್ಸ್ ನಿದೇ೯ಶಕ ಅನಿಲ್ ಹೆಚ್.ಟಿ. ನಿರೂಪಿಸಿದ ಕಾಯ೯ಕ್ರಮದಲ್ಲಿ ಕಬ್ಬಡಿ ಸಮಿತಿಯ ಜಂಚಿ ಸಂಚಾಲಕ ದುಗ್ಗಳ ಕಪಿಲ್ ಸ್ವಾಗತಿಸಿ, ಮಿಸ್ಟಿ ಹಿಲ್ಸ್ ಕಾಯ೯ದಶಿ೯ ಕಟ್ಟೆಮನೆ ಸೋನಜಿತ್ ವಂದಿಸಿದರು. ಗಾಂಧಿ ಮೈದಾನದಲ್ಲಿ ಸುಸಜ್ಜಿತ ರೀತಿಯಲ್ಲಿ ರೂಪಿತವಾದ ಕಬ್ಬಡಿ ಮೈದಾನದಲ್ಲಿ ದಿನವಿಡೀ ರೋಟರಿ ಸದಸ್ಯರ ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. *ರಕ್ತದಾನ ಶಿಬಿರ* ಕೊಡಗು ಜಿಲ್ಲಾ ರೆಡ್ ಕ್ರಾಸ್ , ವಿವೇಕಾನಂದ ಯೂತ್ ಮೂವ್ ಮೆಂಟ್ ಮತ್ತು ಜಿಲ್ಲಾ ರಕ್ತನಿಧಿ ಕೇಂದ್ರದ  ವತಿಯಿಂದ ಇದೇ ಸಂದಭ೯ ಆಯೋಜಿತ ರಕ್ತಸಂಗ್ರಹಣಾ ಶಿಬಿರವನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ಈ ಸಂದಭ೯ ರೋಟರಿ ಜಿಲ್ಲಾ ಗವನ೯ರ್ ವಿಕ್ರಂದತ್ತ,  ರೋಟರಿ ಜಿಲ್ಲಾ ಕಾಯ೯ದಶಿ೯ ರಿತೀಶ್ ಬಾಳಿಗ, ಮಿಸ್ಟಿ ಹಿಲ್ಸ್ ಸ್ಥಾಪಕಾಧ್ಯಕ್ಷ ಬಿ.ಜಿ. ಅನಂತಶಯನ, ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಬಿ.ಕೆ.ರವೀಂದ್ರರೈ, ಉಪಾಧ್ಯಕ್ಷ ಅನಿಲ್ ಹೆಚ್.ಟಿ.ಕಾಯ೯ದಶಿ೯ ಮುರಳಿ, ವಿವೇಕಾನಂದ ಯೂತ್ ಮೂವ್ ಮೆಂಟ್  ಸಂಚಾಲಕ ಡಾ.ಚೆರಿಯಮನೆ ಪ್ರಶಾಂತ್, ರಕ್ತನಿಧಿ ಕೇಂದ್ರದ ಅಧಿಕಾರಿ ಡಾ. ಕರುಂಬಯ್ಯ, ಡಾ. ನೀತಾ, ಹಾಜರಿದ್ದರು. 26 ಮಂದಿ ರಕ್ತದಾನ ಮಾಡಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.