Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಕೊಡಗು ಜಾನಪದ ಬೆಡಗು’ ಜಾನಪದ ನಡೆ ವಿದ್ಯಾರ್ಥಿಗಳ ಕಡೆ : ಯುವ ಪೀಳಿಗೆ ಜಾನಪದದ ಸತ್ಯವನ್ನು ಅರಿಯಬೇಕು : ಗೊಲ್ಲಹಳ್ಳಿ ಶಿವಪ್ರಸಾದ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಕೊಡಗು ಜಾನಪದ ಬೆಡಗು’ ಜಾನಪದ ನಡೆ ವಿದ್ಯಾರ್ಥಿಗಳ ಕಡೆ : ಯುವ ಪೀಳಿಗೆ ಜಾನಪದದ ಸತ್ಯವನ್ನು ಅರಿಯಬೇಕು : ಗೊಲ್ಲಹಳ್ಳಿ ಶಿವಪ್ರಸಾದ್ ಕರೆ*

ಫೆಬ್ರವರಿ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.24 NEWS DESK : ನಾಡಿನ ಮೂಲ ಜನಪದ ಸಂಸ್ಕೃತಿ, ಆಚಾರ ವಿಚಾರ, ಪರಂಪರೆಗಳು ಸಮಾಜವನ್ನು ಕಟ್ಟುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಇಂತಹ ಜಾನಪದ ಕಲೆಯ ಸತ್ಯವನ್ನು ಯುವ ಪೀಳಿಗೆ ಒಳಗಣ್ಣಿನ ಮೂಲಕ ಅರಿತುಕೊಂಡು ಮುಂದಿನ ಭವಿಷ್ಯವನ್ನು ರೂಪಿಸಬೇಕು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವಪ್ರಸಾದ್ ಕರೆ ನೀಡಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ನಡೆದ ‘ಕೊಡಗು ಜಾನಪದ ಬೆಡಗು’ ಜಾನಪದ ನಡೆ ವಿದ್ಯಾರ್ಥಿಗಳ ಕಡೆ ಎನ್ನುವ ವಿಶಿಷ್ಟ ಕಾರ್ಯಕ್ರಮವನ್ನು ಕಾಲೇಜು ಸಭಾಂಗಣದಲ್ಲಿ ದುಡಿಯನ್ನು ನುಡಿಸಿ ಉದ್ಘಾಟಿಸಿ ಅವರು ಮಾತನಾಡಿದರು. ದಕ್ಷತೆ, ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವಗಳಿಂದ ಪುಟ್ಟ ‘ಕೊಡಗು’ ಅತ್ಯಂತ ವಿಶೇಷವಾಗಿ ಕಾಣುತ್ತದೆ. ಅನುಮಾನಗಳೇ ತುಂಬಿರುವ ಸಮಾಜದಲ್ಲಿ ನೆಲ, ಜಲ, ಗಾಳಿ ವಿಷಯುಕ್ತವಾಗುತ್ತಿದೆ. ಅಭಿವೃದ್ಧಿ ಎನ್ನುವುದು ಎಂದಿಗೂ ಅವಸಾನಕ್ಕೆ ಕಾರಣವಾಗಬಾರದು. ಕಟ್ಟಲು ಸಾವಿರ ಕೈ…ಮುರಿಯಲು ಒಂದು ಕೈ ಸಾಕು’ ಎನ್ನುವ ನಾಣ್ನುಡಿಯಂತೆ ವಿದ್ಯಾರ್ಥಿಗಳು ಸಮಾಜವನ್ನು ಕಟ್ಟುವ ಕೈಗಳಾಗಬೇಕೆಂದು ಕಿವಿಮಾತು ಹೇಳಿದರು. ಯುವ ಸಮೂಹಕ್ಕೆ ಜನಪದವನ್ನು ತಲುಪಿಸುವ ಉದ್ದೇಶದಿಂದ ಅಕಾಡೆಮಿ ರಾಜ್ಯದಾದ್ಯಂತ ‘ಜಾನಪದ ನಡೆ ವಿದ್ಯಾರ್ಥಿಗಳ ಕಡೆ’ ಕಾರ್ಯಕ್ರಮ ರೂಪಿಸಿದೆ. ಮುಂಬರುವ ದಿನಗಳಲ್ಲಿ ‘ಜನಪದ ನಡೆ ಹಟ್ಟಿ ಹಾಡಿಗಳ ಕಡೆ’ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ತಿಳಿಸಿದರು. ಅತಿಥಿಗಳಾಗಿ ಪಾಲ್ಗೊಂಡಿದ್ದ ಜಾನಪದ ಅಕಾಡೆಮಿಯ ಸದಸ್ಯ ಸಂಚಾಲಕ ಡಾ.ಮೈಸೂರು ಉಮೇಶ್ ಮಾತನಾಡಿ, ರಾಷ್ಟ್ರದ ಪ್ರಗತಿಯ ಪಥವನ್ನು ಗಮನಿಸಿದಾಗ ನಾವಿಂದು ಬಹು ಸಂಸ್ಕೃತಿಯನ್ನು ತೊಡೆದು ಏಕ ಸಂಸ್ಕೃತಿಯತ್ತ ಸಾಗುತ್ತಿರುವುದು ಗೋಚರಿಸುತ್ತದೆ. ಬಹುಸಂಸ್ಕೃತಿಯ ನಾಡಿನಲ್ಲಿ ‘ಜಾನಪದ’ವೆನ್ನುವುದು ಬಹುತ್ವವನ್ನು ಪ್ರತಿಬಿಂಬಿಸುತ್ತದೆ. ಈ ಹಿನ್ನೆಲೆ ಬಹುತ್ವದ ನೆಲೆಯನ್ನು ಜನಪದದ ಮೂಲಕ ಅರ್ಥೈಸುವ ಪ್ರಯತ್ನ ನಡೆಸಲಾಗುತ್ತಿದೆ. ಯುವ ಸಮೂಹ ಜನಪದದ ಆಶಯಗಳನ್ನು ಕೈಗೆತ್ತಿಕೊಂಡು, ಅದೆಂದಿಗೂ ಮುಕ್ಕಾಗದಂತೆ ಸಂರಕ್ಷಿಸಿಕೊಂಡು ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕೆನ್ನುವ ಆಶಯ ವ್ಯಕ್ತಪಡಿಸಿದರು. ಅಕಾಡೆಮಿ ರಿಜಿಸ್ಟ್ರಾರ್ ಎನ್.ನಮೃತ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಅಕಾಡೆಮಿ ರಾಜ್ಯದ ವಿವಿಧೆಡೆ ಜನಪದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳು ಜನಪದವನ್ನು ಅಪ್ಪಿಕೊಳ್ಳುವ ಮೂಲಕ ನಾಡಿನ ಸಂಸ್ಕೃತಿಯ ನಿಜ ರಾಯಭಾರಿಗಳಾಗಲೆಂದು ಹಾರೈಸಿದರು. ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರಾದ ಅಂಬೆಕಲ್ ನವೀನ್ ಮಾತನಾಡಿ, ಸ್ಥಳೀಯ ಸಂಸ್ಕೃತಿ, ಭಾಷೆಯ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳಿಗೆ ಈ ಶಾಲೆ ಸಾಕಷ್ಟು ಒತ್ತು ನೀಡುತ್ತಲೆ ಬಂದಿದೆ. ಇಂತಹ ಕಾರ್ಯಕ್ರಮ ನಾಡಿನಾದ್ಯಂತ ನಡೆಯುವ ಮೂಲಕ ಜನಪದ ಸಂಸ್ಕೃತಿ ಪಸರಿಸಲಿ ಎಂದರು. ಐಕ್ಯೂಎಸಿಯ ಸಂಚಾಲಕರಾದ ಡಾ.ನಿರ್ಮಲ ಕೆ.ಡಿ. ಮಾತನಾಡಿ, ಒಬ್ಬರಿಂದ ಒಬ್ಬರಿಗೆ ಮೌಖಿಕವಾಗಿ ತಲೆ ಮಾರುಗಳಿಂದ ಹರಿದು ಬಂದ ಅತ್ಯಂತ ಶ್ರೀಮಂತ ಜನಪದ ಸಂಸ್ಕೃತಿಯ ಬಗ್ಗೆ ಇತ್ತೀಚಿನ ದಿನಗಳಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ಈ ಕಾರಣದಿಂದ ಜಾನಪದ ಅಕಾಡೆಮಿಯ ಸಹಕಾರದೊಂದಿಗೆ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದಾಗಿ ತಿಳಿಸಿದರು.
::: ವಿಚಾರಗೋಷ್ಠಿ ::: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಕಾವೇರಿ ಪ್ರಕಾಶ್ ಅವರು ‘ಕೊಡಗಿನ ಸಾಂಪ್ರದಾಯಿಕ ಊಟೋಪಚಾರಗಳು’ ವಿಷಯದ ಕುರಿತು ಮತ್ತು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷರಾದ ಕುಡಿಯರ ಮುತ್ತಪ್ಪ ಅವರು, ‘ಬುಡಕಟ್ಟು ಸಂಸ್ಕೃತಿಯಲ್ಲಿ ಕುಡಿಯರು’ ವಿಷಯದ ಕುರಿತು ವಿಚಾರ ಮಂಡಿಸಿದರು. ಕಾಲೇಜಿನ ಪ್ರಬಾರ ಪ್ರಾಂಶುಪಾಲರಾದ ವಸಂತ ಕುಮಾರಿ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್, ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.