Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಲ್ಲಮಾವಟ್ಟಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನದಿಂದ ಆರ್ಥಿಕ ಅಭಿವೃದ್ಧಿ : ಶಾಸಕ ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಲ್ಲಮಾವಟ್ಟಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನದಿಂದ ಆರ್ಥಿಕ ಅಭಿವೃದ್ಧಿ : ಶಾಸಕ ಶಾಸಕ ಎ.ಎಸ್.ಪೊನ್ನಣ್ಣ*

ಫೆಬ್ರವರಿ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಫೆ.25 NEWS DESK : ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಆರ್ಥಿಕ ಅಭಿವೃದ್ಧಿಯನ್ನೂ ಸಾಧಿಸಲಾಗುತ್ತಿವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.  ಬಲ್ಲಮಾವಟ್ಟಿ  ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಬಲ್ಲಮಾವಟ್ಟಿ  ವಲಯ ಕಾಂಗ್ರೆಸ್ ವತಿಯಿಂದ ಆಯೋಜಿಸಿದ ಅಭಿನಂದನಾ ಸಭೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.  ಹಿಂದಿನ ಸರ್ಕಾರದ ಅವಧಿಯಲ್ಲಿ ಬಹಳಷ್ಟು ಕಾರ್ಯಗಳು ಸ್ಥಗಿತಗೊಂಡಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದರು.  ಬಲ್ಲಮಾವಟಿ ಗ್ರಾ.ಪಂ ವ್ಯಾಪ್ತಿಯಲ್ಲಿ ಎರಡು ಕೋಟಿ 20 ಲಕ್ಷ ರೂ.ಗಳ ಕೆಲಸ ಆಗಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ 35 ಕೋಟಿ ರೂ.ಗಳ ಅನುದಾನ ನೀಡಲಾಗಿದೆ ವಿಶೇಷ ಅನುದಾನ 20 ಕೋಟಿ ರೂ.,ವಿರಾಜಪೇಟೆ ಕ್ಷೇತ್ರದಲ್ಲಿ ಆರು ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮಳೆ ಹಾನಿ ಅನುದಾನ 10 ಕೋಟಿ ರೂ. ಒದಗಿಸಲಾಗಿದೆ ಮುಖ್ಯಮಂತ್ರಿಗಳ ವಿಶೇಷ ಅನುದಾನ 25 ಕೋಟಿ ರೂ. ನೀಡಲಾಗಿದ್ದು, ಅದರಲ್ಲಿ 17 ಕೋಟಿ ರೂ.ಹಣವನ್ನು ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಮೀಸಲಿಡಲಾಗಿದೆ ಎಂದು ಅಂಕಿ ಅಂಶಗಳೊಂದಿಗೆ ಮಾಹಿತಿಯನ್ನು ನೀಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರಾ ಧರ್ಮಜ ಉತ್ತಪ್ಪ ಮಾತನಾಡಿ, ಕುಡಿಯುವ ನೀರು, ಗ್ರಾಮೀಣ ರಸ್ತೆಗಳು, ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿದೆ. ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು. ಈ ಸಂದರ್ಭ ಗ್ರಾ.ಪಂ ವತಿಯಿಂದ ಶಾಸಕರನ್ನು ಸನ್ಮಾನಿಸಿ ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಬಲ್ಲಮಾವಟ್ಟಿ ವಲಯ ಕಾಂಗ್ರೆಸ್ ಅಧ್ಯಕ್ಷ ತಾಪಂಡ ಅಪ್ಪಣ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಮಡಿಕೇರಿ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ನೆಲಜಿ ಕಾಂಗ್ರೆಸ್ ಬೂತ್ ಅಧ್ಯಕ್ಷ ಕೈಬುಳಿರ ಸಾಬು ಗಣಪತಿ, ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ರಕ್ಷಾ ಸಮಿತಿ ನಿರ್ದೇಶಕ ಅಪ್ಪಚೆಟ್ಟೋಳಂಡ ಮಿಥುನ್ ಮಾಚಯ್ಯ, ಬಲ್ಲಮಾವಟಿ ಬೂತ್ ಅಧ್ಯಕ್ಷ ಚೆಂಗೇಟಿರ ಕುಶಾಲಪ್ಪ, ಪೇರೂರು ಬೂತ್ ಅಧ್ಯಕ್ಷ ಪಾಲೆಯಂಡ  ಅಯ್ಯಪ್ಪ, ಹಿರಿಯ ಕಾಂಗ್ರೆಸಿಗರಾದ ಮೂವೆರ ಹ್ಯಾರಿ ಸುಬ್ರಮಣಿ,  ಮಣವಟ್ಟಿರ ಪಾಪು ಚಂಗಪ್ಪ, ಕಾಂಗ್ರೆಸ್ ಪದಾಧಿಕಾರಿಗಳು,  ಪಂಚಾಯತಿ ಸದಸ್ಯರು, ಕಾಂಗ್ರೆಸ್ ಸಮಿತಿ ಕಾರ್ಯಕರ್ತರು  ಹಾಗೂ  ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಸದಸ್ಯ ಮಚ್ಚುರ ರವೀಂದ್ರ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಯಾಡಿದರು. ಮಣವಟ್ಟಿರ ದಯಾ ಕುಟ್ಟಪ್ಪ ಪ್ರಾರ್ಥಿಸಿ, ನಿರೂಪಿಸಿ ವಂದಿಸಿದರು. ಬಲ್ಲಮಾವಟಿ, ಪೇರೂರು, ದೊಡ್ಡ ಪುಲಿಕೋಟು, ನೆಲಜಿ ಗ್ರಾಮದ ಗ್ರಾಮಗಳಿಗೆ  ಭೇಟಿ ನೀಡಿದ ಶಾಸಕ ಎ.ಎಸ್.ಪೊನ್ನಣ್ಣ  ಬೊಳ್ಯಬ್ಬೆ ರಸ್ತೆ ಕಾಮಗಾರಿ, ಬಲ್ಲಮಾವಟಿಗೆ ವಿದ್ಯುತ್ ಪರಿವರ್ತಕ, ಪಂದೇಟು ವಿಗೆ ವಿದ್ಯುತ್ ಪರಿವರ್ತಕ, ನುಚ್ಚು ಮಣಿಯಂಡ ಐನ್ ಮನೆಗೆ ತೆರಳುವ ರಸ್ತೆ, ಬಲ್ಲಮಾವಟಿ ಭಗವತಿ ದೇವಸ್ಥಾನ ರಸ್ತೆ, ಪೆಬ್ಬಟ್ಟಿರ ಕುಟುಂಬಸ್ಥರ ಐನ್ ಮನೆಗೆ ತೆರಳುವ ಮಾರ್ಗದ ತಡೆ ಗೋಡೆ, ಪೊನ್ನುಕಂಡ ಕುಟುಂಬಸ್ಥರ ರಸ್ತೆ,  ಪೇರೂರು ಇಗ್ಗುತ್ತಪ್ಪ ದೇವಸ್ಥಾನ ರಸ್ತೆ, ನೆಲಜಿ ಕಕ್ಕಬ್ಬೆ ಮುಖ್ಯ ರಸ್ತೆ ಡಾಂಬರೀಕರಣ, ನಾಪನೆರವಂಡ ಐನ್ ಮನೆ ರಸ್ತೆ, ಚೀಯಕಪೂವಂಡ ಐನ್ ಮನೆಗೆ ತೆರಳುವ ರಸ್ತೆ ಕಾಮಗಾರಿ ವೀಕ್ಷಣೆ ಹಾಗೂ ಭೂಮಿ ಪೂಜೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.