Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಕರಿ ಮೆಣಸು ಬೆಳೆಗಾರರಿಗೆ ಸಿಕ್ಕಿತು ಸಿಹಿ ಸುದ್ದಿ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಕೊಡಗು ಕರಿ ಮೆಣಸು ಬೆಳೆಗಾರರಿಗೆ ಸಿಕ್ಕಿತು ಸಿಹಿ ಸುದ್ದಿ

ಫೆಬ್ರವರಿ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು ಫೆ.25 NEWS DESK : ರಾಜಕೀಯ ಇಚ್ಛಾಶಕ್ತಿ ಇದ್ದರೆ ಜನರಿಗಾಗಿ ಜನಪ್ರತಿನಿಧಿಗಳು ಎಂಥೆಂಥ ಕೆಲಸ ಮಾಡಬಹುದು ಎಂಬುದಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಯತ್ನಕ್ಕೆ ಫಲವೇ ಸಾಕ್ಷಿಯಾಗಿದೆ. ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ಕೊಡುಗ ಕರಿ ಮೆಣಸು ಬೆಳಗಾರರ ಸಂಕಷ್ಟವನ್ನು ನಿವಾರಿಸಲು ಸಂಸದ ಯದುವೀರ್ ಯಶಸ್ವಿಯಾಗಿದ್ದಾರೆ. ಕೊಡಗಿನಲ್ಲಿ ಅತಿ ಹೆಚ್ಚಾಗಿ ಕರಿ ಮೆಣಸು ಬೆಳೆಯಲಾಗುತ್ತದೆ. ಆದರೆ ಕೇಂದ್ರ ಸರ್ಕಾರ ಇದರ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ ) ವಿಧಿಸಿತ್ತು. ಇದರಿಂದ ಇಲ್ಲಿನ ಬೆಳೆಗಾರರಿಗೆ ಭಾರಿ ತೊಂದರೆಯಾಗಿತ್ತು. ಕೊಡಗಿನ ಗೋಣಿಕೊಪ್ಪದ ಬೆಳೆಗಾರರೊಬ್ಬರಿಗೆ ಒಂದು ಕೋಟಿ ರೂಪಾಯಿ ಜಿಎಸ್‌ಟಿ ಕಟ್ಟುವಂತೆಯೂ ನೋಟಿಸ್ ನೀಡಲಾಗಿತ್ತು. ಆದರೆ ಇವರು ಕರ್ನಾಟಕ ಕಾಫಿ ಬೆಳೆಗಾರರ ಸಂಘ, ಕರ್ನಾಟಕ ಬೆಳೆಗಾರರ ಸಂಘ, ಕೊಡಗು ಪ್ಲಾಂಟರ್ಸ್ ಅಸೋಸಿಯೇಶನ್ ನಿಯೋಗದೊಂದಿಗೆ ಸಂಸದ ಯದುವೀರ್ ಭೇಟಿ ಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ಮನವಿ ಸಲ್ಲಿಸಿದ್ದರು.  ಇದಕ್ಕೆ ಕೂಡಲೇ ಸ್ಪಂದಿಸಿದ ಸಂಸದ ಯದುವೀರ್ ಅವರು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಕೊಡಗಿನ ಕರಿ ಮೆಣಸು ಬೆಳೆಗಾರರ ಬವಣೆಯನ್ನು ಮನವರಿಕೆ ಮಾಡಿಕೊಟ್ಟರು. ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿದ ಸಚಿವರು, ಕರಿ ಮೆಣಸು ಬೆಳೆಗೆ ಜಿಎಸ್‌ಟಿ ರದ್ದು ಮಾಡಿದೆ. ನಂತರ ಈ ಸಂಬಂಧ ಆದೇಶವನ್ನೂ ಹೊರಡಿಸಲಾಗಿದೆ. ಇದರಿಂದ ಕೊಡಗಿನ ಮಾತ್ರವಲ್ಲ ಇತರೆ ಕರಿ ಮೆಣಸು ಬೆಳೆಗಾರರಿಗೆ ಸಾಕಷ್ಟು ನೆರವಾಗಿದೆ. ಸಂಸದ ಯದುವೀರ್‌ ಅವರ ಪ್ರಯತ್ನಕ್ಕೆ ವಿವಿಧ ಬೆಳೆಗಾರರ ಸಂಘಟನೆಗಳು ಧನ್ಯವಾದ ಸಲ್ಲಿಸಿದೆ.

ವಿತ್ತ ಸಚಿವರಿಗೆ ಯದುವೀರ್‌ ಅಭಿನಂದನೆ ::  ಈ ಕುರಿತು ಮಾತನಾಡಿರುವ ಸಂಸದ ಯದುವೀರ್‌, ಕೊಡಗಿನ ಬೆಳೆಗಾರರ ಸಂಕಷ್ಟದ ಬಗ್ಗೆ ಅರಿವಿಗೆ ಬಂದ ಕೂಡಲೇ ದೆಹಲಿಯಲ್ಲಿ ವಿತ್ತ ಸಚಿವರನ್ನು ಹಾಗೂ ಇತರೆ ಅಧಿಕಾರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡಿದೆ. ಜಿಎಸ್‌ಟಿ ರದ್ದು ಮಾಡುವಂತೆ ಮನವಿಯನ್ನು ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿದ ಸಚಿವರು ಕೂಡಲೇ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. ನಮ್ಮ ಕ್ಷೇತ್ರವಾದ ಕೊಡಗಿನ ಹಾಗೂ ಇತರೆ ಬೆಳೆಗಾರರ ಪರವಾಗಿ ನಾನು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.