Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿರುನಾಣಿಯಲ್ಲಿ ಕಸಾಪ ದತ್ತಿ ಕಾರ್ಯಕ್ರಮ : ಜ್ಞಾನ ಯಾರೂ ಕದಿಯದ ಸಂಪತ್ತು : ಉಳುವಂಗಡ ಕಾವೇರಿ ಉದಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿರುನಾಣಿಯಲ್ಲಿ ಕಸಾಪ ದತ್ತಿ ಕಾರ್ಯಕ್ರಮ : ಜ್ಞಾನ ಯಾರೂ ಕದಿಯದ ಸಂಪತ್ತು : ಉಳುವಂಗಡ ಕಾವೇರಿ ಉದಯ*

ಫೆಬ್ರವರಿ 25, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.25 NEWS DESK : ಜ್ಞಾನವನ್ನು ಕದಿಯಲು ಯಾರಿಗೂ ಸಾಧ್ಯವಿಲ್ಲ. ಅದು ಶಿಕ್ಷಣದಿಂದ ಬರುತ್ತದೆ. ಪ್ರೌಢಶಾಲಾ ಹಂತದಲ್ಲಿ ಉತ್ತಮ ಶಿಕ್ಷಣ ಸಿಕ್ಕಿ ಅಭ್ಯರ್ಥಿಗಳು ಮನಸ್ಸು ಮಾಡಿದರೆ ಯಾವ ಸಾಧನೆ ಬೇಕಾದರೂ ಮಾಡಬಹುದು ಎಂದು ಸಾಹಿತಿ, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಉಳುವಂಗಡ ಕಾವೇರಿ ಉದಯ ನುಡಿದರು. ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕೈಬುಲಿರ ಪಾರ್ವತಿ ಬೋಪಯ್ಯ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ನಡೆದ ಹತ್ತನೇ ತರಗತಿಯ ಕನ್ನಡ ಮಾಧ್ಯಮ ಪರಿಕ್ಷೆಯಲ್ಲಿ ಮೊದಲಿಗಳಾಗಿ ಬಂದ ಯು.ಅದವಿಯಾ ಸಾಕ್ಷಿ ಎಂದರು. ಮಾದಾಪುರದಂತಹ ಗ್ರಾಮೀಣ ಪ್ರದೇಶದ ಶ್ರೀಮತಿ ಚೆನ್ನಮ್ಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ಜಿಲ್ಲೆಗೆ ಪ್ರಥಮ ಬಂದದ್ದು ನಿಜಕ್ಕೂ ಸಾಧನೆಯೇ ಸರಿ, ಇದು ಎಲ್ಲ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕು ಎಂದರು. ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸದ ಅವಶ್ಯಕತೆ ಕುರಿತು ಉಪನ್ಯಾಸ ನೀಡಿದರು. ದತ್ತಿದಾನಿಗಳ ಆಶಯದಂತೆ 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ 10ನೇ ತರಗತಿಯ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಾದಾಪುರದ ಶ್ರೀಮತಿ ಚೆನ್ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅದವಿಯಾ ಯು. ಮೂಡಬಿದರೆಯ ಕಾಲೇಜಿನಲ್ಲಿ ಮುಂದಿನ ಶಿಕ್ಷಣ ಪಡೆಯುತಿದ್ದು, ಅವರ ಪರವಾಗಿ ಅವರ ಸಂಬಂದಿ , ಶಿಕ್ಷಕಿ ಕೆ.ಎ.ನಸೀಮ ಗೌರವ ಸ್ವೀಕರಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಕೊಡಗು ಜಿಲ್ಲೆಯಲ್ಲಿ ಈಗಾಗಲೇ 35 ದತ್ತಿನಿದಿಗಳು ಸ್ಥಾಪಿತವಾಗಿದೆ ಎಲ್ಲ ದತ್ತಿ ಸ್ಥಾಪನೆಗಳ ಉದ್ದೇಶ ವಿದ್ಯಾರ್ಥಿಗಳಿಗೆ ಸಾಹಿತ್ಯಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ವಿಚಾರಗಳ ಪರಿಚಯ ಮಾಡುವುದಾಗಿದೆ. ಜಾನಪದ ಕಲೆಗಳ ಕುರಿತು, ಜಾನಪದ ಸಾಹಿತ್ಯದ ಕುರಿತು, ಕನ್ನಡ ಸಾಹಿತ್ಯದ ಬೆಳವಣಿಗೆ ಕುರಿತು, ಕನ್ನಡ ಮತ್ತು ಕೊಡವ ಭಾಷಾ ಸಂಬಂಧದ ಕುರಿತು, ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಕುರಿತು, ಫೀಲ್ಡ್ ಮಾರ್ಷಲ್ ಕಾರಿಯಪ್ಪ, ಜನರಲ್ ತಿಮ್ಮಯ್ಯ ರವರ ಸಾಧನೆಗಳ ಕುರಿತು ಶೈಕ್ಷಣಿಕವಾಗಿ ಸಾಧನೆ ಮಾಡಿದ ಪ್ರೌಢಶಾಲೆ ಮತ್ತು ಪದವಿ ಪೂರ್ವ ವಿದ್ಯಾರ್ಥಿ ಸಾಧಕರ ಕುರಿತು ಉಪನ್ಯಾಸಗಳಿವೆ. ಕೈಬುಲಿರ ಪಾರ್ವತಿ ಬೋಪಯ್ಯ ಈಗಾಗಲೇ ಒಂದು ದತ್ತಿ ಸ್ಥಾಪಿಸಿದ್ದು, 10ನೇ ತರಗತಿಯಲ್ಲಿ ಕೊಡಗು ಜಿಲ್ಲೆಯ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಯನ್ನು ಗೌರವಿಸುವುದಾಗಿದೆ. ಅಲ್ಲದೇ ಇನ್ನೂ ಎರಡು 50,000 ರೂಗಳ ದತ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿಗೆ ಅರ್ಪಿಸಿದ್ದಾರೆ ಅವರಿಗೆ ಅಭಿನಂದನೆಗಳು ಎಂದರು.  ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿರುನಾಣಿ ಗ್ರಾ.ಪಂ ಅಧ್ಯಕ್ಷರಾದ ಅಮ್ಮತ್ತಿರ ರಾಜೇಶ್  ನಮ್ಮ ಗ್ರಾಮದಲ್ಲಿ ಸಾಹಿತ್ಯ ಪರಿಷತ್ತು ಕಾರ್ಯಕ್ರಮ ಏರ್ಪಡಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು. ಮುಂದಿನ ದಿನಗಳಲ್ಲಿ ಇಲ್ಲಿ ಕಾರ್ಯಕ್ರಮ ನಡೆಸುವ ಸಂದರ್ಭ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ನುಡಿದರು. ಪೊನ್ನಂಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಎ.ಬಿ.ಲಾಲ ಅಪ್ಪಣ್ಣ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯ ಸಣ್ಣ ಸಣ್ಣ ಹಳ್ಳಿಗಳಿಗೂ ಭೇಟಿ ನೀಡಿ ಕಾರ್ಯಕ್ರಮ ನೀಡುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳಲ್ಲಿ ಕನ್ನಡ ನಾಡು ನುಡಿಯ ಆಚಾರ ವಿಚಾರಗಳ ಸಂಸ್ಕೃತಿಯ ಅರಿವು ಮೂಡಿಸುತ್ತಿರುವುದು ಅಭಿನಂದನೆಯ ಎಂದರು.  ದತ್ತಿ ದಾನಿಗಳಾದ ಶ್ರೀಮತಿ ಕೈಬುಲಿರ ಪಾರ್ವತಿ ಬೋಪಯ್ಯ ಎರಡು ನೂತನ ದತ್ತಿ ಸ್ಥಾಪನೆ ಮಾಡಿದಕ್ಕಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ ಸೇವೆ ಮತ್ತು ಕ್ರೀಡಾ ಸಾಧಕರನ್ನು ಗುರುತಿಸಿ ಗೌರವಿಸುವ ಕುರಿತು ಈ ದತ್ತಿ ಸ್ಥಾಪನೆ ಮಾಡಿರುವುದಾಗಿ ತಿಳಿಸಿದರು.
ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಕನ್ನಡ ನಾಡು ನುಡಿ ಕನ್ನಡ ಧ್ವಜದ ಇತಿಹಾಸದ ಕುರಿತು ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಬಿ.ಬಿ ಸರಸ್ವತಿ ಈ ಕಾರ್ಯಕ್ರಮದ ನೆನಪಿಗೆ ನಡೆಸಿದ ಪ್ರಬಂದ ಸ್ಪರ್ಧೆ ಮತ್ತು ಗೀತ ಗಾಯನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು. ವೇದಿಕೆಯಲ್ಲಿ ಶ್ರೀ ಭಗವತಿ ದೇವಸ್ಥಾನ ಸಮಿತಿಯ ಅಧ್ಯಕ್ಷರು ಮಾಜಿ ಸೈನಿಕರೂ ಆದ ಕಾಳಿಮಾಡ ಮುತ್ತಣ್ಣ, ತಾಲೂಕು ಪಂಚಾಯತಿಯ ಮಾಜಿ ಸದಸ್ಯರಾದ ಬೊಳ್ಳೆರ ಪೊನ್ನಪ್ಪ, ಹುದಿಕೇರಿ ಹೋಬಳಿ ಗೌರವ ಕಾರ್ಯದರ್ಶಿಗಳಾದ ಕುಪ್ಪಣ್ಣಮಾಡ ನಂಜಮ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಾನಂಗಡ ಅರುಣ್ ರವರು ಮಾತನಾಡುತ್ತ ಮುಂದಿನ ದಿನಗಳಲ್ಲಿ ಹುದಿಕೇರಿ ಹೋಬಳಿ ವ್ಯಾಪ್ತಿಯಲ್ಲಿ ಗ್ರಾಮಸಿರಿ ಕಾರ್ಯಕ್ರಮ ಮಾಡುವ ಮೂಲಕ ಜಿಲ್ಲೆಯ ಜಾನಪದ, ಕೃಷಿಕ ವರ್ಗದ ಆಚರಣೆ, ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು, ಸಾಧಕರನ್ನು ಗೌರವಿಸುವುದು ಮತ್ತು ಸಮಾಜದಲ್ಲಿ ಸೇವೆ ಸಲ್ಲಿಸಿ ಕಣ್ಮರೆಯಾದವರನ್ನು ನೆನಪಿಸಿಕೊಳ್ಳುವ ಕಾರ್ಯಕ್ರಮವನ್ನು ಮಾಡುವುದಾಗಿ ತಿಳಿಸಿದರು. ಪ್ರಬಂಧ ಸ್ಪರ್ಧೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿನಿ ಸೌಮ್ಯ ಪಿ.ಎಸ್.ಪ್ರಥಮ ಸ್ಥಾನ ಪಡೆದರೆ, 6ನೇ ತರಗತಿಯ ಜಿ.ಜ್ಯೋತಿ ದ್ವಿತೀಯ ಸ್ಥಾನ ಪಡೆದರು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ
ಪ್ರಬಂಧ ಸ್ಪರ್ಧೆಯಲ್ಲಿ ತಾರುಣ್ಯ ಪ್ರಥಮ, ತಾನಿಯ ದ್ವಿತೀಯ ಪಡೆದರು. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಡೆದ ಕನ್ನಡ ಗೀತೆ ಸ್ಪರ್ಧೆಯಲ್ಲಿ ಸುಜ್ಯೋತಿ ಶಾಲೆಯ ಮೋಕ್ಷ ಹೆಚ್. ಸಿ. ಪ್ರಥಮ, ಪೂವಮ್ಮ ದ್ವಿತೀಯ ಪಡೆದರು. ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನಡೆದ
ಕನ್ನಡ ಗೀತೆ ಸ್ಪರ್ಧೆಯಲ್ಲಿ ಸುಜ್ಯೋತಿ ಶಾಲೆಯ ಪೊನ್ನಣ್ಣ ಪ್ರಥಮ ಸ್ಥಾನ, ಸ. ಹಿ. ಪ್ರಾಥಮಿಕ ಶಾಲೆ ಬಿರುನಾಣಿಯ ತನುಜಾ ದ್ವಿತೀಯ ಸ್ಥಾನ ಪಡೆದರು.
ಸಮೂಹ ರೈತ ಗೀತಾ ಸ್ಪರ್ಧೆಯಲ್ಲಿ ಸುಜ್ಯೋತಿ ಶಾಲೆಯ ವಿದ್ಯಾರ್ಥಿಗಳಾದ ರಿಜಮ್ ಮೇದಪ್ಪ, ಪ್ರಚಿತ್, ಧನಿಕ್ ಪೊನ್ನಣ್ಣ ಪ್ರಥಮ ಸ್ಥಾನ ಪಡೆದರೆ
ಸ. ಹಿ. ಪ್ರಾಥಮಿಕ ಶಾಲೆ ಬಿರುನಾಣಿ ಶಾಲೆಯ ವಿದ್ಯಾರ್ಥಿಗಳಾದ ತನುಜಾ, ಸೌಮ್ಯ, ಜ್ಯೋತಿ , ದಿವ್ಯ ದ್ವಿತೀಯ ಸ್ಥಾನ ಪಡೆದರು. ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ತಾಲ್ಲೂಕು ಕೆಸಪ್ಪ ನಿರ್ದೇಶಕರಾದ ಬುಟ್ಟಿಯಂಡ ಸುನಿತ ಗಣಪತಿಹುದಿಕೇರಿ ಹೋಬಳಿ ಕಸಾಪ ಗೌರವ ಕೋಶಾಧಿಕಾರಿ ಶ್ರೀಮತಿಅಣ್ಣಳಮಾಡ ಭವ್ಯ, ಸಂಘಟನಾ ಕಾರ್ಯದರ್ಶಿ ಶ್ರೀಮತಿ ಕರ್ತಮಾಡ ಪಾರ್ವತಿ ವಿಜಯ, ಸದಸ್ಯರುಗಳಾದ ಬುಟ್ಟಿಯಂಡ ರೋಹಿಣಿ, ಧರಣಿ, ಸಬಿತಾ, ಸದಕುಮಾರ್, ಅರುವತ್ತೊಕ್ಲುವಿನ ಕೆ.ಪಿ ಅಶ್ರಫ್, ಶಾಲಾ ಅದ್ಯಾಪಕರು, ಸಾರ್ವಜನಿಕರು ಉಪಸ್ಥಿತರಿದ್ದರು. ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ನಾಡಗೀತೆ ಮತ್ತು ರೈತ ಗೀತೆ ಗಾಯನ ಹಾಗೂ ಸುಜ್ಯೋತಿ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿತ್ತು
ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಕುಪ್ಪಣಮಾಡ ನಂಜಮ್ಮ ದೇವಯ್ಯ ಸ್ವಾಗತಿಸಿದರು. ಅದ್ಯಾಪಕಿ ಶ್ರಿಮತಿ ಚೇನಂಡ ಅಮಿತ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.