
ಮಡಿಕೇರಿ ಫೆ.27 NEWS DESK : ದೈವ ಆರಾಧನೆಯನ್ನು ಶಾಲೆಗಳ ರಂಗೋತ್ಸವ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲು ಅವಕಾಶ ನೀಡಿ ಸುತ್ತೋಲೆ ಹೊರಡಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಫೆ.28 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ. ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದೈವ ಆರಾಧಕರು ಮತ್ತು ದೈವ ನರ್ತಕರಿಂದ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಸುತ್ತೋಲೆ ಹಿಂಪಡೆಯುವಂತೆ ಮನವಿ ಸಲ್ಲಿಸಲಾಗುವುದು ಎಂದು ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ತಿಳಿಸಿದ್ದಾರೆ.









