Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಾಲೆಮಾಡು ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ : ರಾಜಕೀಯ ರಹಿತ ಅಭಿವೃದ್ಧಿಯೇ ನನ್ನ ಉದ್ದೇಶ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಾಲೆಮಾಡು ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ : ರಾಜಕೀಯ ರಹಿತ ಅಭಿವೃದ್ಧಿಯೇ ನನ್ನ ಉದ್ದೇಶ : ಶಾಸಕ ಡಾ.ಮಂತರ್ ಗೌಡ*

ಫೆಬ್ರವರಿ 27, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.27 NEWS DESK : ಚುನಾವಣಾ ಸಂದರ್ಭದಲ್ಲಿ ರಾಜಕೀಯ ಮಾಡೋಣ, ಇನ್ನುಳಿದ ಅವಧಿಯಲ್ಲಿ ಪಕ್ಷಾತೀತವಾಗಿ, ಜಾತ್ಯತೀತವಾಗಿ, ಅಭಿವೃದ್ಧಿಗಾಗಿ ಶ್ರಮಿಸೋಣ. ಪ್ರತಿಯೊಂದು ಗ್ರಾಮ ಅಭಿವೃದ್ಧಿಯಾದರೆ ಇಡೀ ಜಿಲ್ಲೆ ಅಭಿವೃದ್ಧಿಯಾಗಲಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಪಟ್ಟರು. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿ ವಿಷಯದಲ್ಲಿ ನಾನು ಯಾರೊಂದಿಗೂ ಕೂಡ ರಾಜಕೀಯ ಮಾಡಲು ಹೋಗುವುದಿಲ್ಲ. ಗ್ರಾಮ ಪಂಚಾಯಿತಿ ಸದಸ್ಯರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದರೆ ಗ್ರಾಮದ ಅಭಿವೃದ್ಧಿ ಸಾಧ್ಯ. ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಹೊದ್ದೂರು ಗ್ರಾ.ಪಂ ಮಾದರಿ ಗ್ರಾಮ ಪಂಚಾಯಿತಿಯಾಗಿ ಕಾರ್ಯನಿರ್ವಹಿಸುತ್ತಿದೆ.  ಚುನಾವಣಾ ಪೂರ್ವದಲ್ಲಿ ಪಾಲೆಮಾಡು ನಿವಾಸಿಗಳಿಗೆ ನೀಡಿದ್ದ ಭರವಸೆಯಂತೆ ಇದೀಗ 201 ಕುಟುಂಬಗಳಿಗೆ ಹಕ್ಕು ಪತ್ರವನ್ನು ನೀಡಿದ್ದೇವೆ. ನ್ಯಾಯುತವಾದ ಹೋರಾಟಕ್ಕೆ ಸದಾ ನಾನು ನಿಮ್ಮೊಂದಿಗೆ ಕೈ ಜೋಡಿಸುತ್ತೇನೆ ಎಂದರು.  ಕಳೆದ ಎರಡು ದಶಕಗಳಿಂದ ಪಾಲೆಮಾಡು ನಿವಾಸಿಗಳಿಗೆ ಸಿಗದ ಹಕ್ಕು ಪತ್ರವನ್ನು ನಾನು ಶಾಸಕನಾದ ತಕ್ಷಣ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಡಿಕೊಟ್ಟಿದ್ದೇನೆ. ಹಕ್ಕು ಪತ್ರವನ್ನು ಸ್ವೀಕರಿಸಿದವರು ಯಾವುದೇ ಕಾರಣಕ್ಕೂ ಅದನ್ನು ಮಾರಾಟ ಮಾಡಲು ನಿಲ್ಲಬಾರದು. ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರವೂ ನಮ್ಮೊಂದಿಗೆ ಇರಬೇಕೆಂದು ಮನವಿ ಮಾಡಿದರು. ಗ್ರಾಮ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ, ಹೊದ್ದೂರು ಗ್ರಾಮ ಪಂಚಾಯಿತಿ ಇಡೀ ಜಿಲ್ಲೆಯಲ್ಲಿ ಮಾದರಿ ಗ್ರಾಮ ಪಂಚಾಯಿತಿಯಾಗಿ ಕಾರ್ಯನಿರ್ವಹಿಸಲು ಶಾಸಕ ಡಾ.ಮಂತರ್ ಗೌಡ ಅವರ ಸಹಕಾರ ಮತ್ತು ಮಾರ್ಗದರ್ಶನ ದೊಡ್ಡ‌ ಮಟ್ಟದಲ್ಲಿ ಇದೆ. ಶಾಸಕರಾದ ನಂತರ ಡಾ.ಮಂತರ್ ಗೌಡ ಅವರು ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕಳೆದ ಒಂದುವರೆ ವರ್ಷದಲ್ಲಿ 29ಕ್ಕೂ ಹೆಚ್ಚು ಬಾರಿ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿದ್ದಾರೆ.  ಅದಲ್ಲದೇ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 3.60 ಕೋಟಿ ಅನುದಾನವನ್ನು ನೀಡಿದ್ದಾರೆ. ಕಳೆದ 20 ವರ್ಷಗಳಿಂದ ಪಾಲೆಮಾಡು ನಿವಾಸಿಗಳು ಹಕ್ಕುಪತ್ರಕ್ಕಾಗಿ ಹೋರಾಟ ಮಾಡುತ್ತಿದ್ದರು. ಆದರೆ ಡಾ ಮಂತರ್ ಗೌಡ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಪಾಲೆಮಾಡು ಗ್ರಾಮಕ್ಕೆ ಭೇಟಿ ಚುನಾವಣಾ ಬಹಿಷ್ಕಾರ ಕೈ ಬಿಡುವಂತೆ ಮನವಿ ಮಾಡಿ, ಗ್ರಾಮಸ್ಥರಿಗೆ ಭರವಸೆ ನೀಡಿದ್ದರು. ಇದೀಗ ನುಡಿದಂತೆ ಶಾಸಕರು ನಡೆದಿದ್ದಾರೆ. ಎರಡು ದಶಕಗಳ ಕನಸನ್ನು  ನನಸು ಮಾಡಿದ್ದಾರೆ ಎಂದು ಹೆಚ್.ಎ ಹಂಸ ಕೊಟ್ಟಮುಡಿ ಹೇಳಿದರು. ಅರಣ್ಯಾಧಿಕಾರಿಗಳ ವಿರುದ್ಧ ಅಸಮಾಧಾನ : : ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಯಲ್ಲಿ ಸಾರ್ವಜನಿಕರ ಅಹ್ವಾಲು ಸ್ವೀಕರಿಸುವ ಸಂದರ್ಭದಲ್ಲಿ ಕಳೆದ ಒಂದು ವರ್ಷದಿಂದ ಕಬಡಕ್ಕೇರಿ ಗ್ರಾಮದಲ್ಲಿ ಮರ ತೆರವುಗೊಳಿಸಲು ಅರಣ್ಯಾಧಿಕಾರಿಗೆ ಮನವಿ ನೀಡಿದರು ಇದುವರೆಗೆ ಯಾವುದೇ ರೀತಿಯ ಸ್ಪಂದನೆ ದೊರಕಿಲ್ಲ ಎಂದು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು. ಗ್ರಾಮ ಸಭೆಗೆ ಗೈರು ಹಾಜರಾಗಿದ್ದ ಅರಣ್ಯಾಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ಆರ್.ಎಫ್.ಓ ಅವರಿಗೆ ಕರೆ ಮಾಡಿ ಕೂಡಲೇ ಮರವನ್ನು ತೆರವುಗೊಳಿಸಲು ಖಡಕ್ ಸೂಚನೆ ನೀಡಿದರು. ಒಂದು ವರ್ಷದ ಹಿಂದೆ ಮನವಿ ಕೊಟ್ಟರು ಯಾವುದೇ ರೀತಿಯಲ್ಲಿ ನೀವು ಸ್ಪಂದಿಸಿಲ್ಲ,ನಾಳೆ ಏನಾದರೂ ಅಪಾಯ ಸಂಭವಿಸದರೆ ಯಾರು ಹೊಣೆ! ಸದ್ಯದಲ್ಲೇ ಸ್ಥಳಕ್ಕೆ ಭೇಟಿ ನೀಡಿ ಮರ ತೆರವುಗೊಳಿಸುವಂತೆ ಶಾಸಕರು ಆರ್.ಎಫ್.ಒ ಗೆ ಸೂಚನೆ ನೀಡಿದರು. ನ್ಯಾಯಯುತವಾದ ಹೋರಾಟಕ್ಕೆ ನನ್ನ ಬೆಂಬಲ ಇದೆ ::  ಕುಂಬದಾಳುವಿನಲ್ಲಿ ನಡೆಯುತ್ತಿರುವ ನಿವೇಶ ರಹಿತ ಹೋರಾಟಗಾರಕ್ಕೆ ನ್ಯಾಯುತವಾದ ಬೆಂಬಲ ಇದೆ. ಕೊಡಗು ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ನಿವೇಶನ ರಹಿತರ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಕುಂಬಳದಾಳು ಗ್ರಾಮಸ್ಥರಿಗೆ ಸಮಸ್ಯೆಗೆ ನ್ಯಾಯುತವಾದ ಪರಿಹಾರ ಮಾಡುತ್ತೇನೆ ಎಂದು ಭರವಸೆ ನೀಡಿದರು. ಸನ್ಮಾನ ::  ಪಾಲೆಮಾಡು ನಿವಾಸಿಗಳ ಎರಡು ದಶಕಗಳ ಹೋರಾಟಕ್ಕೆ ಸ್ಪಂದಿಸಿ ಹಕ್ಕುಪತ್ರವನ್ನು ಒದಗಿಸಕೊಟ್ಟ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ ಹಂಸ ಕೊಟ್ಟಮುಡಿ, ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್, ಅಭಿವೃದ್ಧಿ ಅಬ್ದುಲ್ಲಾ ಅವರನ್ನು ಪಾಲೆಮಾಡು ನಿವಾಸಿಗಳು ಸನ್ಮಾನಿಸಿ ಗೌರವಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಗ್ರಾಮ ಉಪಾಧ್ಯಕ್ಷರಾದ ಅನುರಾಧ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಕೆ.ಮೊಣ್ಣಪ್ಪ ಹೊದ್ದೂರು ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಎಂ.ಬಿ.ಹಮೀದ್ ಗ್ರಾ.ಪಂ ಸದಸ್ಯರಾದ ಚೌರೀರ ನಾಣಯ್ಯ(ನವೀನ್), ಕುಸುಮಾವತಿ ,ಲಕ್ಷ್ಮಿ, ಟೈನಿ ಕಡ್ಲೆರ,ಚೌರೀರ ಅನಿತಾ, ತಹಶೀಲ್ದಾರ್ ಪ್ರವೀಣ್, ಕಾರ್ಯನಿರ್ವಹಣಾಧಿಕಾರಿ ಶೇಖರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ರಘು,ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಸಿ ಡಿ ಪಿ ಓ, ಕ್ಷೇತ್ರ ಶಿಕ್ಷಣಾಧಿಕಾರಿ, ಸೆಸ್ಕ್ ಅಭಿಯಂತರರು, ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿ ಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.