Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರೆ ಭಾಷೆ ಗಡಿನಾಡ ಉತ್ಸವ-2025*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರೆ ಭಾಷೆ ಗಡಿನಾಡ ಉತ್ಸವ-2025*

ಫೆಬ್ರವರಿ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK  ಫೆ.27 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಕುಶಾಲನಗರ ಗೌಡ ಸಮಾಜ ಮತ್ತು ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲೆಯ ಹಾಗೂ ನೆರೆಯ  ವಿವಿಧೆಡೆಯ ಗೌಡ ಸಮಾಜಗಳ ಸಂಯುಕ್ತ ಆಶ್ರಯದಲ್ಲಿ ಕುಶಾಲನಗರದಲ್ಲಿ ಮಾರ್ಚ್ 2ರಂದು ಅರೆ ಭಾಷೆ ಗಡಿನಾಡ ಉತ್ಸವ-2025 ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಪೊನ್ನಚ್ಚನ ಮೋಹನ್ ತಿಳಿಸಿದ್ದಾರೆ. ಅವರು ಕುಶಾಲನಗರದ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು ಗಡಿ ಭಾಗದಲ್ಲಿ ಉತ್ಸವ ಮೂಲಕ ಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ ಎಂದರು. ಭಾಷೆ ಅಳಿದಲ್ಲಿ ಸಮುದಾಯದ ಸಂಸ್ಕೃತಿ ನಾಶ ಆಗುವ ಆತಂಕ ವ್ಯಕ್ತಪಡಿಸಿದ ಅವರು ಈ ಹಿನ್ನೆಲೆಯಲ್ಲಿ ಮಾರ್ಚ್ ಎರಡರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಅಂದು ಬೆಳಗ್ಗೆ ಕುಶಾಲನಗರ ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆ ಬಳಿಯಿಂದ 9 ಗಂಟೆಗೆ ಮೆರವಣಿಗೆ ಹೊರಡಲಿದೆ. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಅವರು ಮೆರವಣಿಗೆಗೆ ಚಾಲನೆ ನೀಡುವರು. ನಂತರ ಬೆಳಗ್ಗೆ 10 ಗಂಟೆಗೆ ರೈತ ಸಹಕಾರ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ವಹಿಸಲಿದ್ದು ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸುವರು. ವಿರಾಜಪೇಟೆ ಶಾಸಕರಾದ ಎ ಎಸ್ ಪೊನ್ನಣ, ಕೊಡಗು ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಜಿ ಸ್ಪೀಕರ್ ಕೆ ಜಿ ಬೋಪಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಉತ್ಸವದಲ್ಲಿ ಅಕಾಡೆಮಿಯ ಸದಸ್ಯರುಗಳು ಹಾಗೂ ಗೌಡ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಜೆ ಮೂರು ಗಂಟೆಗೆ ಸಮಾರೋಪ ಸಮಾರಂಭ ಕರ್ನಾಟಕ ಅರೆಭಾಷೆ  ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಎ ಮಂಜು, ಕೊಡಗು ಗೌಡ ಸಮಾಜದ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ ಉಪಸ್ಥಿತರಿರುವರು ಎಂದು ಹೇಳಿದರು. ಪ್ರತಿಯೊಬ್ಬ ಸಮಾಜದ ಸದಸ್ಯರು ಉತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು  ಯಶಸ್ವಿಗೊಳಿಸಬೇಕೆಂದು ಅವರು ಕೋರಿದರು. ಇದೇ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರ ನೀಡಿದರು. ಸುದ್ದಿಗೋಷ್ಠಿಯಲ್ಲಿ ಕುಶಾಲನಗರ ಗೌಡ ಸಮಾಜ ಉಪಾಧ್ಯಕ್ಷ ಸೆಟ್ಟೆಜನ ದೊರೆ ಗಣಪತಿ, ಕಾರ್ಯದರ್ಶಿ ಕುಲ್ಲಚನ ಹೇಮಂತ್, ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಚೆರಿಯಮನೆ ರಶಿ, ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚೀಯಂಡಿ  ಶಾಂತಿ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.