Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗುಮ್ಮನಕೊಲ್ಲಿಯಲ್ಲಿ ಉಪನ್ಯಾಸ ಕಾರ್ಯಕ್ರಮ : ಜಾನಪದ ಅತ್ಯಂತ ಶ್ರೀಮಂತ ಸಂಸ್ಕೃತಿ : ಹಂಡ್ರಂಗಿ ನಾಗರಾಜ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗುಮ್ಮನಕೊಲ್ಲಿಯಲ್ಲಿ ಉಪನ್ಯಾಸ ಕಾರ್ಯಕ್ರಮ : ಜಾನಪದ ಅತ್ಯಂತ ಶ್ರೀಮಂತ ಸಂಸ್ಕೃತಿ : ಹಂಡ್ರಂಗಿ ನಾಗರಾಜ್*

ಫೆಬ್ರವರಿ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಫೆ.28 NEWS DESK : ಜಾನಪದ ಗೀತೆಗಳನ್ನು ರಚಿಸಿದವರು ಯಾರೆಂದು ಎಲ್ಲೂ ಉಲ್ಲೇಖವಾಗಿರುವುದಿಲ್ಲ. ವಿಶ್ವದಲ್ಲೇ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ ಎಂದು ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಂಡ್ರಂಗಿ ನಾಗರಾಜ್ ತಿಳಿಸಿದರು. ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ  ಕುಶಾಲನಗರ ಸಮೀಪದ ಗುಮ್ಮನಕೊಲ್ಲಿಯ ಬೃಂದಾವನ ಬಡಾವಣೆಯಲ್ಲಿ ಆಯೋಜಿಸಿದ್ದ ಚೆರಿಯಮನೆ ದಿವಂಗತ ಕೃಷ್ಣಪ್ಪ ಮರಗೋಡು ದತ್ತಿ ಕಾರ್ಯಕ್ರಮದ ಅಂಗವಾಗಿ ಜಾನಪದ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು, ಜಾನಪದವನ್ನು ಈಗಲೂ ಗ್ರಾಮೀಣ ಭಾಗಗಳಲ್ಲಿ ಕೇಳಬಹುದು. ಇದನ್ನು ಮನುಷ್ಯ ಜೀವನದ ಎಲ್ಲ ಘಟ್ಟಗಳಲ್ಲೂ ಬಳಸುತ್ತಾರೆ. ಸುಖ, ದುಃಖಗಳ ಸಂದರ್ಭಗಳ ಅನುಸಾರ ಸ್ಥಳದಲ್ಲೇ ಗೀತೆಗಳನ್ನು ರಚಿಸಿ ಹಾಡುವ ಅದ್ಬುತ ಜ್ಞಾನ ಹೊಂದಿರುವ ಜನರನ್ನು ಕಾಣಬಹುದು. ಜಾನಪದ ಗೀತೆಗಳನ್ನು ಹೆಚ್ಚಾಗಿ ಗ್ರಾಮೀಣ ಜನರು ಬಳಸಿ, ತಾನು ಮಾಡುವ ಕೆಲಸಗಳಲ್ಲಿ ತನ್ಮಯತೆ ಮತ್ತು ಶಕ್ತಿ ಪಡೆಯುತ್ತಾರೆ ಅಂತಹ ಶ್ರೇಷ್ಠ ಶಕ್ತಿಯಿದೆ ಎಂದರು.
ಜನಪದ ಮತ್ತು ಜಾನಪದ ಎನ್ನುವ ಎರಡು ವಿಧವನ್ನು ವಿವರಿಸಿದರು. ಇದು ಸಂಪ್ರದಾಯದ ಘೋಷಣೆಯಿಲ್ಲದೆ ತನ್ನಿಂದ ತಾನೆ ಹರಿದು ಬಂದು, ಮಣ್ಣಿನ ಸಂಸ್ಕೃತಿಯ ಸಾರವನ್ನು ಜಾನಪದ ಶೈಲಿಯಲ್ಲಿ ವಿವರಿಸುತ್ತಾರೆ ಎಂದು ವಿವರಿಸಿದರು. ನಿವೃತ್ತ ಶಿಕ್ಷಕಿ ಉಮಾದೇವಿ ಸೋಮಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕರ್ನಾಟಕದಲ್ಲಿ ಜನಸಿದ ಜಾನಪದ ಸಂಸ್ಕೃತಿ ವಿಶ್ವದ ಅನೇಕ ಭಾಷೆಗಳಿಗೆ ಭಾಷಾಂತರವಾಗಿ ಎಲ್ಲರ ಗಮನ ಸೆಳೆಯುವ ಅಗಾಧ ಶಕ್ತಿಯಿದೆ. ಅನಕ್ಷಸ್ಥರು ರಚಿಸಿ, ಹಾಡುವ ಗೀತೆಗಳಲ್ಲಿ ಅನೇಕ ಅರ್ಥಗಳು ಇರುತ್ತವೆ. ಹುಟ್ಟಿನಿಂದ ಸಾವಿನ ತನಕ ಮನುಷ್ಯ ಜೀವನವನ್ನು ಕೇವಲ 2 ರಿಂದ 3 ಪದ್ಯಗಳಲ್ಲಿ ವಿವರಿಸುವ ತಾಕತ್ತು ಇರುತ್ತದೆ ಎಂದು ಶ್ಲಾಘಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಕಸಾಪ ಅಧ್ಯಕ್ಷ ಕೆ.ಎಸ್.ನಾಗೇಶ್  ಕನ್ನಡ ಸಾರಸತ್ವ ಲೋಕದಲ್ಲಿ ಜಾನಪದಕ್ಕೆ ವಿಶೇಷ ಸ್ಥಾನಮಾನವಿದೆ. ಇಲ್ಲಿಯ ಆಚಾರ ವಿಚಾರಗಳನ್ನು ವಿಶ್ವಕ್ಕೆ ಪರಿಚಯಿಸಿದ ಹೆಗ್ಗಳಿಕೆಯಿದೆ. ಕನ್ನಡ ಭಾಷೆಯ ಶ್ರೇಷ್ಠತೆಯನ್ನು ಗಮನಿಸಿದ ಹಲವು ವಿದೇಶಿಯರು ಅಧ್ಯಯನ ಮಾಡಿರುವ ಹಲವು ಉದಾಹರಣೆಗಳು ಇವೆ. ಇಲ್ಲಿಯ ಶ್ರೇಷ್ಠತೆಗಾಗಿ ಸಾಹಿತ್ಯ ಲೋಕದ ಅತ್ಯುನ್ನತ 8 ಜ್ಞಾನಪೀಠ ಪ್ರಶಸ್ತಿ ಲಾಭಿಸಿರುವುದೇ ಸಾಕ್ಷಿ ಎಂದು ಕೊಂಡಾಡಿದರು. ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜ್ ಪಾಲ್ಗೊಂಡಿದ್ದರು. ಕಾರ್ಯಕ್ರಮ ಅಂಗವಾಗಿ ಬಡಾವಣೆ ನಿವಾಸಿಗಳಾದ ಉಮಾವತಿ, ವನಿತಾ, ರಾಣಿ, ಲೀಲಾ ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿದರು. ಯುವ ಪೀಳಿಗೆಯ ಕೆಲವರು ಜಾನಪದ ನೃತ್ಯಗಳನ್ನು ಪ್ರದರ್ಶನ ನೀಡಿದರು.  ಅನುಸೂಯ ಶಿವಣ್ಣ, ಮೀನಾಕ್ಷಿ, ಪೂವಯ್ಯ ಮತ್ತು ಕಲ್ಲೂರು ನಾಣಯ್ಯ ಅವರುಗಳು ತಮ್ಮ ಮನೆಯಲ್ಲಿ ಇದ್ದ ಪುರಾತನ ಕಾಲದ ಪರಿಕರಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.  ಭತ್ತ, ರಾಗಿ, ಸಗಣಿಯ ರಾಶಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದಿತ್ತು. ಎಂ.ಎನ್.ಕಾಳಪ್ಪ, ಜಗನ್ನಾಥ್, ಮಹೇಂದ್ರ, ಆಕಾಶ್, ಕಸಾಪ ಪ್ರಧಾನ ಕಾರ್ಯದರ್ಶಿ ಶೈಲಾ, ಖಜಾಂಚಿ ಕೆ.ವಿ.ಉಮೇಶ್, ನಿರ್ದೇಶಕಿ ಬಿ.ಬಿ.ಹೇಮಲತಾ, ಹೆಬ್ಬಾಲೆ ಹೋಬಳಿ ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ, ಕಾರ್ಯದರ್ಶಿ ಸುಬ್ರಮಣಿ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.