
ಮಡಿಕೇರಿ ಮಾ.1 NEWSDESK : ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿಯ ಪದಕ ವಿಜೇತ ಶ್ವಾನ “ಕಾಪರ್” ಹಾಗೂ ತರಬೇತುದಾರ ಹೆಡ್ ಕಾನ್ಸ್‌ಟೇಬಲ್ ಮನಮೋಹನ್ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಿ, ಗೌರವಿಸಿದರು. ನಂತರ ಮಾತನಾಡಿ, ಕೊಡಗಿಗೆ ಹೆಮ್ಮೆ ತರುವಂತ ಪೊಲೀಸ್ ಸಿಬ್ಬಂದಿಗಳ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂಪೊಲೀಸ್ ಪ್ರಮುಖರು, ಸಿಬ್ಬಂದಿಗಳು ಹಾಜರಿದ್ದರು.









