Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
  • *ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಸಾಹಿತ್ಯ ಮಂಥನ ಕಾರ್ಯಕ್ರಮ : ಕನ್ನಡ ಭಾಷೆಗೆ ಶ್ರೇಷ್ಠತೆಯನ್ನು ತಂದು ಕೊಟ್ಟ ಮೇರು ಕವಿ ಪಂಪ  : ಮುಕುಂದ ರಾಜ್* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಸಾಹಿತ್ಯ ಮಂಥನ ಕಾರ್ಯಕ್ರಮ : ಕನ್ನಡ ಭಾಷೆಗೆ ಶ್ರೇಷ್ಠತೆಯನ್ನು ತಂದು ಕೊಟ್ಟ ಮೇರು ಕವಿ ಪಂಪ  : ಮುಕುಂದ ರಾಜ್* 

ಮಾರ್ಚ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮಾ.1 NEWS DESK : ಸಂಸ್ಕೃತ ಭಾಷೆ ದೇವರ ಭಾಷೆ, ಜನರ ಭಾಷೆ ಹಾಗೂ ಶ್ರೀಮಂತರ ಭಾಷೆಯಾಗಿತ್ತು. ಜನಸಾಮಾನ್ಯರಿಗೆ ಸಂಸ್ಕೃತ ಭಾಷೆ ಕಬ್ಬಿಣದ ಕಡಲೆಯಾಗಿತ್ತು. ಇಂತಹ ಸಂದರ್ಭದಲ್ಲಿ ಕನ್ನಡ ಭಾಷೆಯನ್ನು ಉಳಿಸಲು ಹಾಗೂ ಬೆಳೆಸಲು ವಿಕ್ರಮಾರ್ಜುನ ವಿಜಯ ಹಾಗೂ ಆದಿ ಪುರಾಣ ಗ್ರಂಥಗಳನ್ನು ಬರೆದ ಪಂಪ ಮಹಾಕವಿ ಕನ್ನಡ ಭಾಷೆಗೆ ಶ್ರೇಷ್ಠತೆಯನ್ನು ತಂದು ಕೊಟ್ಟ ಮೇರು ಕವಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದ ರಾಜ್ ಬಣ್ಣಿಸಿದರು. ಕೊಡಗು ಜಿಲ್ಲಾ ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ” ಸಾಹಿತ್ಯ ಮಂಥನ ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಕನ್ನಡ ಮಾತನಾಡಿದರೆ ಕೀಳರಿಮೆ. ಇಂಗ್ಲೀಷ್ ಮಾತನಾಡಿದರೆ ಹಿರಿಮೆ ಎಂದು ಬೀಗುತ್ತಿರುವ ಪರಿಸ್ಥಿತಿ ಅಂದು ಪಂಪನ ಕಾಲಘಟ್ಟದಲ್ಲಿ ಇದ್ದುದರಿಂದ ಮೇಲ್ವರ್ಗದ ಮಂದಿ ಅಂದು ಸಂಸ್ಕೃತ ಭಾಷೆಯನ್ನು ವೈಭವೀಕರಿಸಿ ಕನ್ನಡ ಭಾಷೆಯನ್ನು ಕಡೆಗಣಿಸಿದ್ದರಿಂದಾಗಿ ಪಂಪ ಮಹಾಕವಿ ಮೈಕೊಡವಿ ನಿಂತು ಕನ್ನಡ ಸಾಹಿತ್ಯಕ್ಕೆ ಅಪಾರ ಶ್ರೀಮಂತಿಕೆ ತಂದು ಕೊಟ್ಟರು. ವಿದ್ಯಾರ್ಥಿಗಳು ಕಾಲೇಜು ದಿನಗಳಿಂದಲೇ ವೈಚಾರಿಕ ಪ್ರಜ್ಞೆಯ ಜೊತೆಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಡಾ.ಅಂಬೇಡ್ಕರ್ ಅವರು ದೇಶಕ್ಕೆ ಕೊಟ್ಟಂತಹ ಸಂವಿಧಾನ ಹಾಗೂ ಜಗಜ್ಯೋತಿ ಬಸವೇಶ್ವರರು ಸಾರಿದ ವಚನ ಸಾಹಿತ್ಯದ ಆಶಯಗಳನ್ನು ಮೈಗೂಡಿಸಿಕೊಂಡು ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಬೇಕೆಂದು ಮುಕುಂದ ರಾಜ್ ಕರೆಕೊಟ್ಟರು. ಪರಿಸರ ತಜ್ಞ ತುಮಕೂರಿನ ಟಿ.ಎಸ್.ವಿವೇಕಾನಂದ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದಷ್ಟೇ ಪರಿಸರ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಈ ಭೂಮಿ, ಮಣ್ಣು, ನೀರು, ಗಾಳಿಯನ್ನು ಕೆಡದಂತೆ ಸಂರಕ್ಷಿಸಿ ಮುಂದಿನ ಪೀಳಿಗೆಗೂ ಹಸ್ತಾಂತರಿಸಬೇಕು ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಅಕಾಡೆಮಿ ಅಧ್ಯಕ್ಷ ಮುಕುಂದ ರಾಜ್ ಸಂವಾದ ನಡೆಸಿದರು. ರಾಮನಗರದ ಸಾಹಿತಿ ಬೈರಮಂಗಲ ರಾಮೇಗೌಡ ಹಾಗೂ ಕಾವ್ಯ ಸಂಸ್ಕೃತಿ ಯಾನದ ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಮಹಾಮನೆ ಮಾತನಾಡಿ ವಿದ್ಯಾರ್ಥಿಗಳು ಸಾಹಿತ್ಯ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಸಾಹಿತ್ಯಕ್ಕೆ ತನ್ನದೇ ಆದ ಮೌಲ್ಯವಿದೆ. ಸಾಹಿತ್ಯ ನೋವುಂಡ ಮನುಷ್ಯನ ಬದುಕಿಗೆ ಔಷಧಿಯಂತೆ ಕೆಲಸ ಮಾಡುತ್ತದೆ ಎಂದರು. ಸಾಹಿತ್ಯಾಸಕ್ತರ ವೇದಿಕೆ ಸಂಚಾಲಕ ಕೆ.ಎಸ್.ಮೂರ್ತಿ, ಮಹಾತ್ಮಗಾಂಧಿ ಪದವಿ ಕಾಲೇಜು ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ, ಪ್ರಾಂಶುಪಾಲೆ ಲಿಖಿತಾ ಇದ್ದರು.  ಇದೇ ಸಂದರ್ಭ ಮುಕುಂದ ರಾಜ್ ಅವರನ್ನು ಸಾಹಿತ್ಯ ವೇದಿಕೆಯಿಂದ ಗೌರವಿಸಲಾಯಿತು.
ಕಾಲೇಜು ಕನ್ನಡ ಉಪನ್ಯಾಸಕ ಮಂಜೇಶ್ ಸ್ವಾಗತಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಸೆ.30 NEWS DESK : ಕೊಡ್ಲಿಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೊಡ್ಲಿಪೇಟೆ…

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.