Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
  • *ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯ ಬಜೆಟ್ : ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ : ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ : ಎಸ್‍ಡಿಪಿಐ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯ ಬಜೆಟ್ : ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ : ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ : ಎಸ್‍ಡಿಪಿಐ ಆಗ್ರಹ*

ಮಾರ್ಚ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.1 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಮಾ.7 ರಂದು ಮಂಡಿಸುವ ಬಜೆಟ್ ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಲ ತುಂಬಬೇಕು ಹಾಗೂ ಕೊಡಗಿನ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ‘ಕೊಡಗು ಜಿಲ್ಲೆಯ ಜನತಾ ಬಜೆಟ್-2025’ ಎಂಬ ಎಸ್‍ಡಿಪಿಐಯ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್, ‘ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್-2025’ ಎನ್ನುವ ಬೇಡಿಕೆಗಳ ಕೈಪಿಡಿಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಬಿಡುಗಡೆ ಮಾಡಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದೆ ಎಂದರು.
:: ಕೊಡಗು ವಿವಿ ಉಳಿಸಿ ::  ಕೊಡಗು ವಿಶ್ವ ವಿದ್ಯಾಲಯ ಸೇರಿದಂತೆ ರಾಜ್ಯದ ಒಟ್ಟು 9 ನೂತನ ವಿವಿಗಳನ್ನು ಮುಚ್ಚುವ ದೂರದೃಷ್ಟಿ ರಹಿತವಾದ ಚಿಂತನೆಯನ್ನು ಸರ್ಕಾರ ಮಾಡಿದೆ. ಶಿಕ್ಷಣ ಕ್ಷೇತ್ರದ ಪ್ರಗತಿಯ ಮೂಲಕ ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾದ ಸರ್ಕಾರ ವಿವಿಗಳನ್ನು ಮುಚ್ಚುವ ನಿರ್ಧಾರಕ್ಕೆ ಬಂದಿರುವುದು ಸರಿಯಲ್ಲ. ಕೊಡಗು ವಿವಿ ರದ್ದುಗೊಳಿಸುವ ಸಚಿವ ಸಂಪುಟ ಸಮಿತಿಯ ಪ್ರಸ್ತಾಪವನ್ನು ಕೈಬಿಡಬೇಕೆಂದು ಆಗ್ರಹಿಸಿದರು.
:: ಕಾನೂನು ಕಾಲೇಜು ಬೇಕು ::  ಕೊಡಗಿನ ಆಸಕ್ತ ವಿದ್ಯಾರ್ಥಿಗಳು ಕಾನೂನಿನ ಶಿಕ್ಷಣವನ್ನು ಪಡೆಯುವ ಸಲುವಾಗಿ ದೂರದೂರುಗಳನ್ನು ಅವಲಂಬಿಸಬೇಕಾಗಿದೆ. ಆದ್ದರಿಂದ ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಜೆಟ್‍ನಲ್ಲಿ ಕೊಡಗಿಗೊಂದು ಕಾನೂನು ಕಾಲೇಜು ಘೋಷಿಸಬೇಕು. ಐಪಿಎಸ್, ಐಎಎಸ್ ಮತ್ತು ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರಿ ತರಬೇತಿ ಕೇಂದ್ರವನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿದರು. ಈ ಹಿಂದಿನ ಬಜೆಟ್‍ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಶೇ.4 ಹಣಕಾಸನ್ನು ಮೀಸಲಿಡಲಾಗಿತ್ತು, ಪ್ರಸ್ತುತ ಶೇ.15 ರಷ್ಟು ಹಣವನ್ನು ಒದಗಿಸಬೇಕು. ಮಡಿಕೇರಿಯಲ್ಲಿ ನೂತನ ಎಂಆರ್‍ಐ ಸ್ಕ್ಯಾನಿಂಗ್ ಅಳವಡಿಸಿದ್ದರು, ರೋಗಿಗಳು ಸೌಲಭ್ಯಕ್ಕಾಗಿ ಮೂರು ನಾಲ್ಕು ವಾರಗಳ ಕಾಲ ಕಾಯಬೇಕಾದ ಪರಿಸ್ಥಿತಿ ಇದೆ. ಇಲ್ಲಿನ ಸಮಸ್ಯೆಗೆ ಪರಿಹಾರ ಒದಗಿಸುವ ಅಗತ್ಯವಿದೆ. ಕೊಡಗು ಜಿಲ್ಲೆಯಲ್ಲಿ ಕ್ಯಾನ್ಸರ್ ಸೆಂಟರ್ ತೆರೆಯಲು ಬಜೆಟ್‍ನಲ್ಲಿ ಅಗತ್ಯ ಅನುದಾನ ಒದಗಿಸಬೇಕು. ಇತ್ತೀಚಿನ ದಿನಗಳಲ್ಲಿ ನವಜಾತ ಶಿಶುಗಳ ಮರಣ ಪ್ರಕರಣಗಳು ರಾಜ್ಯದ ವಿವಿಧೆಡೆ ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ‘ಶಿಶು ಪಾಲನಾ ಕೇಂದ್ರ’ವನ್ನು ಕೊಡಗಿನಲ್ಲಿ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹೃದಯಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಗೆ ದೂರದ ಬೆಂಗಳೂರು ಮೊದಲಾದ ನಗರ ಪ್ರದೇಶಗಳನ್ನು ಕೊಡಗಿನ ಜನತೆ ಅವಲಂಬಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೋಗಗಳಿಗೂ ಸೂಕ್ತ ಚಿಕಿತ್ಸೆ ದೊರಕುವಂತಹ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಜಿಲ್ಲೆಗೊಂದು ಏರ್ ಅಂಬ್ಯುಲೆನ್ಸ್ ಕಲ್ಪಿಸಬೇಕೆಂದು ಅಮಿನ್ ಮೊಹಿಸಿನ್ ಆಗ್ರಹಿಸಿದರು.
:: ಭೂ ಗುತ್ತಿಗೆ ರದ್ದು ಮಾಡಿ ::  ಜಿಲ್ಲೆಯ ಭೂ ಮಾಲೀಕರು ಒತ್ತುವರಿ ಮಾಡಿದ ಭೂಮಿಯನ್ನು, ಭೂ ಗುತ್ತಿಗೆಯ ಆಧಾರದಲ್ಲಿ ನೀಡುವ ಆದೇಶವನ್ನು ರದ್ದು ಪಡಿಸಿ, ಆ ಭೂಮಿಯನ್ನು ಭೂ ರಹಿತರಿಗೆ ವಿತರಿಸಬೇಕು. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಈ ಹಿಂದಿನಿಂದಲು ಕೊಡಗಿಗೆ ರೈಲ್ವೆ ಸಂಪರ್ಕದ ಪ್ರಸ್ತಾಪಗಳಾಗುತ್ತಿದ್ದರು ಅವು ಕಾರ್ಯಗತವಾಗಿಲ್ಲ. ಈ ಹಿನ್ನೆಲೆ ರೈಲ್ವೆ ಸಂಪರ್ಕಕ್ಕೆ ಒತ್ತು ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು. ಕಾಡಾನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ, ಮುಂಗಾರಿನ ಅನಾಹುತಗಳ ತಡೆಗೆ ನದಿ ತೊರೆಗಳ ಹೂಳೆತ್ತಲು ಕ್ರಮ, ಕೊಡಗಿನ ಪ್ರವಾಸೋದ್ಯಮದ ಅಭಿವೃದ್ಧಿಗೆ 5 ಸಾವಿರ ಕೊಟಿ ರೂ.ಗಳನ್ನು ಮೀಸಲಿಡಬೇಕು. ಜಿಲ್ಲೆಯ ತಾಲ್ಲೂಕು ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು, ಮಸೀದಿಯ ಇಮಾಮ್, ಮೋಝಿನ್‍ಗಳ ಮಾಸಾಶನ ಹೆಚ್ಚಿಸಬೇಕೆಂದು ಒತ್ತಾಯಿಸಿದರು.
:: ಸಂಸತ್-ಮೂರು ವಿಧಾನ ಸಭಾ ಕ್ಷೇತ್ರ ಒದಗಿಸಿ ::  ಕೊಡಗಿಗೆ ಪ್ರತ್ಯೇಕವಾದ ಸಂಸತ್ ಸ್ಥಾನವನ್ನು ಒದಗಿಸಲು ರಾಜ್ಯ ಸರ್ಕಾರ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಮತ್ತು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಈ ಹಿಂದಿನಂತೆ ಮೂರು ವಿಧಾನಸಭಾ ಕ್ಷೇತ್ರಗಳನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಎಸ್‍ಡಿಪಿಐ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸುಂಟಿಕೊಪ್ಪ, ಉಪಾಧ್ಯಕ್ಷ ಎಂ.ಕೆ.ಮನ್ಸೂರ್ ಆಲಿ, ಮಾಜಿ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕಾರ್ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ಮೇರಿ ವೇಗಸ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಸೆ.30 NEWS DESK : ಕೊಡ್ಲಿಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೊಡ್ಲಿಪೇಟೆ…

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.