Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಕಾಂಗತ ಮೂಡ್ (ದಿ ಶ್ಯಾಡೋ)” ಕೊಡವ ಚಿತ್ರ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*”ಕಾಂಗತ ಮೂಡ್ (ದಿ ಶ್ಯಾಡೋ)” ಕೊಡವ ಚಿತ್ರ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ*

ಮಾರ್ಚ್ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.2 : ವಿಭಿನ್ನ ನಿರೂಪಣಾ ಶೈಲಿ, ಪಾತ್ರ ಪೋಷಣೆ ಮತ್ತು ಕೊಡಗಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಥಾ ವಸ್ತುವಿನ ಚಲನಚಿತ್ರಗಳನ್ನು ನಿರ್ದೇಶಿಸುವ ಮೂಲಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ವರೆಗೂ ಸಿನಿ ಹೆಜ್ಜೆಯನ್ನು ಬೆಳೆಸಿ ಸಿನಿಮಾರಂಗದಲ್ಲಿ ಕೊಡಗಿನ ಪ್ರತಿಭೆಗಳ ಇರುವಿಕೆಯನ್ನು ಸಾಕ್ಷೀಕರಿಸಿದ ಪ್ರಶಸ್ತಿ ವಿಜೇತ ನಿರ್ದೇಶಕ, ನಟ ಹಾಗೂ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ “ಕಾಂಗತ ಮೂಡ್ (ದಿ ಶ್ಯಾಡೋ)” ಕೊಡವ ಚಲನಚಿತ್ರ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಕೂರ್ಗ್ ಕಾಫಿವುಡ್ ಮೂವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಕೊಡವ ಚಲನಚಿತ್ರ “ಕಾಂಗತ ಮೂಡ್”(“(The Shadow)  16ನೇ ಚಲನಚಿತ್ರೋತ್ಸವದ ಕನ್ನಡ ಸ್ಪರ್ಧಾ ವಿಭಾಗದಲ್ಲಿ ಆಯ್ಕೆಯಾಗಿದೆ. ಬೆಂಗಳೂರಿನ ರಾಜಾಜಿನಗರದ ಒರೆಯನ್ ಮಾಲ್ ನಲ್ಲಿ ಮಾರ್ಚ್ 1 ರಿಂದ 8ರ ವರೆಗೆ ನಡೆಯುತ್ತಿರುವ ಚಲನಚಿತ್ರೋತ್ಸವದಲ್ಲಿ “ಕಾಂಗತ ಮೂಡ್” ಎರಡು ಪ್ರದರ್ಶನ ಕಾಣಲಿದೆ. ಮಾ.2 ರಂದು ಮಧ್ಯಾಹ್ನ 3 ಗಂಟೆಗೆ ರಾಜ್ ಕುಮಾರ್ ಭವನ್ ಮತ್ತು ಮಾ.6ರಂದು ಮಧ್ಯಾಹ್ನ 12.45ಕ್ಕೆ ಒರೆಯನ್ ಮಾಲ್ ನಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿಶ್ವದಾದ್ಯಂತದಿಂದ 800 ಕ್ಕೂ ಅಧಿಕ ಚಿತ್ರಗಳು ಬಂದಿದ್ದು, 200 ಚಿತ್ರಗಳು ಆಯ್ಕೆಯಾಗಿವೆ. ಇವುಗಳಲ್ಲಿ “ಕಾಂಗತ ಮೂಡ್ (ದಿ ಶ್ಯಾಡೋ)” ಕೂಡ ಸೇರಿರುವುದು ಹೆಮ್ಮೆ ಎನಿಸಿದೆ ಎಂದು ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಚಿತ್ರಕ್ಕೆ ಪ್ರಕಾಶ್ ಕಾರ್ಯಪ್ಪ ಅವರ ಪತ್ನಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಸಹ ನಿರ್ಮಾಪಕಿಯಾಗಿದ್ದು, ಚಿತ್ರದ ಕಥೆ, ನಿರ್ಮಾಣ, ನಿರ್ದೇಶನದ ಜವಾಬ್ದಾರಿಯನ್ನು ಪ್ರಕಾಶ್ ಕಾರ್ಯಪ್ಪ ಅವರು ನಿರ್ವಹಿಸಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ಚೆಡಿಯಂಡ ಸಂತೋಷ್ ಮೇದಪ್ಪ ಹಾಗೂ ಅಪ್ಪಂಡೇರಂಡ ತೇಜು ಪೊನ್ನಪ್ಪ, ಅತಿಥಿ ಪಾತ್ರದಲ್ಲಿ ಅನಂತಶಯನ, ಗುಮ್ಮಟ್ಟಿರ ಕಿಶು ಉತ್ತಪ್ಪ, ಬೊಳ್ಳಜಿರ ಬಿ.ಅಯ್ಯಪ್ಪ, ಅಜ್ಜಮಕ್ಕಡ ವಿನು ಕುಶಾಲಪ್ಪ ನಟಿಸಿದ್ದಾರೆ. ಉಳಿದಂತೆ ಅಮ್ಮಾಟಂಡ ದೇವಯ್ಯ, ವಿಂದ್ಯ ದೇವಯ್ಯ, ತಂಬುಕುತ್ತೀರಾ ಚರಣ್, ಸಿದ್ದಂಡ ಶಂಭು, ದೇವಂಡಿರ ಲೋಕೇಶ್, ಮಡೆಯಂಡ ಸೂರಜ್, ಮಡೆಯಂಡ ಪ್ರೀನಾ ನಟಿಸಿದ್ದಾರೆ. ತಾಂತ್ರಿಕ ವರ್ಗದಲ್ಲಿ ಗಾರ್ಗಿ ಕಾರೆಹಕ್ಲು, ಪ್ರದೀಪ್ ಆರ್ಯನ್, ಈರಮಂಡ ಹರಿಣಿ ವಿಜಯ್, ಚೋಕಂಡ ದಿನು ನಂಜಪ್ಪ, ಟಿ.ಮುತ್ತುರಾಜು, ಯದುನಂದನ್, ನೀಲ್ ನಾಗರಾಜ್, ನಿಖಿಲ್ ಕಾರ್ಯಪ್ಪ, ರಿಕ್ತಿ ನಿರಂಜನ್, ಈರಮಂಡ ವಿಜಯ್ ಉತ್ತಯ್ಯ, ಬೊಳ್ಳಜಿರ ಬಿ.ಅಯ್ಯಪ್ಪ, ಮೇಘರಾಜ್, ಕೊಚ್ಚೆರ ನರೇನ್ ಬಿದ್ದಪ್ಪ ಸೇರಿದಂತೆ ಮುಂತಾದವರು ಕಾರ್ಯನಿರ್ವಹಿಸಿದ್ದಾರೆ. *ಕಥಾ ಸಾರಾಂಶ* ಕಾಫಿ ತೋಟದಲ್ಲೇ ಜೀವನ ಆರಂಭಿಸುವ ಬಾಲಕನೋರ್ವ ಶಿಕ್ಷಣದಿಂದ ವಂಚಿತನಾಗಿ ಹೊರ ಜಗತ್ತಿನ ಪರಿಚಯವಿಲ್ಲದೆ ಬೆಳೆಯುತ್ತಲೇ ದುಶ್ಚಟಗಳಿಗೆ ದಾಸನಾಗುತ್ತಾನೆ. ತೋಟದ ಮಾಲೀಕನ ಒಡನಾಟದ ನಡುವೆಯೂ ತನ್ನ ಭವಿಷ್ಯದ ನಿರ್ಧಾರದಲ್ಲಿ ಎಡವಿ ಹಾದಿ ತಪ್ಪುವ ಯುವಕ ದುರಂತ ಅಂತ್ಯ ಕಾಣುವ ಕಥೆಯನ್ನು “ಕಾಂಗತ ಮೂಡ್ (ದಿ ಶ್ಯಾಡೋ)” ಚಿತ್ರದಲ್ಲಿ ನಿರೂಪಿಸಲಾಗಿದೆ. ಇದೊಂದು ನೈಜತೆಯಿಂದ ಕೂಡಿದ ಕಥಾವಸ್ತುವಾಗಿದ್ದು, ಪ್ರೇಕ್ಷಕರ ಮನ ಮಿಡಿಯುವಲ್ಲಿ ಯಶಸ್ವಿಯಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ…

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.