Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
  • *ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*
  • *ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರದ್ಧಾಭಕ್ತಿಯಿಂದ ನಡೆದ ಚೆಟ್ಟಳ್ಳಿಯ ಚೇರಳ ಶ್ರೀಭಗವತಿ ಉತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರದ್ಧಾಭಕ್ತಿಯಿಂದ ನಡೆದ ಚೆಟ್ಟಳ್ಳಿಯ ಚೇರಳ ಶ್ರೀಭಗವತಿ ಉತ್ಸವ*

ಮಾರ್ಚ್ 2, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಟ್ಟಳ್ಳಿ NEWS DESK ಮಾ.2 : ಚೆಟ್ಟಳ್ಳಿಯ ಚೇರಳ ಶ್ರೀಭಗವತಿ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ‘ಪಟ್ಟಣಿ ಹಬ್ಬ’ ದಂದು ಕಲ್ಡಚ ಹೋಗುವ ಸಂಪ್ರದಾಯದಂತೆ ಹೆಣ್ಣು ಮಕ್ಕಳು ದೇವಾಲಯದಿಂದ ಕಳಶದೊಂದಿಗೆ ತೆರಳಿ ಚೌಂಡಿ ಬನದಲ್ಲಿ ಪೂಜೆ ಮಾಡಿದರು. ಒಡ್ಡೋಲಗ ದುಡಿಕೊಟ್ಟ್ ನೊಂದಿಗೆ ದೇವತಕ್ಕರ ಮನೆಯಿಂದ ದೇವರ ಭಂಡಾರವನ್ನು ದೇವಾಲಯಕ್ಕೆ ತಂದು ಮಾಹಾಪೂಜೆ, ಕೊಂಬಾಟ್ ಸೇವೆ ಸಲ್ಲಿಸಲಾಯಿತು. ನಂತರ ದೇವರ ಭಂಡಾರವನ್ನು ದೇವತಕ್ಕರ ಮನೆಯಲ್ಲಿ ಇಡಲಾಯಿತು. ಮಾರನೇ ದಿನ ಊರಿನವರು ಅಯ್ಯಪ್ಪ ದೇವರಬನಕ್ಕೆ ತೆರಳಿ ದೇವರಿಗೆ ಬಲಿಪೂಜೆ ಮಾಡಿ ದೇವರ ಪ್ರಸಾದವನ್ನು ಸ್ವೀಕರಿಸಿದರು. ದೇವಾಲಯಕ್ಕೆ ಬಂದ ಭಕ್ತರು ತೆಂಗಿನಕಾಯಿಗೆ ಗುಂಡುಹೊಡೆಯುವ ಮೂಲಕ ದೇವರಕಟ್ಟು ಮುರಿಯಲಾಯಿತು. ಭಾನುವಾರ ಚೇರಳ ಶ್ರೀಭಗವತಿ ದೇವರ ದೊಡ್ಡಹಬ್ಬ ನಡೆಯಿತು. ಬಿಳಿಕುಪ್ಪಸ ದಟ್ಟಿಯನ್ನು ತೊಟ್ಟ ಊರಿನ ಕೊಡವ ಮತ್ತು ಗೌಡ ಜನಾಂಗದವರು ಕೊಂಗೇಟಿರ ಐನ್ ಮನೆಯಿಂದ ಊರುತಕ್ಕರಾದ ಕೊಂಗೇಟಿರ ಹರೀಶ್ ಅಪ್ಪಣ್ಣ ಹಾಗೂ ಕೊಂಗೇಟಿರ ಕುಟುಂಬಸ್ಥರನ್ನು ಒಡ್ಡೋಲಗ ದುಡಿಕೊಟ್ಟ್ನೊಂದಿಗೆ ದೇವಾಲಯಕ್ಕೆ ಕರೆ ತಂದರು. ನಂತರ ದೇವತಕ್ಕ ಚೇರಳ ತಮ್ಮಂಡ ಆನಂದ ಅವರ ಮನೆಯಿಂದ ದೇವರ ಭಂಡಾರವನ್ನು ದೇವಾಲಯಕ್ಕೆ ತಂದು ದೇವಾಲಯದ ವಾರ್ಷಿಕೊತ್ಸವದ ವಿಧಿವಿಧಾನಗಳನ್ನು ಸಂಪ್ರದಾಯಬದ್ಧವಾಗಿ ಪೂಜೆ ಮಾಡಲಾಯಿತು. ಉತ್ಸವದ ಅಂಗವಾಗಿ ಊರಿನವರಿನವರಿಗೆ, ನೆಂಟರಿಷ್ಟರಿಗೆ, ಮಕ್ಕಳಿಗೆ ತೆಂಗಿನಕಾಯಿ ಎಳೆಯುವ ಸ್ಪರ್ಧೆ ನಡೆಯಿತು. ಬಿಳಿಕುಪ್ಪಸದಟ್ಟಿಯನ್ನು ತೊಟ್ಟ ಊರಿನವರು ದೇವರ ನಡೆಗೆ ಬಂದು ಕೊಂಬನ್ನು ಹಿಡಿದು, ಬೊಳಕ್ ಮರದ ಮುಂದೆ ಸಾಲಾಗಿ ನಿಂತು, ದೇವರನ್ನು ಕರೆಯುತ್ತಾ 18 ಬಗೆಯ ಕೊಂಬಾಟ್ ನೃತ್ಯವನ್ನು ಮಾಡಿದರು. ಗ್ರಾಮಸ್ಥರು ಹಾಗೂ ಹರಕೆ ಹೊತ್ತವರು ದೇವರ ನೆಲೆಯಲ್ಲಿ ಭಂಡಾರವನ್ನು ಹಾಕಿ ಶ್ರದ್ಧಾಭಕ್ತಿಯನ್ನು ಮೆರೆದರು. ನೆರೆದಿದ್ದ ಭಕ್ತ ಸಮೂಹಕ್ಕೆ ಅನ್ನ ಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು. (ಚಿತ್ರ, ವರದಿ : ಪುತ್ತರಿರ ಕರುಣ್ ಕಾಳಯ್ಯ)

Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ತಿತಿಮತಿ, NEWS DESK ಸೆ.30: ಡಿಜಿಟಲ್ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಆರ್ಥಿಕ ವಂಚನೆ ಹಾಗೂ ಸೈಬರ್ ಬೆದರಿಕೆಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ತಮ್ಮ…

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*

ಸೆಪ್ಟೆಂಬರ್ 30, 2026

*ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.