Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಕಾರ್ಯಪ್ಪ ಕಾಲೇಜಿನಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ಜಾಗೃತಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಕಾರ್ಯಪ್ಪ ಕಾಲೇಜಿನಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ಜಾಗೃತಿ ಕಾರ್ಯಕ್ರಮ*

ಮಾರ್ಚ್ 4, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.4 NEWS DESK : ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಕಾರದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ‘ಜನಜಾಗೃತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನರು ಮದ್ಯ ಹಾಗೂ ಮಾದಕ ವಸ್ತುಗಳ ದುಶ್ಚಟದಿಂದ ದೂರ ಇರಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳಿಗೆ ಬಲಿಯಾಗಬಾರದು ಎಂದು ತಿಳಿಸಿದರು. ಮದ್ಯ ಹಾಗೂ ಮಾದಕ ವಸ್ತುಗಳಿಗೆ ತುತ್ತಾದಲ್ಲಿ ಮಾನಸಿಕ ಸ್ಥಿಮಿತತೆ ಕಳೆದುಕೊಳ್ಳಬೇಕಾಗುತ್ತದೆ. ಇದರಿಂದ ಕುಟುಂಬದ ನಿರ್ವಹಣೆ ಕಷ್ಟವಾಗಲಿದೆ. ಜೊತೆಗೆ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಅಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ಕಂಡುಬಂದಲ್ಲಿ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ. ಆದ್ದರಿಂದ ಮದ್ಯ ಹಾಗೂ ಮಾದಕ ವಸ್ತುಗಳಿಗೆ ಯಾರೂ ಸಹ ಬಲಿಯಾಗಬಾರದು. ಉತ್ತಮ ಸಮಾಜ ಕಟ್ಟಲು ಎಲ್ಲರೂ ಕೈಜೋಡಿಸಬೇಕಿದೆ ಎಂದು ಕೆ.ಎಸ್.ಸುಂದರರಾಜ್ ಕರೆ ನೀಡಿದರು. ರಾಷ್ಟ್ರದಲ್ಲಿ ಮಾದಕ ವಸ್ತುಗಳಿಗೆ ಹೆಚ್ಚಾಗಿ ಉತ್ತರಪ್ರದೇಶ, ಮಹಾರಾಷ್ಟ್ರ, ಪಂಚಾಬ್ ಹಾಗೆಯೇ ಕರ್ನಾಟಕದಲ್ಲಿಯೂ ಸಹ ಕಂಡು ಬರುತ್ತಾರೆ. ಆದ್ದರಿಂದ ಮಾದಕ ವಸ್ತುಗಳ ಚಟಕ್ಕೆ ದಾಸರಾಗಬಾರದು ಎಂದು ಅವರು ತಿಳಿಸಿದರು. ‘ಗಾಂಜಾ, ಹೈಡ್ರೊ ಗಾಂಜಾ ಹಾಗೂ ಎಂಡಿಎಂಎ ಮತ್ತಿತರ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಣಿಕೆ ಸಂಬಂಧ ಕಳೆದ ಮೂರು ವರ್ಷದಲ್ಲಿ 200 ಪ್ರಕರಣಗಳು ದಾಖಲಾಗಿದ್ದು, 400ಕ್ಕೂ ಹೆಚ್ಚು ಜನರನ್ನು ದಸ್ತಗಿರಿ ಮಾಡಿ ನಿಯಮಾನುಸಾರ ಕ್ರಮಕೈಗೊಳ್ಳಲಾಗಿದೆ ಎಂದು ಸುಂದರ್ ರಾಜ್ ವಿವರಿಸಿದರು.’ ದುಶ್ಚಟಕ್ಕೆ ಯಾರೂ ಸಹ ಬಲಿಯಾಗಬಾರದು. ಭವಿಷ್ಯವನ್ನು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಮಾದಕ ವಸ್ತುಗಳ ಮಾರಾಟ ಕಂಡುಬಂದಲ್ಲಿ 112 ಕ್ಕೆ ಮಾಹಿತಿ ನೀಡಬೇಕಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ಮಾತನಾಡಿ ಯುವಜನರು ಸ್ನೇಹಿತರ ಜೊತೆ ಸೇರಿ ದುಶ್ಚಟಕ್ಕೆ ಬಲಿಯಾಗಬಾರದು. ಕೆಲವೊಂದು ಸಂದರ್ಭದಲ್ಲಿ ಒತ್ತಾಯಪೂರ್ವಕವಾಗಿ ಚಟಕ್ಕೆ ಬಲಿಯಾಗುವಂತೆ ಮಾಡುತ್ತಾರೆ. ಈ ಬಗ್ಗೆ ಎಚ್ಚರವಹಿಸಬೇಕು. ಒಂದು ಬಾರಿ ಚಟಕ್ಕೆ ತುತ್ತಾದಲ್ಲಿ ಬಿಡಿಸಿಕೊಳ್ಳುವುದು ಕಷ್ಟಸಾಧ್ಯ ಎಂದು ಅಭಿಪ್ರಾಯಪಟ್ಟರು. ಮಾದಕ ವಸ್ತುಗಳು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಶ್ವಾಸಕೋಶ, ಹೃದಯ ಸಂಬಂಧಿ ಖಾಯಿಲೆ, ಲಿವರ್ ಹಾಗೂ ಕಿಡ್ನಿ ಸಮಸ್ಯೆಗಳು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗಿ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದರು. 14, 15, 16 ನೇ ವರ್ಷದ ಯುವಜನರು ಚಟಕ್ಕೆ ಬಲಿಯಾಗುವುದು ಹೆಚ್ಚಾಗಿ ಕಂಡು ಬರುತ್ತಿದೆ. ಆದ್ದರಿಂದ ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗಬಾರದು ಕಿವಿಮಾತು ಹೇಳಿದರು. ಸೈಬರ್ ಕ್ರೈಂ ವಿಭಾಗದ ಡಿವೈಎಸ್‍ಪಿ ರವಿ ಅವರು ಮಾತನಾಡಿ ಮದ್ಯ ಹಾಗೂ ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾದಲ್ಲಿ ಕುಟುಂಬದ ನಿರ್ವಹಣೆ ಕಷ್ಟವಾಗಲಿದೆ. ಇದರಿಂದ ಆರ್ಥಿಕ ಪರಿಸ್ಥಿತಿ ಮತ್ತು ಆರೋಗ್ಯ ಕೆಡಲಿದೆ. ಹಾಗೆಯೇ ಚಟಕ್ಕೆ ದಾಸರಾದಲ್ಲಿ ಅತ್ಯಾಚಾರ, ಕಳ್ಳತನ, ಮಾನಸಿಕ ವೇದನೆಗೆ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಡಾ.ಬಿ.ರಾಘವ ಅವರು ಮಾತನಾಡಿ ಸಮಾಜದ ಅಭಿವೃದ್ಧಿಗೆ ಯುವಜನರ ಪಾತ್ರ ದೊಡ್ಡದಿದೆ. ಆದ್ದರಿಂದ ಕೆಟ್ಟ ಚಟಗಳಿಗೆ ಒಳಗಾಗದೆ ಸಮಾಜದ ಅಭಿವೃದ್ಧಿಗೆ ಯುವಜನರು ಕೈಜೋಡಿಸಬೇಕು ಎಂದರು. ಸುಸ್ಥಿರ ಬದುಕಿನಿಂದ ಸುಂದರ ಬದುಕು ಕಟ್ಟಿಕೊಳ್ಳಬೇಕು. ಆರೋಗ್ಯಯುತ ಜೀವನ ನಡೆಸಬೇಕು. ಯಾವುದೇ ಕಾರಣಕ್ಕೂ ದಾರಿ ತಪ್ಪದೆ ಜವಾಬ್ದಾರಿಯುತ ಪ್ರಜೆಯಾಗಿ ನಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನೋವೈದ್ಯರಾದ ಡಾ.ಡೆವಿನ್ ಕರ್ಕಡ ಅವರು ಮಾತನಾಡಿ ಮನಸ್ಸಿನ ಚಂಚಲತೆಗೆ ಅವಕಾಶ ಮಾಡದೆ ಒಳ್ಳೆಯ ಪುಸ್ತಕ ಓದುವುದು, ಸಂಗೀತ ಕೇಳುವುದು ಜೊತೆಗೆ ದುಡಿಮೆಯಲ್ಲಿ ತೊಡಗಿಸಿಕೊಳ್ಳುವುದು ಅತೀ ಮುಖ್ಯವಾಗಿದೆ. ಇದರಿಂದ ಬೇರೇಡೆಗೆ ಮನಸ್ಸು ಸೆಳೆಯುವುದಿಲ್ಲ. ಆದ್ದರಿಂದ ಒಳ್ಳೆಯ ಕೆಲಸ ಮಾಡಿದಲ್ಲಿ ಉತ್ತಮ ಬದುಕು ನಡೆಸಬಹುದು ಎಂದರು. ಜೀವನದಲ್ಲಿ ಒಂದಲ್ಲ ಒಂದು ರೀತಿ ದೌರ್ಬಲ್ಯಕ್ಕೆ ಒಳಗಾಗಿರುತ್ತಾರೆ. ದೌರ್ಬಲ್ಯ ಬಳಸಿಕೊಂಡು ಹಾಳು ಮಾಡಲು ಹೋಗುತ್ತಾರೆ. ಆದ್ದರಿಂದ ಯಾವುದೇ ಚಟಕ್ಕೆ ಬಲಿಯಾಗದೆ ಮುನ್ನೆಚ್ಚರವಹಿಸಬೇಕು. ಪ್ರತಿಯೊಬ್ಬರಲ್ಲಿಯೂ ಗುರಿ ಇರಬೇಕು. ಅದನ್ನು ಸಾಧಿಸಬೇಕು ಎಂದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಅವರು ಮಾತನಾಡಿದರು. ಕಲಾವಿದ ಇ.ರಾಜು ಮತ್ತು ತಂಡದವರು ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಗೀತೆ ಹಾಡಿದರು. ಹಾಗೆಯೇ ಈ ಕುರಿತು ಬೀದಿನಾಟಕ ಪ್ರದರ್ಶಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿಗಳಾದ ಡಾ.ಶೈಲಾಶ್ರೀ, ಅಲೋಕ್ ವಿಜಯ್, ಇತರರು ಇದ್ದರು. ವಿದ್ಯಾರ್ಥಿನಿ ಸಪ್ನಾ ಮತ್ತು ತಂಡದವರು ಪ್ರಾರ್ಥಿಸಿದರು, ನಿರೂಪಿಸಿದರು, ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.