Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
  • *ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*
  • *ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*
  • *ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*
  • *ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್ : ಆನ್‍ಲೈನ್ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್ : ಆನ್‍ಲೈನ್ ಅರ್ಜಿ ಆಹ್ವಾನ*

ಮಾರ್ಚ್ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.3 NEWS DESK  : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿ 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ಬ್ಯಾಂಕ್ ಸ್ಟೇಟ್‍ಮೆಂಟ್‍ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ  ಬಸ್‍ಪಾಸ್ ಪಡೆಯಲು ಅವಕಾಶವಿದೆ. ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ. ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‍ಗಳನ್ನು ನೀಡಲಾಗುವುದು. ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‍ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‍ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‍ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.30: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವಿರಾಜಪೇಟೆ ಹಾಗೂ ಪೊನ್ನಂಪೇಟೆ ಘಟಕಗಳು ಮತ್ತು…

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*

ಸೆಪ್ಟೆಂಬರ್ 30, 2026

*ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*

ಸೆಪ್ಟೆಂಬರ್ 30, 2026

*ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 30, 2026

*ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.