Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಸಾರ್ವಜನಿಕ ದಾಖಲೆಗಳ ನಿರ್ವಹಣೆ ಕುರಿತು ಕಾರ್ಯಾಗಾರ : ಸರ್ಕಾರಿ ಕಡತಗಳ ನಿರ್ವಹಣೆ ಅಗತ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಸಾರ್ವಜನಿಕ ದಾಖಲೆಗಳ ನಿರ್ವಹಣೆ ಕುರಿತು ಕಾರ್ಯಾಗಾರ : ಸರ್ಕಾರಿ ಕಡತಗಳ ನಿರ್ವಹಣೆ ಅಗತ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ

ಮಾರ್ಚ್ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.4 NEWS DESK : ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ಮೈಸೂರು ವಿಭಾಗಿಯ ಕಚೇರಿ ವತಿಯಿಂದ ಕೊಡಗು ಜಿಲ್ಲಾಧಿಕಾರಿಯವರ ಕಚೇರಿ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ದಾಖಲೆಗಳ ಅಧಿನಿಯಮ-2010 ಮತ್ತು ನಿಯಮಗಳು-2013 ಹಾಗೂ ದಾಖಲೆಗಳ ನಿರ್ವಹಣೆ ಕುರಿತು ಕಾರ್ಯಾಗಾರ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಕಾಲ, ಆರ್‍ಟಿಐ, ಸೇವಾಸಿಂಧು ಯೋಜನೆಗಳಿಂದ ಸಾರ್ವಜನಿಕರಿಗೆ ಸರ್ಕಾರಿ ಇಲಾಖೆಗಳ ಕಡತ/ ದಾಖಲೆಗಳನ್ನು ಸುಲಭವಾಗಿ ಪಡೆಯಲು ಮುಕ್ತ ಅವಕಾಶವಿದೆ. ಇಂತಹ ಸಂದರ್ಭದಲ್ಲಿ ದೈನಂದಿನ ಕಚೇರಿ ಕಡತಗಳ ನಿರ್ವಹಣೆ ಅಗತ್ಯವಾಗಿದೆ. ಸರ್ಕಾರಿ ಕಡತಗಳನ್ನು ಸಾರ್ವಜನಿಕ ಉದ್ದೇಶದಿಂದ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು. ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕರಾದ ಡಾ.ಗವಿಸಿದ್ದಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ನಾಡು ನುಡಿಗೆ ಸಂಬಂಧಿಸಿದ ಐತಿಹಾಸಿಕ ಮಹತ್ವದ ದಾಖಲೆ ಸಂಗ್ರಹಿಸಿ ಸಂರಕ್ಷಣೆ ಮಾಡುತ್ತ ಬರುತ್ತಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಯ ಕಚೇರಿಗಳ ಕಡತಗಳ ನಿರ್ವಹಣೆ ಮತ್ತು ಸಂರಕ್ಷಣೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಸಾರ್ವಜನಿಕ ದಾಖಲೆಗಳ ಅಧಿನಿಯಮ-ಜಾರಿಗೊಳಿಸಲಾಗಿದೆ. ಈ ಅಧಿನಿಯಮ ಮತ್ತು ನಿಯಮವನ್ನು ಅನು?Á್ಠನಗೊಳಿಸುವ ಉದ್ದೇಶದಿಂದ ರಾಜ್ಯ ಪತ್ರಾಗಾರ ಇಲಾಖೆ ಇಂತಹ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಶಿಬಿರಾರ್ಥಿಗಳು ತಮ್ಮ ದೈನಂದಿನ ಕರ್ತವ್ಯ ನಿರ್ವಹಣೆಯಲ್ಲಿ ಅಧಿನಿಯಮ ಮತ್ತು ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು. ಉಪ ನಿರ್ದೇಶಕರಾದ ಡಾ.ನೆಲ್ಕುದ್ರಿ ಸದಾನಂದಪ್ಪ ಮಾತನಾಡಿ ಆರ್.ಟಿ.ಐ., ಸಕಾಲ ಯೋಜನೆಗಳ ನಿರ್ವಹಣೆಯಲ್ಲಿ ಎದುರಿಸುವ ಸವಾಲು ಮತ್ತು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಇಂತಹ ತರಬೇತಿ ಕಾರ್ಯಕ್ರಮಗಳ ಅಗತ್ಯ ಹಾಗೂ ಅನಿವಾರ್ಯವಾಗಿದೆ ಎಂದರು. ಸಾರ್ವಜನಿಕರಿಗೆ ಹಾಗೂ ಮುಂದಿನ ಪೀಳಿಗೆಗೆ ಅವಶ್ಯವೆನಿಸುವ ದಾಖಲೆಗಳನ್ನು ಸಂರಕ್ಷಣೆ ಮಾಡುವುದು ಸರ್ಕಾರಿ ನೌಕರರ ಕರ್ತವ್ಯವಾಗಿರುವುದರಿಂದ ಹಾಗೂ ಕಡತಗಳ ನಿರ್ವಹಣೆಗಾಗಿ ಸಾರ್ವಜನಿಕ ದಾಖಲೆಗಳ ಅಧಿನಿಯಮ ಜಾರಿಗೊಳಿಸಿರುವುದರಿಂದ ದೈನಂದಿನ ಕಚೇರಿ ಕಡತಗಳ ನಿರ್ವಹಣೆಯಲ್ಲಿ ನಿಯಮಗಳನ್ನು ಪಾಲಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಅವರು ವಿವರಿಸಿದರು. ಹಿರಿಯ ಸಹಾಯಕ ನಿರ್ದೇಶಕ ಹೆಚ್.ಎಲ್.ಮಂಜುನಾಥ ಕಾರ್ಯಕ್ರಮದ ಆಯೋಜನೆಯ ಉದ್ದೇಶ ಹಾಗೂ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದ ಆಶಯ ಕುರಿತು ಮಾತನಾಡಿದರು. ರಾಜ್ಯ ಪತ್ರಾಗಾರ ಇಲಾಖೆ ಐತಿಹಾಸಿಕ ಮಹತ್ವದ ದಾಖಲೆಗಳ ನಿರ್ವಹಣೆ ಮಾಡುತ್ತಿದೆ. ಪತ್ರಾಗಾರ ಸಂಗ್ರಹದಲ್ಲಿರುವ ದಾಖಲೆಗಳು ಸಾರ್ವಜನಿಕರಿಗೆ, ಸರ್ಕಾರಿ ಇಲಾಖೆಯವರಿಗೆ ಹಾಗೂ ಸಂಶೋಧಕರುಗಳಿಗೆ ಉಪಯೋಗವಾಗುತ್ತಿದೆ. ಇಂದಿನ ಕಡತಗಳು ಮುಂದಿನ ಪೀಳಿಗೆಗೆ ಹಾಗೂ ಚರಿತ್ರೆಯ ಬರವಣಿಗೆಗೆ ಐತಿಹಾಸಿಕ ದಾಖಲೆಗಳಾಗಿ ಬಳಕೆಯಾಗುತ್ತವೆ. ಹಾಗಾಗಿ ನಾವು ಪ್ರತಿದಿನ ಆರಂಭಿಸುವ ಕಡತಗಳು ಮುಂದಿನ ತಲೆಮಾರಿಗೆ ಉಪಯುಕ್ತವಾಗಲಿವೆ. ಆ ಕಾರಣಕ್ಕಾಗಿ ಅವುಗಳ ನಿರ್ವಹಣೆಯ ಉದ್ದೇಶದಿಂದ ಈ ಕಾರ್ಯಾಗಾರ ಆಯೋಜಿಸಿದ್ದು ಇದರ ಸದುಪಯೋಗವನ್ನು ತಾವೆಲ್ಲ ಪಡೆಯಬೇಕು ಎಂದು ಕೋರಿದರು. ಕೊಡಗು ಜಿಲ್ಲೆಯ ವಿವಿಧ ಇಲಾಖೆಗಳ 80ಕ್ಕೂ ಹೆಚ್ಚು ಅಧಿಕಾರಿ/ನೌಕರರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ರಾಜ್ಯ ಪತ್ರಾಗಾರ ಇಲಾಖೆಯ ಅಧಿಕಾರಿಗಳು ವಿವಿಧ ವಿಷಯಗಳ ಕುರಿತು ತರಬೇತಿ ನೀಡಿದರು. ನಿರ್ದೇಶಕರಾದ ಡಾ. ಗವಿಸಿದ್ದಯ್ಯ ಅವರು ಸಾರ್ವಜನಿಕ ದಾಖಲೆಗಳ ಅಧಿನಿಯಮ ಮತ್ತು ದಾಖಲೆಗಳ ಪಟ್ಟಿಸೂಚಿ ತಯಾರಿಕೆ ಬಗ್ಗೆ ಮಾಹಿತಿ ನೀಡಿದರು. ಪತ್ರಾಗಾರ ಇಲಾಖೆ ಉಪ ನಿರ್ದೇಶಕರಾದ ಡಾ.ನೆಲ್ಕುದ್ರಿ ಸದಾನಂದ ಅವರು ದಾಖಲೆಗಳ ವರ್ಗೀಕರಣ ಮತ್ತು ಅವಧಿ ಮೀರಿದ ಕಡತಗಳ ನಾಶಪಡಿಸುವಿಕೆಯ ನಿಯಮಗಳ ಕುರಿತು ವಿವರಿಸಿದರು. ಪತ್ರಾಗಾರ ಇಲಾಖೆಹಿರಿಯ ಸಹಾಯಕ ನಿರ್ದೇಶಕ ಹೆಚ್.ಎಲ್.ಮಂಜುನಾಥ ದಾಖಲೆಗಳ ಸಂರಕ್ಷಣೆಯಲ್ಲಿ ದಾಖಲೆಗಳ ಡಿಜಿಟಲೀಕರಣ ಮತ್ತು ಟ್ಯ್ಯೂ ಲ್ಯಾಮಿನೇಷನ್, ತಾಂತ್ರಿಕಾಧಿಕಾರಿ ಕೆ.ನಾರಾಯಣ ಬಾಬು ಅವರು ದಾಖಲೆಗಳ ಸಂರಕ್ಷಣೆಯಲ್ಲಿ ಸೂಕ್ಷ್ಮ ಚಿತ್ರೀಕರಣ ಹಾಗೂ ದಾಖಲೆ ಸಹಾಯಕರಾದ ಕೃಷ್ಣ ಪ್ರಸಾದ್ ಅವರು ದಾಖಲೆ ಕೊಠಡಿಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಅ.22 NEWS DESK : ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 33ನೇ ವರ್ಷದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.