Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ- ಸೋಮವಾರಪೇಟೆ ಜನತೆಯ ದಶಕಗಳ ಕನಸು ನನಸು : ಶಾಸಕ ಡಾ.ಮಂತರ್ ಗೌಡ ಅಭಿನಂದನಾರ್ಹರು
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ- ಸೋಮವಾರಪೇಟೆ ಜನತೆಯ ದಶಕಗಳ ಕನಸು ನನಸು : ಶಾಸಕ ಡಾ.ಮಂತರ್ ಗೌಡ ಅಭಿನಂದನಾರ್ಹರು

ಮಾರ್ಚ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಮಾ.8 : ಮಡಿಕೇರಿ- ಸೋಮವಾರಪೇಟೆ ಜನತೆಯ ದಶಕಗಳ ಕನಸು ನನಸಾಗಿದೆ. ಮಡಿಕೇರಿ- ದೋಣಿಗಲ್ ನಡುವೆ ಅಂತರರಾಷ್ಟಿçÃಯ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ 900 ಕೋಟಿ ರೂ. ಯೋಜನೆಯನ್ನು ರಾಜ್ಯ ಬಜೆಟ್ ನಲ್ಲಿ ಘೋಷಿಸಲಾಗಿದೆ. ಇದಕ್ಕೆ ಕಾರಣಕರ್ತರಾದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಭಿನಂದನಾರ್ಹರು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಬಗರ್ ಹುಕುಂ ತಾಲ್ಲೂಕು ಸಮಿತಿ ಸದಸ್ಯ ಜೆ.ಎಲ್.ಜನಾರ್ಧನ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನರ ಹಲವು ವರ್ಷಗಳ ಬೇಡಿಕೆಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸಿದೆ. ಮಡಿಕೇರಿ – ದೋಣಿಗಲ್ -ಮಾದಾಪುರ – ಸೋಮವಾರಪೇಟೆ – ಶನಿವಾರಸಂತೆ – ಕೊಡ್ಲಿಪೇಟೆಯ 95 ಕಿ.ಮೀ ಅಂತರದ ಮಾರ್ಗ ಸರ್ವಋತು ರಸ್ತೆಯಾಗಿ ಅಭಿವೃದ್ಧಿಯಾಗಲಿದೆ. ಇದು ಡಾ.ಮಂತರ್ ಗೌಡ ಅವರ ಪ್ರಯತ್ನದ ಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರ ತಾಲ್ಲೂಕು ಆಸ್ಪತ್ರೆಯ ನವೀಕರಣ, ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ 12 ಬುಡಕಟ್ಟು ಸಮುದಾಯಗಳ 47,859 ಕುಟುಂಬಗಳಿಗೆ 120 ಕೋಟಿ ರೂ. ವೆಚ್ಚದಲ್ಲಿ ಪೌಷ್ಟಿಕ ಆಹಾರದ ಕಿಟ್ ಗಳ ವಿತರಣೆ, ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಿಂದ 7ನೇ ತರಗತಿಯನ್ನು ಪ್ರಾರಂಭಿಸಲಾಗುವುದು. ಕೊಡಗು ಜಿಲ್ಲೆಯ ಐದು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ದರ್ಜೆಗೇರಿಸಲಾಗುವುದು. ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಸೋಲಿಗ, ಹಲಸರು, ಜೇನು ಕುರುಬ, ಗೌಡಲು, ಸಿದ್ಧಿ, ಕುಡಿಯ, ಮಲೆಕುಡಿಯ, ಕಾಡುಕುರುಬ, ಇರುಳಿಗ, ಕೊರಗ, ಬೆಟ್ಟಕುರುಬ, ಯರವ, ಪಣಿಯನ್ ಇತ್ಯಾದಿ ಪರಿಶಿಷ್ಟ ಪಂಗಡದ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಸರ್ಕಾರ ಘೋಷಿಸಿದೆ. ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ 13 ಬುಡಕಟ್ಟು ಜನಾಂಗಗಳಾದ ಜೇನು ಕುರುಬ, ಇರುಳಿಗ, ಕೊರಗ, ಸೋಲಿಗ, ಯರವ, ಪಣಿಯನ್, ಹಲಸರು, ಗೌಡಲು, ಸಿದ್ಧಿ, ಬೆಟ್ಟಕುರುಬ, ಕಾಡುಕುರುಬ, ಕುಡಿಯ ಮತ್ತು ಮಲೆಕುಡಿಯ ಈ ಜನಾಂಗಗಳಿಗೆ ರಾಜ್ಯ ಸಿವಿಲ್ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿಯನ್ನು ಕೈಗೊಳ್ಳಲಿದೆ.
ಭಾರೀ ಮಳೆಯಿಂದಾಗಿ ಹಾನಿ ಒಳಗಾಗಿರುವ ರಸ್ತೆ ಮತ್ತು ಸೇತುವೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ ಸರ್ಕಾರ 3 ಕೋಟಿ ರೂ. ಒದಗಿಸಿದೆ. ಮಾನವ-ಆನೆ ಸಂಘರ್ಷವನ್ನು ತಡೆಗಟ್ಟಲು 2015 ರಿಂದ ಇಲ್ಲಿಯವರೆಗೆ 392 ಕಿ.ಮೀ. ರೈಲ್ವೆ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದೆ. ಇನ್ನೂ 150 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳಿಗಾಗಿ 2025-26ನೇ ಸಾಲಿನಲ್ಲಿ 60 ಕೋಟಿ ರೂ. ಮೀಸಲಿರಿಸಲಾಗಿದೆ. ಇದು ವರದಾನವಾಗಿರುವ ದಾಖಲೆಯ ಬಜೆಟ್ ಆಗಿದ್ದು, ಇದೆಲ್ಲವೂ ಕೊಡಗು ಜಿಲ್ಲೆಯ ಶಾಸಕದ್ವಯರ ನಿರಂತರ ಪ್ರಯತ್ನದ ಫಲವಾಗಿದೆ. ಜನಪರ ಕಾಳಜಿಯ ಶಾಸಕರುಗಳಿಂದ ಜಿಲ್ಲೆಯ ಅಭಿವೃದ್ಧಿ ವೇಗವನ್ನು ಪಡೆದುಕೊಳ್ಳುತ್ತಿದ್ದು, ರಾಜ್ಯ ಸರ್ಕಾರ ಕೂಡ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಜೆ.ಎಲ್.ಜನಾರ್ಧನ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.